ಮಡಿಕೇರಿ, NEWS DESK ಅ.22: ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಸಕ್ತಿಯನ್ನು ಬೆಳೆಸುವುದರೊಂದಿಗೆ ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯ ಪರಿಚಯ ಮಾಡಿಕೊಡುವ ಉದ್ದೇಶದಿಂದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಜಿಲ್ಲೆಯ ಶಾಲಾ-ಕಾಲೇಜುಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.
ಕೈಬುಲಿರ ಬೋಪಯ್ಯ ದತ್ತಿ ಆಶಯದಡಿ ಪದವಿ ಹಾಗೂ ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಕವಿಗೋಷ್ಠಿಯನ್ನು ನವೆಂಬರ್ 5ರಂದು ವಿರಾಜಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದೆ.
ಕವಿಗೋಷ್ಠಿಯಲ್ಲಿ ಭಾಗವಹಿಸಲು ಆಸಕ್ತಿಯಿರುವ ವಿದ್ಯಾರ್ಥಿಗಳು ತಮ್ಮ ಸ್ವರಚಿತ ಕವನಗಳನ್ನು ಅಕ್ಟೋಬರ್ 30ರೊಳಗೆ ಕಳುಹಿಸಿಕೊಡಬೇಕು. ಪ್ರತಿ ಕಾಲೇಜಿನಿಂದ ಗರಿಷ್ಠ ಮೂವರು ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ತಮ್ಮ ಕವನಗಳನ್ನು 9113892396 ಸಂಖ್ಯೆಗೆ ವಾಟ್ಸ್ಆ್ಯಪ್ ಮೂಲಕ ಕಳುಹಿಸಬಹುದು. ಅಥವಾ ಅಧ್ಯಕ್ಷರು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುದರ್ಶನ ವೃತ್ತದ ಬಳಿ, ಮಡಿಕೇರಿ ಎಂಬ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಿಕೊಡಬಹುದು.
ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
















