ನಾಪೋಕ್ಲು ಅ.9 NEWS DESK : ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಹೋಬಳಿಯ ನಾಪೋಕ್ಲು ಗ್ರಾಮಕ್ಕೆ ಶಾಸಕ ಹಾಗೂ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ವಿವಿಧ ಅಭಿವೃದ್ಧಿ ಕಾಮಗಾರಿಗಳ ಹಿನ್ನೆಲೆಯಲ್ಲಿ ಭೇಟಿ ನೀಡಿದರು. ಈ ಸಂದರ್ಭದಲ್ಲಿ ನಾಪೋಕ್ಲು ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ರೂ.1 ಕೋಟಿ 75 ಲಕ್ಷ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಶಾಸಕರು, ಶಿಕ್ಷಿತ ಸಮಾಜ ಯಾವಾಗಲೂ ಸದೃಢವಾಗಿರುತ್ತದೆ. ಶಿಕ್ಷಣಕ್ಕೆ ನಮ್ಮ ಸರ್ಕಾರ ಪ್ರಮುಖ ಆದ್ಯತೆ ನೀಡುತ್ತಿದ್ದು, ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅವರ ಬೇಡಿಕೆಯಂತೆ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಯಶಸ್ವಿಯಾಗಿ ಪೂರ್ಣಗೊಂಡು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಆಲಿ, ವಲಯ ಅಧ್ಯಕ್ಷ ಕುಶಾಲಪ್ಪ, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮನ್, ಕೆಡಿಪಿ ಸದಸ್ಯ ಬಾಚಮಾಂಡ ಲವ ಚಿಣ್ಣಪ್ಪ, ಕಕ್ಕಬೆ ವಲಯ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಪಂಚಾಯಿತಿ ಮಾಜಿ ಅಧ್ಯಕ್ಷೆ ವನಜಾಕ್ಷಿ, ಸದಸ್ಯ ಅರುಣ್ ಬೇಬ, ಮಾಜಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಪಕ್ಷದ ಮುಖಂಡರಾದ ತಮ್ಮಯ್ಯ, ಎಡಪಾಲ ಶಾಫಿ, ಆಪ್ರು ರವೀಂದ್ರ, ಹ್ಯಾರೀಶ್, ಕಾಲೇಜಿನ ಉಪಾಧ್ಯಕ್ಷ ಉದಯ ಶಂಕರ್, ಪ್ರಾಂಶುಪಾಲ ವಿಶಾಲ, ಶಾಂತಿ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

















