ವಿರಾಜಪೇಟೆ ಅ.13 NEWS DESK : ವಿರಾಜಪೇಟೆ ಕೊಡಗು ಮಹಿಳಾ ಸಹಕಾರ ಸಂಘ ನಿಯಮಿತದ ಆವರಣದಲ್ಲಿ ಅ.16 ರಂದು, ನೂತನವಾಗಿ ನಿರ್ಮಿಸಲಾದ ಶೌಚಾಲಯದ ಉದ್ಘಾಟನೆ ಹಾಗೂ ಶಾರದಾ ಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 9.30ಕ್ಕೆ ನಡೆಯಲಿರುವ ನೂತನ ಶೌಚಾಲಯ ಉದ್ಘಾಟನಾ ಸಮಾರಂಭದಲ್ಲಿ ಸಮಾಜದ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಹಾಗೂ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಬಲ್ಯಾಟಂಡ ಮುದ್ದವ್ವನವರ ಕುಟುಂಬಸ್ಥರು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಸಮಾಜದ ಸಭಾಂಗಣದಲ್ಲಿ ಶಾರದಾ ಪೂಜೆ ನೆರವೇರಲಿದೆ. ಕಾರ್ಯಕ್ರಮಗಳಲ್ಲಿ ಸಂಘದ ಎಲ್ಲಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಅಧ್ಯಕ್ಷರಾದ ಪಟ್ರಪಂಡ ಗೀತಾ ಬೆಳ್ಯಪ್ಪ ಹಾಗೂ, ಆಡಳಿತ ಮಂಡಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















