ಮಡಿಕೇರಿ, NEWS DESK ಅ.11: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಕೊಡಗಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ 2026-27ನೇ ಸಾಲಿನ ಗೌರಮ್ಮ ದತ್ತಿ ಸಣ್ಣ ಕಥೆಗಳ ಸ್ಪರ್ಧೆಯಲ್ಲಿ ಮಡಿಕೇರಿಯ ಸಂತ ಜೋಸೆಫ್ ಕಾನ್ವೆಂಟ್ ಮತ್ತು ಸಂಯುಕ್ತ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಆಕಾಂಕ್ಷ ಎಂ.ಎಸ್. ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಜಿಲ್ಲೆಯ 18 ಪ್ರೌಢಶಾಲೆಗಳ 60 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ವಿದ್ಯಾರ್ಥಿಗಳು ರಚಿಸಿದ ಕಥೆಗಳನ್ನು ತೀರ್ಪುಗಾರರು ಪರಿಶೀಲಿಸಿ ವಿಜೇತರನ್ನು ಆಯ್ಕೆ ಮಾಡಿದ್ದಾರೆ.
ಮಡಿಕೇರಿಯ ಎ.ಎಲ್.ಜಿ. ಕ್ರೆಸೆಂಟ್ ಶಾಲೆಯ ವಿದ್ಯಾರ್ಥಿನಿ ಕುಮಾರಿ ಗುರುಪ್ರಿಯ ದ್ವಿತೀಯ ಬಹುಮಾನ ಗಳಿಸಿದರೆ, ಹಾಕತ್ತೂರಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಯಶಸ್ವಿ ಪಿ.ಎಸ್. ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.
ಮುಂದೆ ನಡೆಯಲಿರುವ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















