Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ ವರ್ಷದ ಅದ್ದೂರಿ ಆಯುಧ ಪೂಜಾ ಮಹೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ವಿದ್ಯುತ್ ದೀಪಾಲಂಕಾರ ಸೇರಿದಂತೆ ವಿವಿಧ ಸಿದ್ಧತೆಗಳು ಭರದಿಂದ ಸಾಗುತ್ತಿವೆ.

ಇಲ್ಲಿನ ಪಿಎಂಶ್ರೀ ಕೆಪಿಎಸ್ ಸರ್ಕಾರಿ ಪ್ರೌಢಶಾಲೆಯ ಮೈದಾನ ಹಾಗೂ ನಾಡ್‌ಮಂದ್‌ನಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ಅಲಂಕೃತ ವೇದಿಕೆಯಲ್ಲಿ ಆಯುಧ ಪೂಜಾ ಸಂಭ್ರಮಾಚರಣೆ ನಡೆಯಲಿದೆ.

ಅಂದು ಅಪರಾಹ್ನ 2 ಗಂಟೆಗೆ ಅಲಂಕೃತ ವಾಹನಗಳಿಗೆ ಸಾಮೂಹಿಕ ಪೂಜೆಯೊಂದಿಗೆ ಕಾರ್ಯಕ್ರಮ ಆರಂಭವಾಗಲಿದ್ದು, ಬಳಿಕ ಮುಖ್ಯ ರಸ್ತೆಯಲ್ಲಿ ಆಕರ್ಷಕ ವಾಹನಗಳ ಮೆರವಣಿಗೆ ನಡೆಯಲಿದೆ. ಮೆರವಣಿಗೆಯನ್ನು ವೀಕ್ಷಿಸಲು ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಸೇರುವ ನಿರೀಕ್ಷೆಯಿದೆ. ಈ ಬಾರಿ ಬೆಳ್ತಂಗಡಿಯ ಶೆಟ್ಟಿ ಬೊಂಬೆ ಬಳಗದಿಂದ ಬೊಂಬೆ ಕುಣಿತ ಹಾಗೂ ವಾದ್ಯಗೋಷ್ಠಿ ಮೆರವಣಿಗೆಯ ಮೆರುಗನ್ನು ಹೆಚ್ಚಿಸಲಿದೆ.

ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ

ಸಂಜೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಅಶ್ವಥ್ ರೈ ಬಿ.ಬಿ. ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಕೊಡವ ಸಮಾಜದ ಅಧ್ಯಕ್ಷ ಹಾಗೂ ಉದ್ಯಮಿ ಚಿರಿಯಪಂಡ ಎಸ್. ಸುರೇಶ್ ನಂಜಪ್ಪ, ಸಿಗ್ಮಾ ನೆಟ್‌ವರ್ಕ್ಸ್ ಮಾಲೀಕ ಹಾಗೂ ಸಮಾಜಸೇವಕ ಅವರೆಮಾದಂಡ ಶರಣ್ ಪೂಣಚ್ಚ, ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಎಚ್.ವಿ. ಚಂದ್ರಶೇಖರ್, ಚೆನ್ನೈ ಉದ್ಯಮಿ ಸತೀಶ್ ಬಿ. ಗುಡ್ಡೇರ, ಪಿಎಂಶ್ರೀ ಕೆಪಿಎಸ್ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸ್ವರ್ಣಲತ, ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಬಿ.ಎಸ್. ಪುಷ್ಪಾವತಿ, ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಬಿ.ಎಂ. ಕಲ್ಪನಾ ಸಾಮ್ರಾಟ್, ಮೂರ್ನಾಡು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ವಿಠಲ್ ಪೂವಯ್ಯ ಪಳಂಗಂಡ, ಬೆಂಗಳೂರಿನ ಕೊಡವ ಸ್ನೇಹ ಕೂಟದ ಅಧ್ಯಕ್ಷ ಅಚ್ಚಕಾಳೇರ ರವಿ ನಾಣಯ್ಯ, ಕೊಡವ ಭಾಷಿಕ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಡಾ. ಮೇಚಿರ ಸುಭಾಷ್ ನಾಣಯ್ಯ, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಸುಬ್ಬಯ್ಯ, ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ. ಹರೀಶ್, ತ್ರಿನೇತ್ರ ಸಂಘದ ಗೌರವಾಧ್ಯಕ್ಷ ಎನ್.ಕೆ. ಕುಂಞರಾಮ, ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ, ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಎ. ಅಬ್ದುಲ್ ಮಜೀದ್ ಹಾಗೂ ಮೂರ್ನಾಡು ಇನ್‌ಫೆಂಟ್ ಜೀಸಸ್ ಚರ್ಚ್‌ನ ಉಪಾಧ್ಯಕ್ಷ ಕೆ.ಜೆ. ಮ್ಯಾಥ್ಯೂ ಜೋಸೆಫ್ ಭಾಗವಹಿಸಲಿದ್ದಾರೆ.

ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಜೊತೆಗೆ ಒಬ್ಬ ನಿವೃತ್ತ ಶಿಕ್ಷಕ ಹಾಗೂ ಒಬ್ಬ ಮಾಜಿ ಸೈನಿಕರನ್ನು ಸಂಘದ ವತಿಯಿಂದ ಗೌರವಿಸಲಾಗುವುದು.

ಆಯುಧ ಪೂಜೆಯ ಅಂಗವಾಗಿ ಅಲಂಕೃತ ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ ಹಾಗೂ ಆರು ಚಕ್ರ ವಾಹನಗಳು ಮತ್ತು ಅಂಗಡಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ನೀಡಲಾಗುವುದು. ಸಾರ್ವಜನಿಕರಿಗೆ ರಾತ್ರಿ ಊಟೋಪಚಾರದ ವ್ಯವಸ್ಥೆಯನ್ನೂ ಸಂಘದ ವತಿಯಿಂದ ಕಲ್ಪಿಸಲಾಗಿದೆ.

ಆಯುಧ ಪೂಜಾ ಮಹೋತ್ಸವವನ್ನು ಯಶಸ್ವಿಗೊಳಿಸಲು ಸಂಘದ ಆಡಳಿತ ಮಂಡಳಿ ಹಾಗೂ ಸರ್ವ ಸದಸ್ಯರು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.