ಸುಂಟಿಕೊಪ್ಪ, NEWS DESK ಅ.12: ಸುಂಟಿಕೊಪ್ಪ ಮಲಯಾಳಿ ಸಮಾಜದ ವತಿಯಿಂದ 19ನೇ ವರ್ಷದ ಓಣಂ ಆಚರಣೆಯು ಅಕ್ಟೋಬರ್ 15ರಂದು ಸುಂಟಿಕೊಪ್ಪದ ಎಸ್.ಎಸ್. ಇಂಟರ್‌ನ್ಯಾಷನಲ್ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದು, ಸುಂಟಿಕೊಪ್ಪ ಮಲಯಾಳಿ ಸಮಾಜದ ಅಧ್ಯಕ್ಷ ವಾಸುದೇವ ಕೆ.ಕೆ. ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್, ಕೊಡಗು ಜಿಲ್ಲಾ ಮಲಯಾಳಿ ಸಮಾಜದ ಅಧ್ಯಕ್ಷ ವಿ.ಎಂ. ವಿಜಯನ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.
ಓಣಂ ಆಚರಣೆಯ ಅಂಗವಾಗಿ ಬೆಳಿಗ್ಗೆ 7 ಗಂಟೆಗೆ ಪೂಕಳಂ ಸ್ಪರ್ಧೆ ನಡೆಯಲಿದ್ದು, ಬೆಳಿಗ್ಗೆ 9.30ಕ್ಕೆ ಸಾಂಪ್ರದಾಯಿಕ ಓಣಂ ಮೆರವಣಿಗೆ ಆಯೋಜಿಸಲಾಗಿದೆ. ಮಧ್ಯಾಹ್ನ 2.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಕಾರ್ಯಕ್ರಮದಲ್ಲಿ ಸಮಾಜದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಆಚರಣಾ ಸಮಿತಿಯವರು ತಿಳಿಸಿದ್ದಾರೆ.
















