Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬಡ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ; ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಎಚ್.ಆರ್. ಪರಶುರಾಮ್ ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಡ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ; ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಎಚ್.ಆರ್. ಪರಶುರಾಮ್ ಒತ್ತಾಯ

ಅಕ್ಟೋಬರ್ 13, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ. 13: ಪೊನ್ನಂಪೇಟೆ ತಾಲ್ಲೂಕಿನ ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವೇಶನ ರಹಿತ ಬಡ ಕುಟುಂಬಗಳಿಗೆ ಆದಷ್ಟು ಶೀಘ್ರವಾಗಿ ಹಕ್ಕುಪತ್ರ ವಿತರಿಸಿ, ವಸತಿ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಂಚಾಲಕ ಎಚ್.ಆರ್. ಪರಶುರಾಮ್ ಅವರು ಶಾಸಕರು ಹಾಗೂ ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿ. ಶೆಟ್ಟಿಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ಆರು ಎಕರೆ ಪೈಸಾರಿ ಜಾಗವನ್ನು ನಿವೇಶನ ರಹಿತ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಮೀಸಲಿಡಲಾಗಿದೆ. ಕಳೆದ ಆರೇಳು ತಿಂಗಳಿನಿಂದ ಈ ಪ್ರದೇಶದಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿರುವ ಸುಮಾರು 200 ಕುಟುಂಬಗಳ ಪೈಕಿ ಸಾಧ್ಯವಾದಷ್ಟು ಕುಟುಂಬಗಳಿಗೆ ಈ ಜಾಗವನ್ನು ಹಂಚಿಕೆ ಮಾಡಬೇಕು. ಉಳಿದ ಕುಟುಂಬಗಳಿಗೂ ಬೇರೆ ಪೈಸಾರಿ ಜಾಗವನ್ನು ಗುರುತಿಸಿ ನಿವೇಶನ ಒದಗಿಸಬೇಕೆಂದು ಮನವಿ ಮಾಡಿದರು.

ನಿವೇಶನ ಹಂಚಿಕೆ ಸಂದರ್ಭದಲ್ಲಿ ಬಿ. ಶೆಟ್ಟಿಗೇರಿ ಗ್ರಾಮದ ಅರ್ಹ ಫಲಾನುಭವಿಗಳಿಗೆ ಮೊದಲ ಆದ್ಯತೆ ನೀಡಬೇಕು. ಬಳಿಕ ತಾಲ್ಲೂಕಿನ ಇತರ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಕಲ್ಪಿಸಬೇಕು. ಹೆಚ್ಚುವರಿ ಜಾಗ ಲಭ್ಯವಿದ್ದಲ್ಲಿ ಅದನ್ನು ಇತರರಿಗೆ ಹಂಚಿಕೆ ಮಾಡುವುದಕ್ಕೆ ಸಮಿತಿಯ ಯಾವುದೇ ಅಭ್ಯಂತರವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಪೈಸಾರಿ ಜಾಗದಲ್ಲಿ ತಾತ್ಕಾಲಿಕ ಗುಡಿಸಲುಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿರುವ ಕುಟುಂಬಗಳು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಯ ಬಗ್ಗೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಅವರು ಈಗಾಗಲೇ ಗಮನ ಹರಿಸಿದ್ದಾರೆ. ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಬೋರ್‌ವೆಲ್ ನಿರ್ಮಿಸಿಕೊಡುವ ಭರವಸೆಯನ್ನೂ ನೀಡಿದ್ದಾರೆ. ಅಲ್ಲದೆ, ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಶಾಸಕ ಎ.ಎಸ್. ಪೊನ್ನಣ್ಣ ಅವರು ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದು, ಪರಿಶಿಷ್ಟ ಪಂಗಡದ ಹಾಡಿಗಳಲ್ಲಿ ಸರ್ಕಾರದ ವತಿಯಿಂದ ಮನೆಗಳು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುತ್ತಿರುವ ಶಾಸಕರ ವಿರುದ್ಧ ಕೆಲವರು ಸತ್ಯಕ್ಕೆ ದೂರವಾದ ಆರೋಪಗಳನ್ನು ಮಾಡಿ ಅಪಪ್ರಚಾರ ನಡೆಸುತ್ತಿರುವುದು ಸರಿಯಲ್ಲ ಎಂದು ಪರಶುರಾಮ್ ಇದೇ ಸಂದರ್ಭದಲ್ಲಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ದಲಿತ ಸಂಘರ್ಷ ಸಮಿತಿಯ ಪೊನ್ನಂಪೇಟೆ ತಾಲ್ಲೂಕು ಸಂಘಟನಾ ಸಂಚಾಲಕಿ ಲಕ್ಷ್ಮಿ, ಗೀತಾ, ತಾಲ್ಲೂಕು ಸಂಘಟನಾ ಸಂಚಾಲಕ ಜೆ.ಎ. ಹರೀಶ್ ಹಾಗೂ ಸದಸ್ಯ ಸಿಂಗ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ. 13 NEWS DESK :  ಮಡಿಕೇರಿ ದಸರಾ ಜನೋತ್ಸವಕ್ಕೆ ಶತಮಾನಕ್ಕೂ ಹೆಚ್ಚಿನ ಭವ್ಯ ಇತಿಹಾಸವಿದೆ. ಇಂತಹ ನಾಡ…

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಅ.15ರಂದು ಮೂನಾಡ್‌ನಲ್ಲಿ ಸಿಎನ್‌ಸಿಯ 6ನೇ ಶಾಂತಿಯುತ ಮಾನವ ಸರಪಳಿ; ಕೊಡವ ಜನಾಂಗದ ಅಸ್ತಿತ್ವ, ಭೂಮಿ, ಭಾಷೆ ಮತ್ತು ಸಂಸ್ಕೃತಿ ರಕ್ಷಣೆಗೆ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 13, 2026

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026

ಬಡ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ; ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಎಚ್.ಆರ್. ಪರಶುರಾಮ್ ಒತ್ತಾಯ

ಅಕ್ಟೋಬರ್ 13, 2026

ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಟಿ.ಪಿ.ರಮೇಶ್ ಅವರ 75ನೇ ಜನ್ಮ ದಿನೋತ್ಸವ: ಕ್ರಿಯಾಶೀಲತೆ, ಶ್ರದ್ಧೆ, ಪ್ರಾಮಾಣಿಕತೆಯಿಂದ ಗುರಿ ಸಾಧನೆ ಸಾಧ್ಯ: ಶಾಸಕ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 13, 2026

ಕೊಡಗು ಸೈನಿಕ ಶಾಲೆಯಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ‘ಗ್ರೂಪ್ ಹೆಚ್’ ರಾಷ್ಟ್ರೀಯ ಕ್ರೀಡಾಕೂಟ-2026ಕ್ಕೆ ಚಾಲನೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.