Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನಾಪೋಕ್ಲು: ಬಲಮುರಿ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಸಂಭ್ರಮದ ಪುಣ್ಯ ತೀರ್ಥಸ್ನಾನ ಜಾತ್ರಾ ಮಹೋತ್ಸವ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು: ಬಲಮುರಿ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಸಂಭ್ರಮದ ಪುಣ್ಯ ತೀರ್ಥಸ್ನಾನ ಜಾತ್ರಾ ಮಹೋತ್ಸವ

ಅಕ್ಟೋಬರ್ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು, NEWS DESK ಅ.19: ಸಮೀಪದ ಇತಿಹಾಸ ಪ್ರಸಿದ್ಧ ಬಲಮುರಿ (ಬಲಂಬೇರಿ) ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಭಾನುವಾರ ಕಾವೇರಿ ನದಿಗೆ ನೆರವೇರಿದ ಮಹಾ ಮಂಗಳಾರತಿಯೊಂದಿಗೆ ಪುಣ್ಯ ತೀರ್ಥಸ್ನಾನ ಜಾತ್ರಾ ಮಹೋತ್ಸವವು ಶ್ರದ್ಧಾ-ಭಕ್ತಿ ಮತ್ತು ವಿಜೃಂಭಣೆಯಿಂದ ಸಂಪನ್ನಗೊಂಡಿತು.

ಕಾವೇರಿ ಸಂಕ್ರಮಣದಂದು ತಲಕಾವೇರಿಯಲ್ಲಿ ಪುಣ್ಯ ತೀರ್ಥಸ್ನಾನ ನೆರವೇರಿದ ಮರುದಿನ ಎರಡನೇ ಪುಣ್ಯ ತೀರ್ಥಸ್ನಾನವನ್ನು ಬಲಮುರಿಯಲ್ಲಿ ಮಾಡುವ ಪದ್ಧತಿ ತಲತಲಾಂತರಗಳಿಂದ ನಡೆದುಬಂದಿದೆ. ಅದರಂತೆ ಭಾನುವಾರ ಭಕ್ತರು ಜಾತ್ರೋತ್ಸವದಲ್ಲಿ ಪಾಲ್ಗೊಂಡು, ವಿಶೇಷ ಪೂಜಾ ವಿಧಿ-ವಿಧಾನಗಳನ್ನು ಸಲ್ಲಿಸಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು.

ಧಾರ್ಮಿಕ ವಿಧಿ-ವಿಧಾನಗಳು

ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಕೇಶ ಮುಂಡನ, ಪಿಂಡಪ್ರದಾನ, ಕಾವೇರಿ ತೀರ್ಥಸ್ನಾನ ಹಾಗೂ ‘ಕಾವೇರಿಯ ಬಾಲೋಪಾಟ್’ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ಮಧ್ಯಾಹ್ನ 12 ಗಂಟೆಗೆ ಕಾವೇರಿ ನದಿಗೆ ಮಹಾ ಮಂಗಳಾರತಿ ಮತ್ತು ವಿಶೇಷ ಪೂಜೆಗಳನ್ನು ಕ್ಷೇತ್ರದ ಅರ್ಚಕ ಮಹಾಬಲೇಶ್ವರ ಭಟ್ ಹಾಗೂ ಸಹವರ್ತಿಗಳು ನೆರವೇರಿಸಿದರು.

ಬಳಿಕ ನದಿಯಿಂದ ಪವಿತ್ರ ನೀರನ್ನು ಅರ್ಚಕರು ಬಿಂದಿಗೆಯಲ್ಲಿ ತುಂಬಿ, ಚಂಡೆ ಮೇಳಗಳೊಂದಿಗೆ ದೇವಾಲಯಕ್ಕೆ ಕೊಂಡೊಯ್ದು ದೇವರ ಪ್ರತಿಬಿಂಬಕ್ಕೆ ಅಭಿಷೇಕ ಮಾಡಿದರು. ನಂತರ ವಿಶೇಷ ಮಹಾಪೂಜೆ, ಮಂಗಳಾರತಿ, ತೀರ್ಥಪ್ರಸಾದ ವಿತರಣೆ ಹಾಗೂ ಆಗಮಿಸಿದ ಭಕ್ತಾದಿಗಳಿಗೆ ಮಹಾ ಅನ್ನಸಂತರ್ಪಣೆ ನಡೆಯಿತು.

ಕ್ಷೇತ್ರ ಅಭಿವೃದ್ಧಿಗೆ ಕಾವೇರಿ ನೀರಾವರಿ ನಿಗಮಕ್ಕೆ ಒಳಪಡಿಸಲು ಮನವಿ

ಹಬ್ಬದ ಪ್ರಯುಕ್ತ ನಡೆದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದ ದೇವಾಲಯದ ತಕ್ಕರು ಹಾಗೂ ಆಡಳಿತ ಮಂಡಳಿ ಅಧ್ಯಕ್ಷ ಕೊಂಗೀರಂಡ ಸಾದು ತಮ್ಮಯ್ಯ ಮಾತನಾಡಿ, ಅಗಸ್ತ್ಯ ಮಹರ್ಷಿಗಳು ಪೂಜಿಸಿದ ಈ ಪವಿತ್ರ ಕ್ಷೇತ್ರವು ಅತ್ಯಂತ ಪ್ರಾಮುಖ್ಯತೆ ಹೊಂದಿದ್ದರೂ ಸೂಕ್ತ ಅಭಿವೃದ್ಧಿ ಕಂಡಿಲ್ಲ ಎಂದು ಹೇಳಿದರು.

ಭಾಗಮಂಡಲದ ತ್ರಿವೇಣಿ ಸಂಗಮದ ಮಾದರಿಯಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಬಲಮುರಿಯನ್ನು ಉನ್ನತೀಕರಿಸಿ ಅಭಿವೃದ್ಧಿಪಡಿಸುವ ಭರವಸೆಯನ್ನು ಶಾಸಕರು ಕಳೆದ ಬಾರಿ ನೀಡಿದ್ದರು. ಈ ಕಾರ್ಯ ಶೀಘ್ರ ಈಡೇರಬೇಕಿದೆ ಎಂದು ಅವರು ಅಭಿಪ್ರಾಯಪಟ್ಟರು.

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಬಿದ್ದಂಡ ಉಷಾದೇವಮ್ಮ ಮಾತನಾಡಿ, ಬಲಮುರಿ ಕೊಡಗು ಜಿಲ್ಲೆಯ ಎರಡನೇ ಪುಣ್ಯಕ್ಷೇತ್ರವಾಗಿದ್ದು, ಇಲ್ಲಿ ಮೂಲಸೌಕರ್ಯಗಳ ಕೊರತೆಯಿದೆ. ಕ್ಷೇತ್ರವನ್ನು ಕಾವೇರಿ ನೀರಾವರಿ ನಿಗಮಕ್ಕೆ ಒಳಪಡಿಸಿದರೆ ಭಕ್ತರಿಗೆ ಹಾಗೂ ಪ್ರವಾಸಿಗರಿಗೆ ಅನುಕೂಲವಾಗಲಿದೆ. ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ನೀಡಿದ್ದ ಅಭಿವೃದ್ಧಿಯ ಭರವಸೆ ಈಡೇರಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಅಗಸ್ತೇಶ್ವರ ದೇವಾಲಯದ ಆಡಳಿತ ಮಂಡಳಿ ಕಾರ್ಯದರ್ಶಿ ಪೊನ್ನಚ್ಚನ ಜಯ, ಖಜಾಂಜಿ ಆಂಗಿರ ಸಂತೋಷ್, ಬೊಳ್ಳಚೆಟ್ಟಿರ ಅಚ್ಚಪ್ಪ, ಅನ್ನದಾನ ಸಮಿತಿ ಅಧ್ಯಕ್ಷ ಬೊಳ್ಳಚೆಟ್ಟಿರ ವಿಜಯ್ ಚೆಟ್ಟಿಚ್ಚ, ಉಪಾಧ್ಯಕ್ಷ ಪಾಲಂದಿರ ಚಂಗಪ್ಪ, ಬೊಳ್ಳಚೆಟ್ಟಿರ ಸುರೇಶ್, ಕುಂದನ ಪ್ರಭಾನಂದ ಸೇರಿದಂತೆ ದೇವಾಲಯದ ಆಡಳಿತ ಮಂಡಳಿ ಹಾಗೂ ಅನ್ನದಾನ ಸಮಿತಿಯ ಪದಾಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಊರ-ಪರಊರಿನ ಅಪಾರ ಸಂಖ್ಯೆಯ ಭಕ್ತಾದಿಗಳು ಭಾಗವಹಿಸಿದ್ದರು.

ವರದಿ: ದುಗ್ಗಳ ಸದಾನಂದ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗಿನಲ್ಲಿ ಪರಿಶಿಷ್ಟ ಜಾತಿಯ ಫಲಾನುಭವಿಗೆ ಮೊಬೈಲ್ ಕ್ಯಾಂಟೀನ್ ವಾಹನ ಹಸ್ತಾಂತರ

ಅಕ್ಟೋಬರ್ 19, 2026

ಸೈನಿಕ ಶಾಲೆ ಕೊಡಗಿನಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು (ಹೆಚ್) ಕ್ರೀಡಾಕೂಟ-2026ರ ಸಮಾರೋಪ ಸಮಾರಂಭ

ಅಕ್ಟೋಬರ್ 19, 2026

ನಾಪೋಕ್ಲು ಸುತ್ತಮುತ್ತ ಬಿರುಸಿನ ಮಳೆ: ರಸ್ತೆಗಳು ಜಲಾವೃತ, ವಾಹನ ಸಂಚಾರಕ್ಕೆ ಅಡಚಣೆ

ಅಕ್ಟೋಬರ್ 19, 2026

ಸೈನಿಕ ಶಾಲೆ ಕೊಡಗಿನಲ್ಲಿ ಅಖಿಲ ಭಾರತ ಸೈನಿಕ ಶಾಲೆಗಳ ಅಂತರ ಗುಂಪು (ಹೆಚ್) ಕ್ರೀಡಾಕೂಟ-2026ರ ಸಮಾರೋಪ ಸಮಾರಂಭ

ಅಕ್ಟೋಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ಅ. 18: ಸೈನಿಕ ಶಾಲೆ ಕೊಡಗಿನ 19ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಅಖಿಲ ಭಾರತ…

ನಾಪೋಕ್ಲು: ಬಲಮುರಿ ಶ್ರೀ ಅಗಸ್ತೇಶ್ವರ ದೇವಾಲಯದಲ್ಲಿ ಸಂಭ್ರಮದ ಪುಣ್ಯ ತೀರ್ಥಸ್ನಾನ ಜಾತ್ರಾ ಮಹೋತ್ಸವ

ಅಕ್ಟೋಬರ್ 19, 2026

ನಾಪೋಕ್ಲು ಸುತ್ತಮುತ್ತ ಬಿರುಸಿನ ಮಳೆ: ರಸ್ತೆಗಳು ಜಲಾವೃತ, ವಾಹನ ಸಂಚಾರಕ್ಕೆ ಅಡಚಣೆ

ಅಕ್ಟೋಬರ್ 19, 2026

ಮಡಿಕೇರಿ ದಸರಾ : ಮದ್ಯ ಮಾರಾಟ ನಿಷೇಧ

ಅಕ್ಟೋಬರ್ 19, 2026

ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ: ವಾಹನ ಸಂಚಾರದಲ್ಲಿ ಮಾರ್ಗ ಬದಲಾವಣೆ

ಅಕ್ಟೋಬರ್ 19, 2026

ಚೆಟ್ಟಳ್ಳಿಯಲ್ಲಿ ಕಾವೇರಿ ಮಾತೆಗೆ ವಿಶೇಷ ಪೂಜೆ

ಅಕ್ಟೋಬರ್ 19, 2026

ಅಕ್ಟೋಬರ್ 23 ರಂದು ಪಾಲಿಬೆಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಅಕ್ಟೋಬರ್ 19, 2026

ವಿರಾಜಪೇಟೆಯಿಂದ ತಲಕಾವೇರಿವರೆಗೆ 58 ಕಿ.ಮೀ. ಪಾದಯಾತ್ರೆ; 6ನೇ ವರ್ಷದ ಯಾತ್ರೆಯಲ್ಲಿ 15 ಮಂದಿ ಭಾಗಿ – 58 ಕಿ.ಮೀ. ಭಕ್ತಿಯ ನಡಿಗೆ

ಅಕ್ಟೋಬರ್ 19, 2026

ರಗ್ಬಿ ಇಂಡಿಯಾ ಮಂಡಳಿಗೆ ಕೊಡಗಿನ ತಿಮ್ಮಯ್ಯ ಮಾದಂಡ ಆಯ್ಕೆ; SOM ಚುನಾವಣೆಯಲ್ಲಿ ಮಹತ್ವದ ಗೆಲುವು; ಭಾರತೀಯ ರಗ್ಬಿ ಕ್ರೀಡೆಯ ಅಭಿವೃದ್ಧಿಗೆ ಹೊಸ ಜವಾಬ್ದಾರಿ

ಅಕ್ಟೋಬರ್ 19, 2026

ಶ್ರೀ ಕಾವೇರಿ ಭಕ್ತ ಮಂಡಳಿಯಿಂದ 72ನೇ ವರ್ಷದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.