Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.13: ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ (ಪಿ.ಎಂ.ಶ್ರೀ. ಜಿ.ಎಂ.ಪಿ. ಶಾಲೆ) ಎರಡು ದಿನಗಳ ಹಿಂದೆ ಕಳ್ಳತನ ನಡೆದಿದ್ದು, ಶಾಲೆಯ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಲಾಗಿದೆ. ಈ ಕೃತ್ಯವನ್ನು ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಚಂದನ್ ಕುಮಾರ್ ತೀವ್ರವಾಗಿ ಖಂಡಿಸಿದ್ದಾರೆ.

ಶಾಲೆಯ ಕೊಠಡಿಯ ಬಾಗಿಲು ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಫುಟ್‌ಬಾಲ್‌ಗಳು ಸೇರಿದಂತೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಅಲ್ಲದೆ, ಶಾಲಾ ಆವರಣದಲ್ಲಿ ಗಿಡಗಳನ್ನು ನೆಡಲು ಇಡಲಾಗಿದ್ದ ಸುಮಾರು 10ರಿಂದ 12 ಗಿಡದ ಕುಂಡಗಳನ್ನು ಒಡೆದು ಹಾನಿಗೊಳಿಸಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆ ಹಾಗೂ ಕ್ರೀಡಾ ಪ್ರೋತ್ಸಾಹಕ್ಕೆ ಬಳಕೆಯಾಗಬೇಕಾದ ಶಾಲಾ ಆಸ್ತಿಪಾಸ್ತಿಗಳನ್ನು ಹಾಳು ಮಾಡಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ. ಸಾರ್ವಜನಿಕ ಶಿಕ್ಷಣ ಸಂಸ್ಥೆಗಳ ಆಸ್ತಿಯನ್ನು ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಇಂತಹ ಕೃತ್ಯಗಳಿಂದ ವಿದ್ಯಾರ್ಥಿಗಳ ಕಲಿಕಾ ವಾತಾವರಣಕ್ಕೆ ಧಕ್ಕೆಯಾಗುತ್ತದೆ ಎಂದು ಚಂದನ್ ಕುಮಾರ್ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಶಾಲೆಯ ಆಡಳಿತ ಮಂಡಳಿ ತಕ್ಷಣ ಪೊಲೀಸರಿಗೆ ದೂರು ಸಲ್ಲಿಸಿ, ಕಳ್ಳತನ ಹಾಗೂ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಶಾಲೆಗೆ ಆಗಿರುವ ನಷ್ಟವನ್ನು ಪರಿಶೀಲಿಸಿ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಶಾಲೆಯ ಆಸ್ತಿಪಾಸ್ತಿಗಳ ರಕ್ಷಣೆಗೆ ಸಾರ್ವಜನಿಕರು ಹಾಗೂ ಪೋಷಕರು ಸಹಕರಿಸಬೇಕೆಂದು ಚಂದನ್ ಕುಮಾರ್ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ. 13 NEWS DESK :  ಮಡಿಕೇರಿ ದಸರಾ ಜನೋತ್ಸವಕ್ಕೆ ಶತಮಾನಕ್ಕೂ ಹೆಚ್ಚಿನ ಭವ್ಯ ಇತಿಹಾಸವಿದೆ. ಇಂತಹ ನಾಡ…

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಅ.15ರಂದು ಮೂನಾಡ್‌ನಲ್ಲಿ ಸಿಎನ್‌ಸಿಯ 6ನೇ ಶಾಂತಿಯುತ ಮಾನವ ಸರಪಳಿ; ಕೊಡವ ಜನಾಂಗದ ಅಸ್ತಿತ್ವ, ಭೂಮಿ, ಭಾಷೆ ಮತ್ತು ಸಂಸ್ಕೃತಿ ರಕ್ಷಣೆಗೆ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 13, 2026

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026

ಬಡ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ; ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಎಚ್.ಆರ್. ಪರಶುರಾಮ್ ಒತ್ತಾಯ

ಅಕ್ಟೋಬರ್ 13, 2026

ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಟಿ.ಪಿ.ರಮೇಶ್ ಅವರ 75ನೇ ಜನ್ಮ ದಿನೋತ್ಸವ: ಕ್ರಿಯಾಶೀಲತೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಗುರಿ ಸಾಧನೆ ಸಾಧ್ಯ: ಶಾಸಕ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 13, 2026

ಕೊಡಗು ಸೈನಿಕ ಶಾಲೆಯಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ‘ಗ್ರೂಪ್ ಹೆಚ್’ ರಾಷ್ಟ್ರೀಯ ಕ್ರೀಡಾಕೂಟ-2026ಕ್ಕೆ ಚಾಲನೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.