Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.13: ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯ ಮೂಲಕ ನೈಜ ಮತದಾರರ ಮತದಾನದ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿ, ಇದನ್ನು ವಿರೋಧಿಸಿ ಅಕ್ಟೋಬರ್ 15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಂವಿಧಾನ ಮತ್ತು ಪ್ರಜಾಪ್ರಭುತ್ವ ರಕ್ಷಣಾ ವೇದಿಕೆಯ ಸಂಚಾಲಕ ಡಿ.ಹೆಚ್. ನಿರ್ವಾಣಪ್ಪ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10.30ಕ್ಕೆ ಮಡಿಕೇರಿಯ ಹಳೇ ಖಾಸಗಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಜಾತ್ಯತೀತ ಚಿಂತನೆಯ ರಾಜಕೀಯ ಪಕ್ಷಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಪ್ರತಿಭಟನೆ ನಡೆಸಲಾಗುವುದು. ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳನ್ನು ಪ್ರಶ್ನಿಸಿ ದೆಹಲಿಯಲ್ಲಿ ಯುವ ಸಮೂಹ ಸೇರಿದಂತೆ ಕಾಂಗ್ರೆಸ್ ಹಾಗೂ ವಿವಿಧ ಪಕ್ಷಗಳು ನಡೆಸುತ್ತಿರುವ ಹೋರಾಟವನ್ನು ಕೇಂದ್ರ ಸರ್ಕಾರ ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದ ಪ್ರಜೆಗಳಿಗೆ ನೀಡಿರುವ ಪ್ರಶ್ನಿಸುವ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದರು.

ದೇಶದೊಳಗಿನ ಅಕ್ರಮ ನುಸುಳುಕೋರರನ್ನು ಪತ್ತೆಹಚ್ಚಿ ಹೊರಹಾಕುವ ಉದ್ದೇಶವನ್ನು ಮುಂದಿಟ್ಟುಕೊಂಡು ಆರಂಭಿಸಲಾದ ಎಸ್‌ಐಆರ್ ಪ್ರಕ್ರಿಯೆಯ ಮೂಲಕ ನೈಜ ಮತದಾರರ ಮತದಾನದ ಹಕ್ಕಿಗೆ ಧಕ್ಕೆಯಾಗುತ್ತಿದೆ ಎಂದು ನಿರ್ವಾಣಪ್ಪ ಆರೋಪಿಸಿದರು. ವಿವಿಧ ರಾಜ್ಯಗಳಲ್ಲಿ ಕೋಟ್ಯಂತರ ನೈಜ ಮತದಾರರ ಹಕ್ಕುಗಳನ್ನು ಕಸಿದುಕೊಳ್ಳುವ ಕೆಲಸ ನಡೆಯುತ್ತಿದೆ ಎಂದು ದೂರಿದ ಅವರು, ಇದರ ಹಿಂದೆ ಕೇಂದ್ರದ ಬಿಜೆಪಿ ಸರ್ಕಾರ ಶಾಶ್ವತವಾಗಿ ಅಧಿಕಾರದಲ್ಲಿ ಉಳಿಯುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದರು.

ವೇದಿಕೆಯ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯ ಮೌಲ್ಯಗಳಿಗೆ ಧಕ್ಕೆಯಾಗುತ್ತಿದೆ ಎಂದು ಹೇಳಿದರು. ದೇಶದ ಬಹುತ್ವ ಪರಂಪರೆ ಹಾಗೂ ಜಾತ್ಯತೀತ ಮೌಲ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ಹೋರಾಟಗಳು ನಡೆಯುತ್ತಿದ್ದು, ಯುವಶಕ್ತಿಯ ಹೋರಾಟಗಳನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ ಎಂದು ಟೀಕಿಸಿದರು.

ವೇದಿಕೆಯ ಸಿ.ಎಂ. ಹಮೀದ್ ಮೌಲವಿ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆಗಾಗಿ ನಡೆಯಲಿರುವ ಪ್ರತಿಭಟನೆಯಲ್ಲಿ ಜಿಲ್ಲೆಯ ಎಲ್ಲಾ ಪ್ರಜ್ಞಾವಂತ ನಾಗರಿಕರು ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದ ಪ್ರೇಂಕುಮಾರ್, ಮೊಹಮ್ಮದ್ ಹನೀಫ್ ಹಾಗೂ ಹೆಚ್.ಎಲ್. ದಿವಾಕರ್ ಅವರು ಪ್ರತಿಭಟನೆಗೆ ಜಿಲ್ಲೆಯ ಜನತೆ ಬೆಂಬಲ ನೀಡುವಂತೆ ಕೋರಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ. 13 NEWS DESK :  ಮಡಿಕೇರಿ ದಸರಾ ಜನೋತ್ಸವಕ್ಕೆ ಶತಮಾನಕ್ಕೂ ಹೆಚ್ಚಿನ ಭವ್ಯ ಇತಿಹಾಸವಿದೆ. ಇಂತಹ ನಾಡ…

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಅ.15ರಂದು ಮೂನಾಡ್‌ನಲ್ಲಿ ಸಿಎನ್‌ಸಿಯ 6ನೇ ಶಾಂತಿಯುತ ಮಾನವ ಸರಪಳಿ; ಕೊಡವ ಜನಾಂಗದ ಅಸ್ತಿತ್ವ, ಭೂಮಿ, ಭಾಷೆ ಮತ್ತು ಸಂಸ್ಕೃತಿ ರಕ್ಷಣೆಗೆ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 13, 2026

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026

ಬಡ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ; ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಎಚ್.ಆರ್. ಪರಶುರಾಮ್ ಒತ್ತಾಯ

ಅಕ್ಟೋಬರ್ 13, 2026

ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಟಿ.ಪಿ.ರಮೇಶ್ ಅವರ 75ನೇ ಜನ್ಮ ದಿನೋತ್ಸವ: ಕ್ರಿಯಾಶೀಲತೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಗುರಿ ಸಾಧನೆ ಸಾಧ್ಯ: ಶಾಸಕ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 13, 2026

ಕೊಡಗು ಸೈನಿಕ ಶಾಲೆಯಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ‘ಗ್ರೂಪ್ ಹೆಚ್’ ರಾಷ್ಟ್ರೀಯ ಕ್ರೀಡಾಕೂಟ-2026ಕ್ಕೆ ಚಾಲನೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.