Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಂಜಿಲ ಸರ್ಕಾರಿ ಶಾಲೆಗೆ ಹೆಮ್ಮೆಯ ದುಬೈ ಕನ್ನಡ ಸಂಘದಿಂದ ಆಟೋಪಕರಣ, ಪೀಠೋಪಕರಣಗಳ ಕೊಡುಗೆ; ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಹಸ್ತಾಂತರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಂಜಿಲ ಸರ್ಕಾರಿ ಶಾಲೆಗೆ ಹೆಮ್ಮೆಯ ದುಬೈ ಕನ್ನಡ ಸಂಘದಿಂದ ಆಟೋಪಕರಣ, ಪೀಠೋಪಕರಣಗಳ ಕೊಡುಗೆ; ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಹಸ್ತಾಂತರ

ಅಕ್ಟೋಬರ್ 12, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.12: ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಹೆಮ್ಮೆಯ ದುಬೈ ಕನ್ನಡ ಸಂಘದ ವತಿಯಿಂದ ಕೊಡಗಿನ ಕುಂಜಿಲ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಟೋಪಕರಣಗಳು ಹಾಗೂ ಪೀಠೋಪಕರಣಗಳನ್ನು ಕೊಡುಗೆಯಾಗಿ ನೀಡಲಾಯಿತು.

ಹೆಮ್ಮೆಯ ದುಬೈ ಕನ್ನಡ ಸಂಘವು ತನ್ನ ‘ಸರ್ಕಾರಿ ಶಾಲೆ ಉಳಿಸಿ’ ಅಭಿಯಾನದಡಿ ಕರ್ನಾಟಕದ ವಿವಿಧ ಭಾಗಗಳಲ್ಲಿರುವ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ದುರಸ್ತಿ, ಬಣ್ಣ ಬಳಿಯುವಿಕೆ ಹಾಗೂ ಅಗತ್ಯ ಉಪಕರಣಗಳ ಪೂರೈಕೆಯ ಮೂಲಕ ಶೈಕ್ಷಣಿಕ ಮೂಲಸೌಕರ್ಯ ಅಭಿವೃದ್ಧಿಗೆ ಶ್ರಮಿಸುತ್ತಿದೆ.

ಈ ಅಭಿಯಾನದ ಅಂಗವಾಗಿ ಕುಂಜಿಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಹೆಮ್ಮೆಯ ದುಬೈ ಕನ್ನಡ ಸಂಘದ ರಫೀಕಲಿ ಕುಂಡಂಡ ಹಾಗೂ ಆಹ್ವಾನಿತ ಗಣ್ಯರು ಶಾಲೆಯ ಮುಖ್ಯ ಶಿಕ್ಷಕಿ ಸವಿತಾ ಮತ್ತು ವಿದ್ಯಾರ್ಥಿಗಳಿಗೆ ಆಟೋಪಕರಣಗಳು ಹಾಗೂ ಪೀಠೋಪಕರಣಗಳನ್ನು ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಸಮಿತಿ ಅಧ್ಯಕ್ಷೆ ಸಫಿಯಾ ಹಮೀದ್, ನಿವೃತ್ತ ಸೈನಿಕ ಮೊಇದೀನ್, ಕುಂಜಿಲ ಜಮಾತ್ ಉಪಾಧ್ಯಕ್ಷ ಮುಸ್ತಫಾ ಬಾರಿಕೆ, ಕಕ್ಕಬೆ ಪಂಚಾಯಿತಿ ಮಾಜಿ ಸದಸ್ಯ ರಜಾಕ್ ಕುಂಡಂಡ, ಊರಿನ ಹಿರಿಯರಾದ ಅಬ್ದುಲ್ ರಹಿಮಾನ್, ಹೆಮ್ಮೆಯ ದುಬೈ ಕನ್ನಡ ಸಂಘದ ಮುಖ್ಯ ಕಾರ್ಯದರ್ಶಿ ರಫೀಕಲಿ ಕುಂಡಂಡ ಹಾಗೂ ಶಾಲೆಯ ಅಭಿವೃದ್ಧಿ ಸಮಿತಿ (ಎಸ್‌ಡಿಎಂಸಿ)ಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವ ಮೂಲಕ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ನಿರ್ಮಿಸುವುದು ಹಾಗೂ ಕನ್ನಡ ಮಾಧ್ಯಮ ಶಿಕ್ಷಣವನ್ನು ಪ್ರೋತ್ಸಾಹಿಸುವುದು ಸಂಘದ ಸೇವಾ ಕಾರ್ಯಗಳ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಂಘವು ವಿವಿಧ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಪೂರಕವಾದ ಕಾರ್ಯಗಳನ್ನು ನಿರಂತರವಾಗಿ ಕೈಗೊಳ್ಳುತ್ತಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಕಾವೇರಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್ಸ್ ಟ್ರೋಫಿ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 12: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ನೈಜ ಮತದಾರರ ಮತದಾನದ ಹಕ್ಕಿಗೆ…

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026

ಸೋಮೇಶ್ವರ ದೇವಾಲಯದಲ್ಲಿ 21ನೇ ವರ್ಷದ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಅಕ್ಟೋಬರ್ 12, 2026

ಹಿರಿಯ ಹಾಕಿ ಆಟಗಾರ್ತಿ ದೇವರಾಜಮ್ಮ ಅವರಿಗೆ ನಾಡೋಜ ಕಮಲ ಹಂಪನಾ ರಾಜ್ಯಪ್ರಶಸ್ತಿ

ಅಕ್ಟೋಬರ್ 12, 2026

ಕುಂಜಿಲ ಸರ್ಕಾರಿ ಶಾಲೆಗೆ ಹೆಮ್ಮೆಯ ದುಬೈ ಕನ್ನಡ ಸಂಘದಿಂದ ಆಟೋಪಕರಣ, ಪೀಠೋಪಕರಣಗಳ ಕೊಡುಗೆ; ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಹಸ್ತಾಂತರ

ಅಕ್ಟೋಬರ್ 12, 2026

ಮಡಿಕೇರಿ ದಸರಾ ವಿದ್ಯುತ್ ದೀಪಾಲಂಕಾರ ಅಸಮರ್ಪಕ: ಶ್ರೀ ಕೋಟೆ ಮಹಾಗಣಪತಿ ದಸರಾ ಮಂಟಪ ಸಮಿತಿ ಆಕ್ಷೇಪ

ಅಕ್ಟೋಬರ್ 12, 2026

ಸುವರ್ಣ ಮಹೋತ್ಸವ ಸಂಭ್ರಮ: ಶ್ರೀ ಕೋಟೆ ಮಹಾಗಣಪತಿಗೆ 108 ಎಳನೀರು, ಪಂಚಾಮೃತ ಅಭಿಷೇಕ

ಅಕ್ಟೋಬರ್ 12, 2026

ಗಣೇಶೋತ್ಸವ ಸ್ವಾತಂತ್ರ್ಯ ಸಂಗ್ರಾಮದ ಪ್ರತೀಕ : ಸಂಸದ ಯದುವೀರ್ ಒಡೆಯರ್

ಅಕ್ಟೋಬರ್ 11, 2026

ಮಳೆ ಕೊರತೆ ನೀಗಿ ನಾಡಿನಲ್ಲಿ ಸಮೃದ್ಧಿ ನೆಲೆಸಲಿ : ಸಚಿವ ಪಿ.ಎಂ.ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026

ಗೋಣಿಕೊಪ್ಪ ದಸರಾ ಜನೋತ್ಸವ ಉದ್ಘಾಟಿಸಿದ ಸಚಿವ ನರೇಂದ್ರ ಸ್ವಾಮಿ

ಅಕ್ಟೋಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.