Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಂಬಿಬಾಣೆಯಲ್ಲಿ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಚಾಲನೆ: ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಂಬಿಬಾಣೆಯಲ್ಲಿ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಚಾಲನೆ: ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಕ್ಟೋಬರ್ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ, NEWS DESK ಅ.12: ಕಂಬಿಬಾಣೆ ಗ್ರಾಮದ ಶ್ರೀರಾಮ ಮತ್ತು ಶ್ರೀ ಚಾಮುಂಡೇಶ್ವರಿ ದೇವಸ್ಥಾನದ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್‌ಗೌಡ ಅವರು ಚಾಲನೆ ನೀಡಿದರು.

ಭಾನುವಾರ ಸಂಜೆ ನಡೆದ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಶಾಸಕ ಡಾ. ಮಂತರ್‌ಗೌಡ, ಕಳೆದ 71 ವರ್ಷಗಳಿಂದ ನಿರಂತರವಾಗಿ ದೇವಿಯ ಆರಾಧನೆಯಲ್ಲಿ ತೊಡಗಿಸಿಕೊಂಡಿರುವ ಕಂಬಿಬಾಣೆ ಗ್ರಾಮಸ್ಥರ ಕಾರ್ಯ ಶ್ಲಾಘನೀಯವಾಗಿದೆ. ಗ್ರಾಮಸ್ಥರ ಈ ಧಾರ್ಮಿಕ ಪ್ರಯತ್ನವು ವರ್ಷದಿಂದ ವರ್ಷಕ್ಕೆ ಯಶಸ್ಸು ಕಾಣುತ್ತಿದ್ದು, ಮುಂದಿನ ವರ್ಷಗಳಲ್ಲಿಯೂ ಮತ್ತಷ್ಟು ಯಶಸ್ಸು ದೊರೆಯಲಿ ಎಂದು ಹಾರೈಸಿದರು.

ಹಳ್ಳಿಯ ಪರಿಸರದಲ್ಲಿ ಧಾರ್ಮಿಕ ಆರಾಧನೆಯೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಆದ್ಯತೆ ನೀಡುತ್ತಿರುವುದು ಸಂತಸದ ವಿಚಾರವಾಗಿದೆ. ಈ ಬಾರಿ ಮಂಗಳೂರಿನ ಮಂಜನಾಡಿಯ ಸುಘೋಷ ಪಾಂಚಜನ್ಯ ಯಕ್ಷ ನಾಟ್ಯಾಲಯದ ವತಿಯಿಂದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ ಆಯೋಜಿಸಿರುವುದು ಉತ್ಸವದ ವಿಶೇಷ ಆಕರ್ಷಣೆಯಾಗಿದೆ ಎಂದು ಹೇಳಿದರು. ಅಲ್ಲದೆ, ದೇವಸ್ಥಾನದ ಜಾಗದ ದಾಖಲಾತಿಗಳನ್ನು ಸಮಿತಿಯ ಹೆಸರಿಗೆ ವರ್ಗಾಯಿಸಿಕೊಂಡಲ್ಲಿ ಸರ್ಕಾರದ ಅನುದಾನ ಹಾಗೂ ಇತರ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಸಲಹೆ ನೀಡಿದರು.

ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಮಾಜಸೇವಕ ಎಡಿಕೇರಿ ಪ್ರಸನ್ನ ಮಾತನಾಡಿ, ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳು ಎಲ್ಲರನ್ನೂ ಆಕರ್ಷಿಸುತ್ತವೆ. ಕಂಬಿಬಾಣೆಯ ಶ್ರೀರಾಮ ದೇವಸ್ಥಾನದ ವಾರ್ಷಿಕ ಬೆಳವಣಿಗೆಗಳು ಇತರರಿಗೆ ಮಾದರಿಯಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನ ಆಡಳಿತ ಸಮಿತಿಯ ಅಧ್ಯಕ್ಷ ಡಾ. ಶಶಿಕಾಂತ ರೈ ಮಾತನಾಡಿ, ಊರಿನವರು, ದಾನಿಗಳು ಹಾಗೂ ಭಕ್ತರ ಸಹಕಾರದಿಂದ ದೇವಸ್ಥಾನವು ಹಂತ ಹಂತವಾಗಿ ಅಭಿವೃದ್ಧಿ ಹೊಂದುತ್ತಿದೆ. ಕಳೆದ 71 ವರ್ಷಗಳಲ್ಲಿ ದೇವಸ್ಥಾನದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಸಮಿತಿ ಸದಸ್ಯರು ಹಾಗೂ ಭಕ್ತರ ಸಹಕಾರದಿಂದ ಯಾಗಶಾಲೆ ನಿರ್ಮಾಣ, ಸುಸಜ್ಜಿತ ಸಭಾಭವನ ಸೇರಿದಂತೆ ವಿವಿಧ ಅಭಿವೃದ್ಧಿ ಮತ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಮಂಗಳೂರಿನ ಸುಘೋಷ ಪಾಂಚಜನ್ಯ ಯಕ್ಷ ನಾಟ್ಯಾಲಯದ ಕಲಾವಿದರಿಂದ ‘ಶ್ರೀದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನ ನಡೆಯಿತು. ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ್ದ ನೂರಾರು ಯಕ್ಷಗಾನ ಪ್ರೇಮಿಗಳು ಪ್ರದರ್ಶನವನ್ನು ವೀಕ್ಷಿಸಿ ಕಲಾವಿದರ ಅಭಿನಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಬೇಂಗ್ ನಾಡ್ ಕೊಡವ ಸಮಾಜದಲ್ಲಿ ಕೈಲ್ ಪೋದ್ ಒತ್ತೋರ್ಮೆ ಕೂಟ; ಕೊಡವ ಸಂಸ್ಕೃತಿ, ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು: ಚಿರಿಯಪಂಡ ಸುರೇಶ್ ನಂಜಪ್ಪ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.20ರಂದು 56ನೇ ವರ್ಷದ ಆಯುಧಪೂಜಾ ಸಮಾರಂಭ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.15ರಂದು 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.20ರಂದು 56ನೇ ವರ್ಷದ ಆಯುಧಪೂಜಾ ಸಮಾರಂಭ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ, NEWS DESK ಅ.12: ಸುಂಟಿಕೊಪ್ಪ ವಾಹನ ಚಾಲಕರ ಸಂಘದ ವತಿಯಿಂದ 56ನೇ ವರ್ಷದ ಆಯುಧಪೂಜಾ ಸಮಾರಂಭವು ಅಕ್ಟೋಬರ್ 20ರಂದು…

ಸುಂಟಿಕೊಪ್ಪದಲ್ಲಿ ಅ.15ರಂದು 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 12, 2026

ಕಂಬಿಬಾಣೆಯಲ್ಲಿ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಚಾಲನೆ: ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಕ್ಟೋಬರ್ 12, 2026

ಮಡಿಕೇರಿ ದಸರಾದಲ್ಲಿ ಕಾಫಿ ಘಮ: 54 ಮಳಿಗೆಗಳಲ್ಲಿ ಕಾಫಿ ಲೋಕ ಅನಾವರಣ

ಅಕ್ಟೋಬರ್ 12, 2026

ವಿರಾಜಪೇಟೆ ಕಾವೇರಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್ಸ್ ಟ್ರೋಫಿ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026

ಸೋಮೇಶ್ವರ ದೇವಾಲಯದಲ್ಲಿ 21ನೇ ವರ್ಷದ ಶರನ್ನವರಾತ್ರಿ ಉತ್ಸವಕ್ಕೆ ಚಾಲನೆ

ಅಕ್ಟೋಬರ್ 12, 2026

ಹಿರಿಯ ಹಾಕಿ ಆಟಗಾರ್ತಿ ದೇವರಾಜಮ್ಮ ಅವರಿಗೆ ನಾಡೋಜ ಕಮಲ ಹಂಪನಾ ರಾಜ್ಯಪ್ರಶಸ್ತಿ

ಅಕ್ಟೋಬರ್ 12, 2026

ಕುಂಜಿಲ ಸರ್ಕಾರಿ ಶಾಲೆಗೆ ಹೆಮ್ಮೆಯ ದುಬೈ ಕನ್ನಡ ಸಂಘದಿಂದ ಆಟೋಪಕರಣ, ಪೀಠೋಪಕರಣಗಳ ಕೊಡುಗೆ; ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ವಿದ್ಯಾರ್ಥಿಗಳಿಗೆ ಸೌಲಭ್ಯಗಳ ಹಸ್ತಾಂತರ

ಅಕ್ಟೋಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.