ಮಡಿಕೇರಿ ಅ.11 NEWS DESK : ಮಡಿಕೇರಿ ನಗರದಲ್ಲಿ ನಾಲ್ಕು ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ಚಾಲನೆ ನೀಡುವುದು ವಿಶೇಷವಾಗಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ ಹೇಳಿದರು. ನಾಲ್ಕು ಶಕ್ತಿ ದೇವತೆಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಡಿಕೇರಿ ದಸರಾಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಚಾಲನೆ ನೀಡಿ ಮಾತನಾಡಿದರು. ಈ ಬಾರಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಮುಂದಿನ ವರ್ಷವಾದರೂ ಉತ್ತಮ ಮಳೆಯಾಗಿ ನಾಡಿಗೆ ಸಮೃದ್ಧಿ ಲಭಿಸಲಿ ಎಂದು ಸಚಿವರು ಆಶಿಸಿದರು.


















