Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, ಅ.12 NEWS DESK : ಪತ್ರಕರ್ತರ ನಡುವೆ ಬಾಂಧವ್ಯ ವೃದ್ಧಿಸಿ, ಸಂಘಟನಾತ್ಮಕವಾಗಿ ಬಲವರ್ಧನೆಗೊಳ್ಳಲು ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಭಿಪ್ರಾಯಪಟ್ಟರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನವೆಂಬರ್ 2 ಮತ್ತು 3ರಂದು ಮಡಿಕೇರಿಯಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ ಕಾರ್ಯಕ್ರಮವು ಸಿದ್ದಾಪುರ ಸಮೀಪದ ಕರಡಿಗೋಡುವಿನ ಇವಾಲ್ವ್ ಬ್ಯಾಕ್ ರೆಸಾರ್ಟ್‌ನಲ್ಲಿ ನಡೆಯಿತು. ಟ್ರೋಫಿ ಅನಾವರಣಗೊಳಿಸಿ ಮಾತನಾಡಿದ ಶಾಸಕ ಮಂತರ್ ಗೌಡ, ಕ್ರೀಡೆಯ ಮೂಲಕ ಪತ್ರಕರ್ತರನ್ನು ಒಗ್ಗೂಡಿಸುತ್ತಿರುವುದು ಶ್ಲಾಘನೀಯ. ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಆಯೋಜಿಸುವುದು ಸುಲಭದ ಕೆಲಸವಲ್ಲ. ಕೊಡಗು ಜಿಲ್ಲೆ ಆತಿಥ್ಯ ಹಾಗೂ ಅಚ್ಚುಕಟ್ಟಾದ ಆಯೋಜನೆಗೆ ಹೆಸರುವಾಸಿಯಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಆಗಮಿಸಿ ಕೊಡಗಿನ ಆತಿಥ್ಯ ಸ್ವೀಕರಿಸಬೇಕು. ಪಂದ್ಯಾವಳಿಯನ್ನು ಮಾದರಿಯಾಗಿ ಆಯೋಜಿಸಬೇಕು ಎಂದು ಹೇಳಿದರು. ಪತ್ರಕರ್ತರ ವೃತ್ತಿ ಸವಾಲಿನಿಂದ ಕೂಡಿದ್ದು, ಅವರ ಬದುಕಿನಲ್ಲಿಯೂ ಅನೇಕ ಕಷ್ಟಗಳಿವೆ. ರಾಜಕಾರಣಿಗಳಿಗೆ ಮಾರ್ಗದರ್ಶನ ನೀಡಿ, ಅವರು ಸರಿದಾರಿಯಲ್ಲಿ ಸಾಗುವಂತೆ ಎಚ್ಚರಿಸುವವರು ಪತ್ರಕರ್ತರು. ರಾಜಕಾರಣಿಗಳು ಪತ್ರಿಕಾ ವರದಿಗಳನ್ನು ಸಕಾರಾತ್ಮಕವಾಗಿ ಸ್ವೀಕರಿಸಿ, ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಬೇಕು. ಪತ್ರಿಕಾ ವರದಿಗಳಿಂದ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯವಿದೆ ಎಂದರು. ಪತ್ರಕರ್ತರು ಕುಟುಂಬದ ಸದಸ್ಯರಂತೆ ಪರಸ್ಪರ ನೋವು-ನಲಿವಿಗೆ ಸ್ಪಂದಿಸಬೇಕು. ಕ್ರೀಡಾಕೂಟಗಳಲ್ಲಿ ಕ್ರೀಡಾಸ್ಫೂರ್ತಿ ಪ್ರದರ್ಶಿಸುವುದರೊಂದಿಗೆ ಸಂಘಟನೆಯ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಬೇಕು ಎಂದು ಅವರು ಕರೆ ನೀಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಕೊಡಗು ಜಿಲ್ಲೆ ಹೆಮ್ಮೆಯ ಕಿರೀಟವಾಗಿದ್ದು, ಕಾವೇರಿಯ ತವರೂರಿನಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ಆತಿಥ್ಯ ವಹಿಸಿರುವುದು ಹೆಮ್ಮೆಯ ಸಂಗತಿ. ಕೊಡಗು ಆತಿಥ್ಯ, ಶಿಸ್ತು ಹಾಗೂ ಸಾಂಸ್ಕೃತಿಕ ಹಿನ್ನೆಲೆಗೆ ಹೆಸರುವಾಸಿಯಾಗಿದೆ. ಜಿಲ್ಲೆಯ ಪತ್ರಕರ್ತರ ಸಂಘವು ಸಂಘಟನಾತ್ಮಕ ವಿಶ್ವಾಸವನ್ನು ಉಳಿಸಿಕೊಂಡು ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಹಿಂದೆ ಕೊಡಗಿನಲ್ಲಿ ಸಮ್ಮೇಳನ ಹಾಗೂ ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಪ್ರಸ್ತುತ ಪಂದ್ಯಾವಳಿಯೂ ದೊಡ್ಡ ಜವಾಬ್ದಾರಿಯಾಗಿದ್ದು, ನಾಡಿನ ಪತ್ರಕರ್ತರಿಗೆ ಆತಿಥ್ಯ ನೀಡುವ ಹೊಣೆಗಾರಿಕೆ ಸಂಘದ ಮೇಲಿದೆ. ಇದೊಂದು ಪತ್ರಕರ್ತರ ಹಬ್ಬವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಪಾಲ್ಗೊಳ್ಳಬೇಕು ಎಂದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕಿ ಬಿ.ಆರ್. ಸವಿತಾ ರೈ ಮಾತನಾಡಿ, ರಾಜ್ಯಮಟ್ಟದ ಪಂದ್ಯಾವಳಿ ಆಯೋಜಿಸುವುದು ದೊಡ್ಡ ಜವಾಬ್ದಾರಿಯಾಗಿದೆ. ಯಾವುದೇ ಲೋಪವಾಗದಂತೆ ವ್ಯವಸ್ಥೆಗಳನ್ನು ಕಲ್ಪಿಸಬೇಕು. ವಿವಿಧ ಉಪಸಮಿತಿಗಳ ಮೂಲಕ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಸಂಘಟನೆಯನ್ನು ಬಲಪಡಿಸಲು ಸದಸ್ಯರ ಸಹಕಾರವೂ ಅತ್ಯಗತ್ಯ ಎಂದರು. ಎಸ್‌ಎನ್‌ಡಿಪಿ ಅಧ್ಯಕ್ಷ ವಿ.ಕೆ. ಲೋಕೇಶ್ ಮಾತನಾಡಿ, ಸದಾ ಸುದ್ದಿಗಳ ಒತ್ತಡದಲ್ಲಿ ಕಾರ್ಯನಿರ್ವಹಿಸುವ ಪತ್ರಕರ್ತರಿಗೆ ಮನೋಲ್ಲಾಸ ಅತ್ಯವಶ್ಯಕ. ಇಂತಹ ಕ್ರೀಡಾಕೂಟಗಳು ಪತ್ರಕರ್ತರನ್ನು ಒಗ್ಗೂಡಿಸುವುದರೊಂದಿಗೆ ಪರಸ್ಪರ ಸಂಪರ್ಕ ಬೆಸೆಯುವ ಸೇತುವೆಯಾಗುತ್ತವೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಸುಮಾರು 9 ಸಾವಿರ ಸದಸ್ಯರನ್ನು ಹೊಂದಿರುವ ಬೃಹತ್ ಸಂಘಟನೆ ಎಂಬುದು ಹೆಮ್ಮೆಯ ಸಂಗತಿ. ಕಾರ್ಯಾಂಗ ಹಾಗೂ ಶಾಸಕಾಂಗ ಎಡವಿದಾಗ ಎಚ್ಚರಿಸುವ ಮಹತ್ವದ ಜವಾಬ್ದಾರಿ ಮಾಧ್ಯಮಗಳ ಮೇಲಿದೆ. ಕೊಡಗು ಜಿಲ್ಲಾ ಸಂಘವು ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಪಂದ್ಯಾವಳಿಯನ್ನು ವ್ಯವಸ್ಥಿತವಾಗಿ ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಚರಣಿಯಂಡ ಅನು ಕಾರ್ಯಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, 13 ವರ್ಷಗಳ ಬಳಿಕ ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ ಕೊಡಗಿನಲ್ಲಿ ನಡೆಯುತ್ತಿದೆ. ಇದು ಕೇವಲ ಕ್ರೀಡಾಕೂಟವಲ್ಲ; ಪತ್ರಕರ್ತರ ಸಂಘಟನೆಯನ್ನು ಬಲಪಡಿಸುವ ಮಹತ್ವದ ಕಾರ್ಯಕ್ರಮವಾಗಿದೆ. ನವೆಂಬರ್ 2 ಮತ್ತು 3ರಂದು ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಮೈದಾನ ಹಾಗೂ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಪಂದ್ಯಾವಳಿ ನಡೆಯಲಿದ್ದು, ರಾಜ್ಯದ 24 ತಂಡಗಳು ಭಾಗವಹಿಸಲಿವೆ. ಮೊದಲ ದಿನ ಪತ್ರಕರ್ತರು ಹಾಗೂ ರಾಜಕಾರಣಿಗಳ ನಡುವೆ ಪ್ರದರ್ಶನ ಪಂದ್ಯವನ್ನೂ ಆಯೋಜಿಸಲಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್, ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ, ವೀರಾಜಪೇಟೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರೆಜಿತ್ ಕುಮಾರ್ ಗುಹ್ಯ, ಕ್ರೀಡಾ ಸಮಿತಿ ಸಹಸಂಚಾಲಕ ರಿಜ್ವಾನ್ ಹುಸೇನ್ ಉಪಸ್ಥಿತರಿದ್ದರು. ಕೊಡಗು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಜೆ. ರಾಕೇಶ್, ಕುಶಾಲನಗರ ತಾಲೂಕು ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಸೋಮವಾರಪೇಟೆ ತಾಲೂಕು ಸಂಘದ ಅಧ್ಯಕ್ಷ ವಿಶ್ವಕುಮಾರ್, ಜಿಲ್ಲಾ ಸಂಘದ ಕ್ರೀಡಾ ಸಮಿತಿ ಸಂಚಾಲಕ ಸಂತೋಷ್ ರೈ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಸಂಘದ ಖಜಾಂಚಿ ಸುನಿಲ್ ಪೊನ್ನೇಟಿ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ವಾಸು ಸ್ವಾಗತಿಸಿ, ವನಿತಾ ಚಂದ್ರಮೋಹನ್ ವಂದಿಸಿದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಪೂಜಾರಿರ ಮೊಣ್ಣಪ್ಪ ಅರೆಭಾಷಿಕ ಯುವ ಜನಾಂಗಕ್ಕೆ ಮಾದರಿ : ಡಾ.ಕಾವೇರಿಮನೆ ಬೋಜಪ್ಪ

ಅಕ್ಟೋಬರ್ 12, 2026

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ಬೇಂಗ್ ನಾಡ್ ಕೊಡವ ಸಮಾಜದಲ್ಲಿ ಕೈಲ್ ಪೋದ್ ಒತ್ತೋರ್ಮೆ ಕೂಟ; ಕೊಡವ ಸಂಸ್ಕೃತಿ, ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು: ಚಿರಿಯಪಂಡ ಸುರೇಶ್ ನಂಜಪ್ಪ

ಅಕ್ಟೋಬರ್ 12, 2026

ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿಯ ಟ್ರೋಫಿ ಅನಾವರಣ

ಅಕ್ಟೋಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ.12 NEWS DESK : ಪತ್ರಕರ್ತರ ನಡುವೆ ಬಾಂಧವ್ಯ ವೃದ್ಧಿಸಿ, ಸಂಘಟನಾತ್ಮಕವಾಗಿ ಬಲವರ್ಧನೆಗೊಳ್ಳಲು ಕ್ರೀಡಾಕೂಟಗಳು ಸಹಕಾರಿಯಾಗಿವೆ ಎಂದು ಮಡಿಕೇರಿ…

ಮಡಿಕೇರಿಯಲ್ಲಿ ಅ.19 ರಂದು ಮಹಿಳಾ ದಸರಾ : ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 12, 2026

ಬೇಂಗ್ ನಾಡ್ ಕೊಡವ ಸಮಾಜದಲ್ಲಿ ಕೈಲ್ ಪೋದ್ ಒತ್ತೋರ್ಮೆ ಕೂಟ; ಕೊಡವ ಸಂಸ್ಕೃತಿ, ಸಂಪ್ರದಾಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು: ಚಿರಿಯಪಂಡ ಸುರೇಶ್ ನಂಜಪ್ಪ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.20ರಂದು 56ನೇ ವರ್ಷದ ಆಯುಧಪೂಜಾ ಸಮಾರಂಭ

ಅಕ್ಟೋಬರ್ 12, 2026

ಸುಂಟಿಕೊಪ್ಪದಲ್ಲಿ ಅ.15ರಂದು 19ನೇ ವರ್ಷದ ಓಣಂ ಆಚರಣೆ

ಅಕ್ಟೋಬರ್ 12, 2026

ಕಂಬಿಬಾಣೆಯಲ್ಲಿ 71ನೇ ವರ್ಷದ ನವರಾತ್ರಿ ಉತ್ಸವಕ್ಕೆ ಚಾಲನೆ: ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

ಅಕ್ಟೋಬರ್ 12, 2026

ಮಡಿಕೇರಿ ದಸರಾದಲ್ಲಿ ಕಾಫಿ ಘಮ: 54 ಮಳಿಗೆಗಳಲ್ಲಿ ಕಾಫಿ ಲೋಕ ಅನಾವರಣ

ಅಕ್ಟೋಬರ್ 12, 2026

ವಿರಾಜಪೇಟೆ ಕಾವೇರಿ ಕಾಲೇಜಿನ ಬಾಲಕರ ತಂಡಕ್ಕೆ ರನ್ನರ್ಸ್ ಟ್ರೋಫಿ

ಅಕ್ಟೋಬರ್ 12, 2026

ಎಸ್‌ಐಆರ್ ವಿರುದ್ಧ ಕೊಡಗು ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ; ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ರಸ್ತೆ ತಡೆ

ಅಕ್ಟೋಬರ್ 12, 2026

ಬೆಂಗಳೂರಿನಿಂದ ಮೈಸೂರಿಗೆ ದಕ್ಷಿಣ ಕರ್ನಾಟಕ ಅಂಚೆ ವಲಯದ ಪ್ರಧಾನ ಕಚೇರಿ ಸ್ಥಳಾಂತರಕ್ಕೆ ತಾತ್ವಿಕ ಒಪ್ಪಿಗೆ

ಅಕ್ಟೋಬರ್ 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.