Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ: ಜಾನಪದ ಕಲಾಪ್ರಕಾರಗಳ ಪ್ರದರ್ಶನಕ್ಕೆ ಮನಸೋತ ಜನತೆ; ಜಾನಪದ ಸಂಸ್ಕೃತಿಯ ಉಳಿವಿಗೆ ಹೆಚ್ಚಿನ ಕಾಳಜಿ ಅಗತ್ಯ: ಶಾಸಕ ಎ.ಎಸ್.ಪೊನ್ನಣ್ಣ ಕರೆ; ಕಲಾವಿದರು ಹಾಗೂ ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಅಕ್ಟೋಬರ್ 18, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.18: ಆಧುನಿಕತೆಯ ಭರಾಟೆಯಲ್ಲಿ ನಿಧಾನವಾಗಿ ಮರೆಯಾಗುತ್ತಿರುವ ನಾಡಿನ ಜಾನಪದ ಕಲಾ ಸಂಸ್ಕೃತಿಯನ್ನು ಸಂರಕ್ಷಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾದ 6ನೇ ವರ್ಷದ ಜಾನಪದ ದಸರಾ ಉತ್ಸವವು ವಿವಿಧ ಜಾನಪದ ಕಲಾಪ್ರಕಾರಗಳ ಪ್ರದರ್ಶನದ ಮೂಲಕ ಗಮನ ಸೆಳೆಯಿತು. ಕೊಡಗಿನ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಕಲಾ ವೈಭವವನ್ನು ಅನಾವರಣಗೊಳಿಸಿದ ಈ ಉತ್ಸವ ಜನರಲ್ಲಿ ನಾಡಿನ ಸಂಸ್ಕೃತಿಯ ಬಗ್ಗೆ ಹೆಮ್ಮೆ ಮೂಡಿಸಿತು.

ಮಡಿಕೇರಿ ನಗರ ದಸರಾ ಸಮಿತಿ ಹಾಗೂ ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಗಳ ಸಹಕಾರದೊಂದಿಗೆ ಕೊಡಗು ಜಾನಪದ ಪರಿಷತ್ ವತಿಯಿಂದ ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಜಾನಪದ ದಸರಾ ಉತ್ಸವವನ್ನು ಅತ್ಯುತ್ಸಾಹದಿಂದ ಆಯೋಜಿಸಲಾಗಿತ್ತು.

ಕಿರುಚಾಟಗಳಿಂದ ಸಂಸ್ಕೃತಿಯ ಸಂರಕ್ಷಣೆ ಅಸಾಧ್ಯ: ಎ.ಎಸ್.ಪೊನ್ನಣ್ಣ

ಜ್ಯೋತಿ ಬೆಳಗಿಸಿ, ತಾಳವಾದ್ಯ ನುಡಿಸುವ ಮೂಲಕ ಜಾನಪದ ದಸರಾವನ್ನು ಉದ್ಘಾಟಿಸಿದ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ ಮಾತನಾಡಿ, ಕನ್ನಡ ಸಂಸ್ಕೃತಿ ಮತ್ತು ಪರಂಪರೆಯ ಬೆಳವಣಿಗೆ ಅಂಗಡಿಗಳ ಬಂದ್ ಅಥವಾ ಕಿರುಚಾಟಗಳಿಂದ ಸಾಧ್ಯವಿಲ್ಲ. ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ನೆಲದ ಕಲೆ, ನೃತ್ಯ ಮತ್ತು ಹಾಡುಗಳನ್ನು ಪ್ರದರ್ಶಿಸುವುದರಿಂದ ಮಾತ್ರ ಸಂಸ್ಕೃತಿಯನ್ನು ಜೀವಂತವಾಗಿಡಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಇಂತಹ ಕಾರ್ಯಕ್ರಮಗಳಿಗೆ ಬಹುತೇಕ ಮಂದಿ ನೇರವಾಗಿ ಪ್ರತಿಕ್ರಿಯಿಸದಿದ್ದರೂ, ತಮ್ಮ ಅಂತರಂಗದಲ್ಲಿ ನಮ್ಮ ಸಂಸ್ಕೃತಿ ಮತ್ತು ಪರಂಪರೆಯನ್ನು ಸ್ಮರಿಸುತ್ತಾರೆ ಎಂದು ತಿಳಿಸಿದರು.

ಆಧುನಿಕತೆಯ ಪ್ರಭಾವದ ನಡುವೆಯೂ ಜಾನಪದ ಸಂಸ್ಕೃತಿ ಮತ್ತು ಕಲೆಯ ಸಂರಕ್ಷಣೆಗೆ ಹೆಚ್ಚಿನ ಕಾಳಜಿ ವಹಿಸುವುದು ಅಗತ್ಯವಾಗಿದೆ. ಕಳೆದ ಆರು ವರ್ಷಗಳಿಂದ ಜಾನಪದ ಪರಿಷತ್ ಈ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ನಮ್ಮ ಪರಂಪರೆಯನ್ನು ಉಳಿಸುವ ಆಸಕ್ತಿ ಹೊಂದಿರುವವರು ಇಂತಹ ಕಾರ್ಯಗಳನ್ನು ನಿರಂತರವಾಗಿ ಮುಂದುವರಿಸಿಕೊಂಡು ಹೋಗಬೇಕು ಎಂದು ಕರೆ ನೀಡಿದರು.

ಕಲಾವಿದರು, ಜಾನಪದ ವಸ್ತು ಸಂಗ್ರಹಕಾರರಿಗೆ ಸನ್ಮಾನ

ಕೊಡಗಿನ ಸಂಸ್ಕೃತಿಯನ್ನು ಬಿಂಬಿಸುವ ವಾಂಟೆಡ್ ಬಾಲ ಚಿತ್ರದ ಪ್ರಸಿದ್ಧ ಜಾನಪದೀಯ ಹಾಡು ‘ಪೂಡೆ ಪೂಡೆ’ಯನ್ನು ಹಾಡಿದ ಕುಡುವಚ್ಚೇರಿರ ಉಮೇಶ್ ಹಾಗೂ ದುಗ್ಗಂಡ ರಿಕ್ಕಿ ಮುತ್ತಪ್ಪ ಅವರನ್ನು ಗೌರವಿಸಲಾಯಿತು. ಜಾನಪದ ವಸ್ತುಗಳ ಸಂಗ್ರಹಕಾರ ದಂಪತಿಗಳಾದ ಪೊನ್ನಚ್ಚನ ಮಧು ಮತ್ತು ಪ್ರೀತು ಅವರನ್ನು ಸನ್ಮಾನಿಸಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು.

ಹೃದಯಾಂತರಾಳದ ಭಾವನೆಗಳೇ ಜಾನಪದ: ಅನಂತ ಶಯನ

ಕೊಡಗು ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತ ಶಯನ ಮಾತನಾಡಿ, ಜಾನಪದಕ್ಕೆ ಶ್ರುತಿ, ಲಯ ಹಾಗೂ ತಾಳಗಳ ಕಟ್ಟುನಿಟ್ಟಿನ ಹಂಗಿಲ್ಲ. ಹೃದಯಾಂತರಾಳದಿಂದ ವ್ಯಕ್ತವಾಗುವ ಭಾವನೆಗಳೇ ನಿಜವಾದ ಜಾನಪದ ಎಂದು ಅಭಿಪ್ರಾಯಪಟ್ಟರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ, ಕೊಡಗು ಜಿಲ್ಲೆ ತನ್ನದೇ ಆದ ವಿಶಿಷ್ಟ ಸಂಸ್ಕೃತಿ, ಪರಂಪರೆ ಮತ್ತು ಜಾನಪದ ಕಲಾ ವೈಭವವನ್ನು ಹೊಂದಿರುವ ಅಪರೂಪದ ನಾಡಾಗಿದೆ. ಇಲ್ಲಿನ ಜಾನಪದ ಸಂಸ್ಕೃತಿಗೆ ಜೀವ ತುಂಬುವ ಉದ್ದೇಶದಿಂದ ಜಾನಪದ ದಸರಾ ಆಯೋಜಿಸಿರುವುದು ಪ್ರಶಂಸನೀಯ ಎಂದರು.

ಉದ್ಯಮಿ ಕುಕ್ಕೇರ ಜಯಾ ಚಿಣ್ಣಪ್ಪ ಮಾತನಾಡಿ, ಆಧುನಿಕ ತಂತ್ರಜ್ಞಾನದ ಯುಗದಲ್ಲಿ ನಮ್ಮ ಸಂಸ್ಕೃತಿಯ ಮೂಲ ಬೇರುಗಳನ್ನು ಎಂದಿಗೂ ಮರೆಯಬಾರದು ಎಂದು ಕರೆ ನೀಡಿದರು. ಉದ್ಯಮಿ ಪೊನ್ನಚ್ಚನ ಮೋಹನ್ ಅವರು ಶ್ರೀಮಂತ ಜಾನಪದ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಅಗತ್ಯವನ್ನು ಒತ್ತಿಹೇಳಿದರು. ಜಯಂತಿ ಶೆಟ್ಟಿ ಮಾತನಾಡಿ, ಜಾನಪದ ಕಲಾ ಸಂಸ್ಕೃತಿಯ ಉಳಿವಿಗಾಗಿ ಶ್ರಮಿಸುತ್ತಿರುವ ಕೊಡಗು ಜಾನಪದ ಪರಿಷತ್‌ಗೆ ಎಲ್ಲರೂ ಬೆಂಬಲ ಹಾಗೂ ಸಹಕಾರ ನೀಡಬೇಕು ಎಂದರು.

ಆಕರ್ಷಕ ಕಲಾ ಜಾಥಾ, ಜಾನಪದ ಪ್ರದರ್ಶನ

ಜಾನಪದ ದಸರಾ ಪ್ರಯುಕ್ತ ಭಾನುವಾರ ಬೆಳಗ್ಗೆ ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದಿಂದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯವರೆಗೆ ಆಕರ್ಷಕ ಕಲಾ ಜಾಥಾ ನಡೆಯಿತು.

ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಪೂಜಾ ಕುಣಿತ, ಪಟದ ಕುಣಿತ, ವೀರಗಾಸೆ, ಕರಡಿ ಮಜಲು ಹಾಗೂ ರಂಗ ಕುಣಿತದ ತಂಡಗಳು ಭಾಗವಹಿಸಿ ಜನರ ಗಮನ ಸೆಳೆದವು. ವಿವಿಧ ಕಲಾತಂಡಗಳು ಮೆರವಣಿಗೆಯ ಜೊತೆಗೆ ವೇದಿಕೆಯಲ್ಲಿಯೂ ತಮ್ಮ ಕಲಾಪ್ರದರ್ಶನ ನೀಡಿದವು. ಕುಶಾಲನಗರದ ರಾಜು ತಂಡದ ಹಾಡು ಪ್ರೇಕ್ಷಕರನ್ನು ಆಕರ್ಷಿಸಿತು.

ಗಣ್ಯರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಮಡಿಕೇರಿ ದಸರಾ ಸಮಿತಿ ಅಧ್ಯಕ್ಷೆ ಪಿ. ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಖಜಾಂಚಿ ಸಬಿತಾ, ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಲೋಕೇಶ್ ಕುಮಾರ್, ಪದ್ಮಶ್ರೀ ರಾಣಿ ಮಾಚಯ್ಯ, ಉದ್ಯಮಿ ಅವರೆಮಾದಂಡ ಶರಣ್ ಪೂಣಚ್ಚ, ಜಾನಪದ ಪರಿಷತ್ ಪ್ರಮುಖರಾದ ಚಂದ್ರ ಮೋಹನ್, ಟೋಮಿ ಥೋಮಸ್, ದಿಲನ್ ಚಂಗಪ್ಪ, ಉಜ್ವಲ್ ರಂಜಿತ್, ಸುಜಲಾ ದೇವಿ, ಎಸ್.ಡಿ. ಪ್ರಶಾಂತ್ ಹಾಗೂ ಕೆ.ಎ. ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರೇಮಾ ರಾಘವಯ್ಯ ತಂಡ ನಾಡಗೀತೆಯನ್ನು ಪ್ರಸ್ತುತಪಡಿಸಿತು. ಗೌಡ ಮಹಿಳಾ ಒಕ್ಕೂಟದ ಸದಸ್ಯರು ಪ್ರಾರ್ಥಿಸಿದರು. ಜಾನಪದ ದಸರಾ ಸಮಿತಿ ಸಂಚಾಲಕ ಅನಿಲ್ ಎಚ್.ಟಿ. ಸ್ವಾಗತಿಸಿದರು. ಪರಿಷತ್ ಪ್ರಧಾನ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮ್ಮದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಖಜಾಂಚಿ ಸಂಪತ್ ಕುಮಾರ್ ವಂದಿಸಿದರು.

ಜಾನಪದ ದಸರಾ ಉತ್ಸವವು ಕೊಡಗಿನ ಸಾಂಪ್ರದಾಯಿಕ ಕಲೆ, ಹಾಡು, ನೃತ್ಯ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಮೂಲಕ ಜಾನಪದ ಕಲೆಯ ಉಳಿವು ಮತ್ತು ಬೆಳವಣಿಗೆಯ ಮಹತ್ವವನ್ನು ಸಾರಿತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಕಾವೇರಿ ತೀರ್ಥೋದ್ಭವದಂದು ಎ.ಎಸ್.ಪೊನ್ನಣ್ಣ ಹಾಗೂ ಡಾ.ಮಂತರ್ ಗೌಡ ಅಭಿಮಾನಿ ಬಳಗದಿಂದ ಸೇವಾ ಕಾರ್ಯ : 3 ಸಾವಿರಕ್ಕೂ ಅಧಿಕ ಭಕ್ತರಿಗೆ ಹಣ್ಣು, ತಂಪು ಪಾನೀಯ, ಕಾಫಿ ವಿತರಣೆ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.18 : ಕಾವೇರಿ ತೀರ್ಥೋದ್ಭವದ ದಿನವಾದ ಶನಿವಾರ ಕಾವೇರಿ ದರ್ಶನಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಎ.ಎಸ್.ಪೊನ್ನಣ್ಣ ಹಾಗೂ…

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.