Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*
  • *ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*
  • *2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*
  • *ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*
  • *ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*
  • *ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*
  • *ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
  • *ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*
  • *ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*
  • *ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
SM Fitness Advertisement

ಮಡಿಕೇರಿ, NEWS DESK ಅ. 9: ಸಮಸ್ತ ಮೊಬೈಲ್ ಆ್ಯಪ್‌ನಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವುದು, ಸೂಕ್ತ ತರಬೇತಿ ನೀಡುವುದು ಹಾಗೂ ಪ್ರೋತ್ಸಾಹಧನ ಒದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್‌ಗೆ ಸಂಯೋಜಿತವಾಗಿರುವ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಆಶಾ ಕಾರ್ಯಕರ್ತೆಯರು, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಸಮಸ್ತ ಆ್ಯಪ್ ಮೂಲಕ ಕಾರ್ಯನಿರ್ವಹಿಸುವುದನ್ನು ಕಡ್ಡಾಯಗೊಳಿಸಲಾಗಿದ್ದರೂ, ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಗುಣಮಟ್ಟದ ಮೊಬೈಲ್ ಸಾಧನಗಳನ್ನು ಇಲಾಖೆ ಉಚಿತವಾಗಿ ಒದಗಿಸಿಲ್ಲ. ಅಲ್ಲದೆ, ಸ್ವಂತ ಮೊಬೈಲ್ ಬಳಕೆಗೆ ನೀಡಲಾಗುತ್ತಿದ್ದ ಮಾಸಿಕ 280 ರೂ. ಬಾಡಿಗೆಯನ್ನೂ ಸ್ಥಗಿತಗೊಳಿಸಲಾಗಿದೆ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು. ಆ್ಯಪ್‌ನಲ್ಲಿ ಮಾಹಿತಿ ದಾಖಲಿಸುವುದಕ್ಕೆ ಸೂಕ್ತ ಪ್ರೋತ್ಸಾಹಧನ ನಿಗದಿಪಡಿಸುವುದರ ಜೊತೆಗೆ ಅಗತ್ಯ ತಾಂತ್ರಿಕ ತರಬೇತಿ ನೀಡಬೇಕು ಎಂದು ಆಗ್ರಹಿಸಿದರು.

ಆಗಸ್ಟ್ ತಿಂಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹಧನ ನೀಡುವವರೆಗೆ ಆಶಾ ಕಾರ್ಯಕರ್ತೆಯರ ಮೇಲೆ ಒತ್ತಡ ಹೇರದಂತೆ ಕ್ಷೇತ್ರಮಟ್ಟದ ಅಧಿಕಾರಿಗಳಿಗೆ ಸೂಚಿಸಲು ತಿಳಿಸಲಾಗಿತ್ತು. ಆದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೆ ಕೆಲಸದ ಒತ್ತಡ ಮುಂದುವರಿದಿದೆ ಎಂದು ಸಂಘದ ಪದಾಧಿಕಾರಿಗಳು ಆರೋಪಿಸಿದರು.

ಕಳೆದ ಒಂದು ವರ್ಷದಿಂದ ಗೌರವಧನ ಮತ್ತು ಪ್ರೋತ್ಸಾಹಧನ ನಿಗದಿತ ಸಮಯಕ್ಕೆ ಪಾವತಿಯಾಗುತ್ತಿಲ್ಲ. ಇದರಿಂದ ಆಶಾ ಕಾರ್ಯಕರ್ತೆಯರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಕಳೆದ ಒಂಬತ್ತು ವರ್ಷಗಳಲ್ಲಿ ಗೌರವಧನ ಕೇವಲ 1,500 ರೂ. ಹೆಚ್ಚಳವಾಗಿದ್ದು, ಬೆಲೆ ಏರಿಕೆಗೆ ಅನುಗುಣವಾಗಿ ಗೌರವಧನ ಹೆಚ್ಚಿಸಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಮಾಸಿಕ 15 ಸಾವಿರ ರೂ. ಗೌರವಧನಕ್ಕೆ ಆಗ್ರಹ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಗೌರವಧನ ಹಾಗೂ ಪ್ರೋತ್ಸಾಹಧನ ಸೇರಿ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 15,000 ರೂ. ನೀಡಬೇಕು. ಉತ್ತಮ ಗುಣಮಟ್ಟದ ಮೊಬೈಲ್‌ಗಳನ್ನು ಒದಗಿಸಿ ಸಮಸ್ತ ಆ್ಯಪ್‌ನಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು. ಕೊಡಗು ಜಿಲ್ಲೆಯ ಎಲ್ಲ ಬಾಕಿ ಪ್ರೋತ್ಸಾಹಧನವನ್ನು ಬಿಡುಗಡೆ ಮಾಡಬೇಕು ಹಾಗೂ ಆರ್‌ಸಿಎಚ್ ಪೋರ್ಟಲ್ ಮೂಲಕ ಪ್ರೋತ್ಸಾಹಧನ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.

ಟಿಬಿ, ಟಿಬಿಐ, ಎನ್‌ಸಿಡಿ ಸೇರಿದಂತೆ ವಿವಿಧ ಘಟಕಗಳ ಬಾಕಿ ಪ್ರೋತ್ಸಾಹಧನವನ್ನು ಪಾವತಿಸಬೇಕು. ಹತ್ತು ವರ್ಷ ಸೇವೆ ಸಲ್ಲಿಸಿ ಕೆಲಸ ತೊರೆದ ಅಥವಾ ನಿವೃತ್ತರಾದ ಆಶಾ ಕಾರ್ಯಕರ್ತೆಯರಿಗೆ ನಿಯಮಾನುಸಾರ ಇಡಿಗಂಟು ನೀಡಬೇಕು ಎಂಬ ಬೇಡಿಕೆಗಳನ್ನೂ ಮುಂದಿಟ್ಟರು.

ಇದಲ್ಲದೆ, ಆಶಾ ಕಾರ್ಯಕರ್ತೆಯರನ್ನು ಕಫ ಸಂಗ್ರಹಿಸಿ ತರುವಂತೆ ಒತ್ತಾಯಿಸುವುದನ್ನು ತಡೆಯಬೇಕು. ಜಿಪಿಎಸ್ ಲೊಕೇಶನ್ ದಾಖಲಿಸುವಂತೆ ಒತ್ತಡ ಹೇರಬಾರದು. ಪ್ರತಿ ತಿಂಗಳು ಪಾವತಿ ವಿವರಗಳ ಪ್ರತಿಗಳನ್ನು ಒದಗಿಸಬೇಕು ಹಾಗೂ ಗೌರವಧನ ಮತ್ತು ಪ್ರೋತ್ಸಾಹಧನದ ಸಂಪೂರ್ಣ ವಿವರಗಳನ್ನು ಸಂಘಕ್ಕೆ ನೀಡಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಉಪಾಧ್ಯಕ್ಷೆ ನಾಗಮಣಿ, ರಾಜ್ಯ ಉಪಾಧ್ಯಕ್ಷೆ ಉಮಾದೇವಿ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಫೋಟೋ ಶೀರ್ಷಿಕೆ: ಸಮಸ್ತ ಆ್ಯಪ್‌ನ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಡಿಕೇರಿಯ ಜಿಲ್ಲಾಧಿಕಾರಿಗಳ ಕಚೇರಿ ಎದುರು ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

*ಅ.11ರಿಂದ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ಕೊಡವ ತೋಕ್‌ಗೆ ಸಾಂವಿಧಾನಿಕ ರಕ್ಷಣೆ ನೀಡಲು ಆಗ್ರಹ: ಸಿಎನ್‌ಸಿ ಸತ್ಯಾಗ್ರಹ*

ಅಕ್ಟೋಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 9: ಕೊಡವರ ಸಾಂಪ್ರದಾಯಿಕ ತೋಕ್‌ಗೆ (ಬಂದೂಕು) ಸಾಂವಿಧಾನಿಕ ಹಾಗೂ ಶಾಸನಬದ್ಧ ರಕ್ಷಣೆ ನೀಡಬೇಕು ಎಂದು…

*2027ರ SSLC, ದ್ವಿತೀಯ PUC ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ: ಫೆಬ್ರವರಿ 27ರಿಂದ ಪಿಯುಸಿ, ಮಾರ್ಚ್ 22ರಿಂದ SSLC ಪರೀಕ್ಷೆ ಆರಂಭ*

ಅಕ್ಟೋಬರ್ 9, 2026

*ರಸ್ತೆ ದಾಟಿದ ಹುಲಿ: ಸಾರ್ವಜನಿಕರಲ್ಲಿ ಆತಂಕ*

ಅಕ್ಟೋಬರ್ 9, 2026

*ಮಡಿಕೇರಿ ದಸರಾ: ವಿವಿಧ ಅಲಂಕಾರ ಸ್ಪರ್ಧೆ ಆಯೋಜನೆ*

ಅಕ್ಟೋಬರ್ 9, 2026

*ಕಾಂಗ್ರೆಸ್ ಸಂಘಟನಾ ಸೃಜನ್ ಅಭಿಯಾನಕ್ಕೆ ವೇಗ: ಮತ ಉಳಿಸಿ, ದೇಶ ಉಳಿಸಿ ಹೋರಾಟ; ಎಸ್‌ಐಆರ್ ಹೆಸರಿನಲ್ಲಿ ಅರ್ಹ ಮತದಾರರನ್ನು ಕೈಬಿಡುವ ಪ್ರಯತ್ನಕ್ಕೆ ಕಾಂಗ್ರೆಸ್ ಅಸಮಾಧಾನ*

ಅಕ್ಟೋಬರ್ 9, 2026

*ಸಮಸ್ತ ಆ್ಯಪ್ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

ಅಕ್ಟೋಬರ್ 9, 2026

*ಕೊಡಗು ಸುರಕ್ಷ ಆಂದೋಲನ ಸಮಿತಿ ಜಾಗೃತಿ ಜಾಥಾ ಸಮಾರೋಪ; ಅಕ್ರಮ ವಲಸಿಗರನ್ನು ಪತ್ತೆಹಚ್ಚಿ ಗಡಿಪಾರು ಮಾಡಲು ಆಗ್ರಹ*

ಅಕ್ಟೋಬರ್ 9, 2026

*ಹಳ್ಳದಿಣ್ಣೆ ಗ್ರಾಮದ ರಸ್ತೆ ಅಭಿವೃದ್ಧಿಗೆ ₹25 ಲಕ್ಷ ಅನುದಾನ*

ಅಕ್ಟೋಬರ್ 9, 2026

*ಅ.13 ಮತ್ತು 14ರಂದು ಕಾಫಿ ದಸರಾ ಸಂಭ್ರಮ: 50 ಮಳಿಗೆಗಳಲ್ಲಿ ಕಾಫಿ ಘಮ, 13 ಸಾಧಕರಿಗೆ ಸನ್ಮಾನ*

ಅಕ್ಟೋಬರ್ 9, 2026

*ಪ್ರಜಾಪ್ರಭುತ್ವದ ಆಶಯ ಅರಿಯಲು ಯುವಸಂಸತ್ತು ಸಹಕಾರಿ: ಪ್ರೊ. ಅಶೋಕ ಸಂಗಪ್ಪ ಆಲೂರ*

ಅಕ್ಟೋಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.