Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೂರ್ನಾಡು ಅ.22 NEWS DESK : ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 33ನೇ ವರ್ಷದ ಆಯುಧ ಪೂಜಾ ಮಹೋತ್ಸವವು ಸಂಭ್ರಮದಿಂದ  ನಡೆಯಿತು. ಪಿಎಂಶ್ರೀ ಕೆಪಿಎಸ್ ಸರ್ಕಾರಿ ಪ್ರೌಢಶಾಲೆಯ ಮೈದಾನ ಹಾಗೂ ನಾಡ್‌ಮಂದ್‌ನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಲಂಕೃತ ವೇದಿಕೆಯಲ್ಲಿ ವಿವಿಧ ವಾಹನಗಳಿಗೆ ಸಾಮೂಹಿಕ ಪೂಜೆ ನೆರವೇರಿಸಲಾಯಿತು. ಬಳಿಕ ಪಟ್ಟಣದ ಮುಖ್ಯರಸ್ತೆಯಲ್ಲಿ ಆಕರ್ಷಕವಾಗಿ ಅಲಂಕರಿಸಿದ ವಾಹನಗಳ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಗಜಾನನನಿಂದ ಮೂಕಾಸುರನ ವಧೆ, ಕೊಡಗಿನ ಕಾವೇರಿ ಮಾತೆ, ದೇವಿಯಿಂದ ತಾರಕಾಸುರನ ಸಂಹಾರ, ಅರ್ಧನಾರೀಶ್ವರ ದರ್ಶನ, ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ, ಆನೆ ದಾಳಿಗೆ ರೈತ ಬಲಿ, ಶ್ರೀಕೃಷ್ಣನ ಸಮುದ್ರ ಮಂಥನ, ಬಡವರಿಗಾಗಿ ನಿವೇಶನ ಹೋರಾಟ, ಕಾಳಿಂಗ ಮರ್ದನ, ಕರಾವಳಿಯ ಯಕ್ಷಗಾನ ಕಲೆ, ಕೊಳಲು ಕೃಷ್ಣ ಹಾಗೂ ಮಹಾದೇವಿಯಿಂದ ಗರುಡಾಸುರನ ಸಂಹಾರ ಸೇರಿದಂತೆ ಹಲವು ಸ್ತಬ್ಧಚಿತ್ರಗಳು ಮತ್ತು ಕಲಾಕೃತಿಗಳು ಗಮನ ಸೆಳೆದವು. ಮಾದಕ ವಸ್ತು ಮುಕ್ತ ಕೊಡಗು ಸಂದೇಶ ಸಾರುವ ಸ್ತಬ್ಧಚಿತ್ರವೂ ಮೆರವಣಿಗೆಯ ಆಕರ್ಷಣೆಯಾಗಿತ್ತು. ಈ ಬಾರಿ ವಿಶೇಷವಾಗಿ ಬೆಳ್ತಂಗಡಿಯ ಶೆಟ್ಟಿ ಬೊಂಬೆ ಬಳಗದ ಬೊಂಬೆ ಕುಣಿತ ಹಾಗೂ ವಾದ್ಯಗೋಷ್ಠಿ ಮೆರವಣಿಗೆಗೆ ಮತ್ತಷ್ಟು ಮೆರುಗು ನೀಡಿತು. ಮಳೆಯ ನಡುವೆಯೂ ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಸಾರ್ವಜನಿಕರು ವಿವಿಧ ಕಲಾಕೃತಿಗಳು ಹಾಗೂ ಸ್ತಬ್ಧಚಿತ್ರಗಳನ್ನು ಕಣ್ತುಂಬಿಕೊಂಡರು. :: ಯುವಶಕ್ತಿಯಿಂದ ಸದೃಢ ಭಾರತ ನಿರ್ಮಾಣ ಸಾಧ್ಯ: ಶರಣ್ ಪೂಣಚ್ಚ ::  ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಬೆಂಗಳೂರಿನ ಸಿಗ್ಮಾ ನೆಟ್‌ವರ್ಕ್ಸ್ ಮಾಲೀಕ ಹಾಗೂ ಸಮಾಜಸೇವಕ ಅವರೆಮಾದಂಡ ಶರಣ್ ಪೂಣಚ್ಚ ಮಾತನಾಡಿ, ದೇಶದಲ್ಲಿ ಯುವಶಕ್ತಿಯನ್ನು ಬೆಳೆಸುವ ಕಾರ್ಯವಾಗಬೇಕು. ಸದೃಢ ಭಾರತದ ನಿರ್ಮಾಣಕ್ಕೆ ಯುವಕರ ಶಕ್ತಿ ಅತ್ಯಗತ್ಯವಾಗಿದೆ. ಎಲ್ಲ ಧರ್ಮದವರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಇಂತಹ ಕಾರ್ಯಕ್ರಮ ಶ್ಲಾಘನೀಯ ಎಂದರು. ಸಂಘವು ಸಮಾಜಮುಖಿ ಕಾರ್ಯಕ್ರಮಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಹಾಗೂ ಮೂರ್ನಾಡು ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಾಧಕರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಹೇಳಿದರು. ಬೆಂಗಳೂರಿನ ಕೊಡವ ಸಮಾಜದ ಅಧ್ಯಕ್ಷ ಹಾಗೂ ಉದ್ಯಮಿ ಚಿರಿಯಪಂಡ ಎಸ್. ಸುರೇಶ್ ನಂಜಪ್ಪ ಮಾತನಾಡಿ, ಆಯುಧ ಪೂಜೆ ಮತ್ತು ವಿಜಯದಶಮಿಯಂತಹ ನಾಡಹಬ್ಬಗಳು ಜನರಲ್ಲಿ ಒಗ್ಗಟ್ಟು ಮೂಡಿಸುವುದರ ಜೊತೆಗೆ ದೇಶದ ಭದ್ರತೆ ಹಾಗೂ ಏಕತೆಯ ಮಹತ್ವವನ್ನು ಸಾರುತ್ತವೆ. ಮೂರ್ನಾಡಿನ ಆಯುಧ ಪೂಜಾ ಕಾರ್ಯಕ್ರಮವು ಜಿಲ್ಲೆಯಲ್ಲಿ ವಿಶೇಷ ಸ್ಥಾನ ಪಡೆದಿದೆ ಎಂದರು. ಪಿಎಂಶ್ರೀ ಕೆಪಿಎಸ್ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಸ್ವರ್ಣಲತಾ ಮಾತನಾಡಿ, ನವರಾತ್ರಿ ಹಬ್ಬವು ಶಕ್ತಿಯ ಆರಾಧನೆಯ ಸಂಕೇತವಾಗಿದೆ. ಹಿಂದೆ ರಾಜಮನೆತನಗಳಿಗೆ ಸೀಮಿತವಾಗಿದ್ದ ಹಬ್ಬ ಇಂದು ಜನಸಾಮಾನ್ಯರ ನಾಡಹಬ್ಬವಾಗಿ ಆಚರಿಸಲ್ಪಡುತ್ತಿದೆ. ಸ್ತ್ರೀಶಕ್ತಿಗೆ ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದ್ದು, ಪ್ರಸ್ತುತ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಹೇಳಿದರು. ಮಡಿಕೇರಿ ಗ್ರಾಮಾಂತರ ಪೊಲೀಸ್ ವೃತ್ತ ನಿರೀಕ್ಷಕ ಹೆಚ್.ವಿ. ಚಂದ್ರಶೇಖರ್ ಸಭೆಯನ್ನುದ್ದೇಶಿಸಿ ಮಾತನಾಡಿ, ಸುಮಧುರ ಹಾಡೊಂದನ್ನು ಹಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. :: ಸಾಧಕರಿಗೆ ಸನ್ಮಾನ, ವಾಹನಗಳಿಗೆ ಬಹುಮಾನ :: ಕಾರ್ಯಕ್ರಮದ ಅಧ್ಯಕ್ಷತೆಯನ್ನು ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಬಿ.ಬಿ. ಅಶ್ವಥ್ ರೈ ವಹಿಸಿದ್ದರು. ಈ ಸಂದರ್ಭದಲ್ಲಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿನಿಯರಾದ ಜಾನಿಶ ಬೋಜಮ್ಮ, ಬೃಂದಾ ಮತ್ತು ಪುಣ್ಯ ಅವರನ್ನು ಸನ್ಮಾನಿಸಲಾಯಿತು. ನಿವೃತ್ತ ಶಿಕ್ಷಕ ಹೆಚ್.ಬಿ. ಕೃಷ್ಣಪ್ಪ ಹಾಗೂ ಮಾಜಿ ಸೈನಿಕ ಚೆಟ್ಟಿಮಾಡ ಬಾಲಕೃಷ್ಣ ಅವರನ್ನೂ ಸಂಘದ ವತಿಯಿಂದ ಗೌರವಿಸಲಾಯಿತು. ಅಲಂಕೃತಗೊಂಡ ಸೈಕಲ್‌ಗಳು, ದ್ವಿಚಕ್ರ, ತ್ರಿಚಕ್ರ, ನಾಲ್ಕು ಚಕ್ರ ಹಾಗೂ ಆರು ಚಕ್ರದ ವಾಹನಗಳು ಮತ್ತು ಅಂಗಡಿಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ನಗದು ಬಹುಮಾನ ಮತ್ತು ಪಾರಿತೋಷಕಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಚೆನ್ನೈನ ಉದ್ಯಮಿ ಸತೀಶ್ ಬಿ. ಗುಡ್ಡೇರ, ಪಿಎಂಶ್ರೀ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಬಿ.ಎಸ್. ಪುಷ್ಪಾವತಿ, ಮೂರ್ನಾಡು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಬಿ.ಎಂ. ಕಲ್ಪನಾ ಸಾಮ್ರಾಟ್, ಮೂರ್ನಾಡು ವಿವಿಧೋದ್ದೇಶ ಪ್ರಾಥಮಿಕ ಕೃಷಿ ಗ್ರಾಮೀಣ ಸಹಕಾರ ಸಂಘದ ಅಧ್ಯಕ್ಷ ವಿಠಲ್ ಪೂವಯ್ಯ ಪಳಂಗಂಡ, ಬೆಂಗಳೂರಿನ ಕೊಡವ ಸ್ನೇಹಕೂಟದ ಅಧ್ಯಕ್ಷ ಅಚ್ಚಕಾಳೇರ ರವಿ ನಾಣಯ್ಯ, ಮೂರ್ನಾಡು ಕೊಡವ ಸಮಾಜದ ಅಧ್ಯಕ್ಷ ತೇಲಪಂಡ ಸುಬ್ಬಯ್ಯ, ಮೂರ್ನಾಡು ಗೌಡ ಸಮಾಜದ ಅಧ್ಯಕ್ಷ ಪಾಣತ್ತಲೆ ಟಿ. ಹರೀಶ್, ತ್ರಿನೇತ್ರ ಸಂಘದ ಗೌರವಾಧ್ಯಕ್ಷ ಎನ್.ಕೆ. ಕುಂಞರಾಮ, ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಮುಕ್ಕಾಟಿರ ರವಿ ಚೀಯಣ್ಣ, ಮುಸ್ಲಿಂ ಜಮಾಅತ್ ಅಧ್ಯಕ್ಷ ಕೆ.ಎ. ಅಬ್ದುಲ್ ಮಜೀದ್ ಹಾಗೂ ಇನ್‌ಫೆಂಟ್ ಜೀಸಸ್ ಚರ್ಚ್‌ನ ಉಪಾಧ್ಯಕ್ಷ ಕೆ.ಜೆ. ಮ್ಯಾಥ್ಯೂ ಜೋಸೆಫ್ ಉಪಸ್ಥಿತರಿದ್ದರು. ಸಂಘದ ಉಪಾಧ್ಯಕ್ಷ ಹೆಚ್.ಬಿ. ಲಿಂಗಪ್ಪ, ಕಾರ್ಯದರ್ಶಿ ಎನ್.ಎನ್. ಶರಣು, ಖಜಾಂಚಿ ಹೆಚ್.ಹೆಚ್. ಜಯಂತ್ ಕುಮಾರ್ ಹಾಗೂ ಸಹ ಕಾರ್ಯದರ್ಶಿ ಟಿ.ವಿ. ಹರೇಂದ್ರ ವೇದಿಕೆಯಲ್ಲಿದ್ದರು. ಸುಕನ್ಯ ಮತ್ತು ಸೌಜನ್ಯ ಪ್ರಾರ್ಥಿಸಿದರು. ಸಂಘದ ಕಾರ್ಯದರ್ಶಿ ಎನ್.ಎನ್. ಶರಣು ವರದಿ ವಾಚಿಸಿದರು. ಕಿಶೋರ್ ರೈ ಕತ್ತಲೆಕಾಡು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮಂಗಳೂರಿನ ಪುರಾವ್ ಮೆಲೋಡಿಸ್ ಮತ್ತು ಡ್ರೀಮ್ ಡ್ಯಾನ್ಸ್ ಟೀಮ್ ವತಿಯಿಂದ ರಸಮಂಜರಿ ಹಾಗೂ ಶರಣ್ ಅವರಿಂದ ಮಿಮಿಕ್ರಿ ಕಾರ್ಯಕ್ರಮ ನಡೆಯಿತು. ಸಂಘದ ವತಿಯಿಂದ ಸಾರ್ವಜನಿಕರಿಗೆ ಊಟೋಪಚಾರದ ವ್ಯವಸ್ಥೆ ಮಾಡಲಾಗಿತ್ತು.

ಚಿತ್ರ ಮತ್ತು ವರದಿ : ಟಿ.ಸಿ. ನಾಗರಾಜ್, ಮೂರ್ನಾಡು 

Follow us Follow us
Share. WhatsApp Facebook Twitter Email Telegram Copy Link

Related Posts

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು ಅ.22 NEWS DESK : ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 33ನೇ ವರ್ಷದ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಅ.24ರಂದು ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ : ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 22, 2026

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಸಂಭ್ರಮದ ತೆರೆ : ಶ್ರೀ ಕರವಲೆ ಭಗವತಿ ದೇವಾಲಯದ ಮಂಟಪಕ್ಕೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.