Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.13: ಕೇಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯ (ಇಡಿ), ಆದಾಯ ತೆರಿಗೆ ಇಲಾಖೆ (ಐಟಿ) ಮತ್ತು ಕೇಂದ್ರ ತನಿಖಾ ದಳವನ್ನು (ಸಿಬಿಐ) ರಾಜಕೀಯ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ್ಮೀನಾರಾಯಣ ನಾಗವಾರ ಬಣ) ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಇದರ ಭಾಗವಾಗಿ ಮಡಿಕೇರಿಯಲ್ಲಿಯೂ ಮನವಿ ಸಲ್ಲಿಸಲಾಯಿತು ಎಂದು ಸಮಿತಿಯ ಪ್ರಮುಖರು ತಿಳಿಸಿದರು.

ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆಯನ್ನು ರಕ್ಷಿಸುವುದರ ಜೊತೆಗೆ ಸರ್ಕಾರದ ಆಡಳಿತದಲ್ಲಿ ಪಾರದರ್ಶಕತೆಯನ್ನು ಖಾತರಿಪಡಿಸಬೇಕು ಎಂದು ಸಮಿತಿ ಆಗ್ರಹಿಸಿತು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪ್ರಜಾಪ್ರಭುತ್ವ ವಿರೋಧಿ ಧೋರಣೆ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ ಸಮಿತಿಯ ಮುಖಂಡರು, ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಜ್ಞಾನೇಶ್ ಕುಮಾರ್ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಚುನಾವಣಾ ಆಯೋಗ, ಇಡಿ, ಆದಾಯ ತೆರಿಗೆ ಇಲಾಖೆ ಮತ್ತು ಸಿಬಿಐ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಾದ ಸಾಂವಿಧಾನಿಕ ಹಾಗೂ ಕಾನೂನುಬದ್ಧ ಸಂಸ್ಥೆಗಳಾಗಿವೆ. ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥ ಮತ್ತು ಹಿತಾಸಕ್ತಿಗಳಿಗಾಗಿ ಈ ಸಂಸ್ಥೆಗಳ ಕಾರ್ಯನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುವುದು ಜನವಿರೋಧಿ ಕೃತ್ಯವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸ್ವತಂತ್ರ ಸಂಸ್ಥೆಗಳ ರಾಜಕೀಯ ದುರ್ಬಳಕೆಯನ್ನು ತಡೆಯಲು ನ್ಯಾಯಾಂಗ ಮಧ್ಯಪ್ರವೇಶಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ ಸಮಿತಿಯ ಮುಖಂಡರು, ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಮತ್ತು ಧೋರಣೆಗಳನ್ನು ಖಂಡಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಸಂಚಾಲಕರಾದ ಜೆ.ಎಲ್. ಜನಾರ್ಧನ್, ಎಂ.ಎಸ್. ವೀರೇಂದ್ರ, ಸಂಘಟನಾ ಸಂಚಾಲಕ ಡಿ.ಎಸ್. ಕಾಂತರಾಜ್, ಮಹಿಳಾ ಒಕ್ಕೂಟದ ಸಂಚಾಲಕಿ ಪ್ರಮೀಳಾ, ಮಡಿಕೇರಿ ತಾಲೂಕು ಸಂಚಾಲಕ ಹರೀಶ್, ಸೋಮವಾರಪೇಟೆ ತಾಲೂಕು ಸಂಚಾಲಕ ಯತೀಶ್ ಬಿದರೂರು, ಮಂಜುನಾಥ್ ಮಾದ್ರೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಸೋಮವಾರಪೇಟೆ : ಅ.14 ರಂದು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಮುಂಗಾರು : ಬೆಳೆ ಸಮೀಕ್ಷೆ ಕಡ್ಡಾಯ

ಅಕ್ಟೋಬರ್ 13, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.13 NEWS DESK : ಪ್ರಸಕ್ತ (2026-27) ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಪ್ರಾರಂಭಗೊಂಡಿದ್ದು ರೈತರು…

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ : ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 13, 2026

ಅ.15 ರಂದು ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿ : ನಾಡ ಹಬ್ಬಕ್ಕೆ ಸಾಹಿತ್ಯಿಕ ಸ್ಪರ್ಶ ನೀಡಲಿದ್ದಾರೆ 85 ಕವಿಗಳು

ಅಕ್ಟೋಬರ್ 13, 2026

ಮಡಿಕೇರಿ ದಸರಾ: ಕಾಫಿ ದಸರಾ ಮಳಿಗೆಗಳಿಗೆ ಚಾಲನೆ; 60 ಪೌರಕಾರ್ಮಿಕರಿಗೆ ಸನ್ಮಾನ

ಅಕ್ಟೋಬರ್ 13, 2026

2028ರ ವಿಧಾನಸಭಾ ಚುನಾವಣೆಯಲ್ಲಿ ಹೊಸ ಚಿಂತನೆಯ ವ್ಯಕ್ತಿಗಳು ಆಯ್ಕೆಯಾಗಲಿ : ಉದಯ ಕುಮಾರ್ ಜೆ.

ಅಕ್ಟೋಬರ್ 13, 2026

ಇಡಿ, ಐಟಿ, ಸಿಬಿಐ ದುರುಪಯೋಗ ಖಂಡಿಸಿ ದಲಿತ ಸಂಘರ್ಷ ಸಮಿತಿಯಿಂದ ಮನವಿ ಸಲ್ಲಿಕೆ

ಅಕ್ಟೋಬರ್ 13, 2026

ಅ.15ರಂದು ಮೂನಾಡ್‌ನಲ್ಲಿ ಸಿಎನ್‌ಸಿಯ 6ನೇ ಶಾಂತಿಯುತ ಮಾನವ ಸರಪಳಿ; ಕೊಡವ ಜನಾಂಗದ ಅಸ್ತಿತ್ವ, ಭೂಮಿ, ಭಾಷೆ ಮತ್ತು ಸಂಸ್ಕೃತಿ ರಕ್ಷಣೆಗೆ ಜನಜಾಗೃತಿ ಕಾರ್ಯಕ್ರಮ

ಅಕ್ಟೋಬರ್ 13, 2026

ಕುಶಾಲನಗರ ಸರ್ಕಾರಿ ಶಾಲೆಯಲ್ಲಿ ಕಳ್ಳತನ, ಹಾನಿ : ದುಷ್ಕೃತ್ಯಕ್ಕೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಂಡನೆ

ಅಕ್ಟೋಬರ್ 13, 2026

ಬಡ ಕುಟುಂಬಗಳಿಗೆ ವಸತಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ; ನಿವೇಶನ ರಹಿತ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ ವಿತರಿಸಲು ಎಚ್.ಆರ್. ಪರಶುರಾಮ್ ಒತ್ತಾಯ

ಅಕ್ಟೋಬರ್ 13, 2026

ಅ.15ರಂದು ಮಡಿಕೇರಿಯಲ್ಲಿ ಬೃಹತ್ ಪ್ರತಿಭಟನೆ; ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ಹೋರಾಟ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ

ಅಕ್ಟೋಬರ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.