Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.23 NEWS DESK :  ದಸರಾ ಹಬ್ಬ ಹಿನ್ನೆಲೆ ನವರಾತ್ರಿ ಉತ್ಸವಕ್ಕೆ ಸಾಕ್ಷಿಯಾಗಿದ್ದ ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನವು ಶುಕ್ರವಾರ ನಡೆಯಿತು. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಸ್ವಚ್ಛತಾ ಸೇನಾನಿಗಳಾದ ಪೌರಕಾರ್ಮಿಕರ ಜೊತೆ ಸ್ವಚ್ಛತಾ ಅಭಿಯಾನದಲ್ಲಿ ಕೈಜೋಡಿಸಿ, ಗಮನ ಸೆಳೆದರು.
ಈ ಸಂದರ್ಭ ಮಾತನಾಡಿದ ಶಾಸಕರು, ಹಬ್ಬ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳು ಮುಗಿದ ಬಳಿಕ ಸ್ವಚ್ಛತೆ ಕಾಪಾಡುವುದು ಕೇವಲ ಒಂದು ದಿನದ ಕೆಲಸವಲ್ಲ. ವರ್ಷದ 365 ದಿನವೂ ಪರಿಸರ ಸ್ವಚ್ಛತೆ ಕಾಪಾಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದರು. ಸ್ವಚ್ಛತಾ ಕಾರ್ಯವು ಎಲ್ಲರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಪ್ಲಾಸ್ಟಿಕ್ ಸೇರಿದಂತೆ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದೆ, ನಿಗದಿತ ಕಸದ ತೊಟ್ಟಿಗಳಲ್ಲಿ ಹಾಕುವ ಅಭ್ಯಾಸವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದು ಶಾಸಕರು ತಿಳಿಸಿದರು. ದಸರಾ ಸೇರಿದಂತೆ ವಿವಿಧ ಹಬ್ಬಗಳ ಸಂದರ್ಭದಲ್ಲಿ ಜನರು ಸಂಭ್ರಮದಿಂದ ಭಾಗವಹಿಸುತ್ತಾರೆ. ಆದರೆ ಕಾರ್ಯಕ್ರಮ ಮುಗಿದ ಮರುದಿನವೇ ಸ್ವಚ್ಛತೆಯ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಹಬ್ಬದ ಸಂದರ್ಭದಲ್ಲಿ ಉಂಟಾಗುವ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡುವ ಮೂಲಕ ನಗರದ ಸ್ವಚ್ಛತೆ ಮತ್ತು ಸೌಂದರ್ಯವನ್ನು ಕಾಪಾಡಲು ಎಲ್ಲರೂ ಸಹಕರಿಸಬೇಕು ಎಂದು ಹೇಳಿದರು. ದಸರಾ ಸಂದರ್ಭದಲ್ಲಿ ನಗರದ ವಿವಿಧೆಡೆ ಕಸದ ತೊಟ್ಟಿಗಳನ್ನು ಇರಿಸಲಾಗಿರುತ್ತದೆ. ಸಾರ್ವಜನಿಕರು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ರಸ್ತೆಗಳಲ್ಲೇ ಕಸ ಎಸೆಯುವುದನ್ನು ನಿಲ್ಲಿಸಿ, ಪೌರಕಾರ್ಮಿಕರೊಂದಿಗೆ ಕೈಜೋಡಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಒಂದು ದಿನ ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸುವುದರಿಂದ ಮಾತ್ರ ಸ್ವಚ್ಛ ನಗರ ನಿರ್ಮಾಣ ಸಾಧ್ಯವಿಲ್ಲ. ವರ್ಷದ ಎಲ್ಲ ದಿನಗಳಲ್ಲಿಯೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು. ಮಡಿಕೇರಿ ನಗರದ ಸೌಂದರ್ಯವನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಸ್ವಚ್ಛತೆಯನ್ನು ಕೇವಲ ಪೌರಕಾರ್ಮಿಕರ ಕರ್ತವ್ಯವೆಂದು ಭಾವಿಸದೆ, ಸಾರ್ವಜನಿಕರೂ ತಮ್ಮ ಹೊಣೆಗಾರಿಕೆಯನ್ನು ಅರಿತು ನಡೆದುಕೊಳ್ಳಬೇಕು ಎಂದು ಕಿವಿ ಮಾತು ಹೇಳಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಸದಸ್ಯರಾದ ಆರ್.ಪಿ.ಚಂದ್ರಶೇಖರ್, ಮಿನಾಜ್ ಪ್ರವೀಣ್, ನಗರಸಭೆ ನಾಮ ನಿರ್ದೇಶಿತ ಸದಸ್ಯರಾದ ಜುಲೆಕಾಬಿ, ಮುದ್ದುರಾಜ್, ಸದಾಮುದ್ದಪ್ಪ, ಪ್ರಮುಖರಾದ ಪ್ರಕಾಶ್ ಆಚಾರ್ಯ, ಹಂಸ ಕೊಟ್ಟಮುಡಿ, ಓಂಕಾರೇಶ್ವರ ದೇವಾಲಯ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಸದಸ್ಯರಾದ ಅಂಬೆಕಲ್ ಕುಶಾಲಪ್ಪ, ಜಿ.ರಾಜೇಂದ್ರ, ಜಯಂತಿ ಶೆಟ್ಟಿ, ಮೋಹನ್ ವಿ.ಜಿ, ಫ್ಯಾನ್ಸಿ ಪಾರ್ವತಿ, ಕೊಚನ ಚೇತನ್, ಜಾನ್ಸನ್ ಪಿಂಟೊ, ಶಶಿ, ಪ್ರೇಮಲಿಂಗಪ್ಪ, ರವಿ ಪಾಪು, ವಸಂತ ಭಟ್, ಅಂಬೆಕಲ್ ನವೀನ್, ಹಬಿಬ್ ಕೀರ್ತನ್, ಲೀಲಾ ಶೇಷಮ್ಮ, ಕವನ್ ಕೊತ್ತೊಳ್ಳಿ, ಅರ್ಜುನ್, ಸೂರ್ಯ ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕಿತ್ತೂರು ರಾಣಿ ಚೆನ್ನಮ್ಮರ ತ್ಯಾಗ ಮತ್ತು ಶೌರ್ಯದ ಬದುಕು ಎಲ್ಲರಿಗೂ ಆದರ್ಶ : ಪುದಿಯನೆರವನ ರೇವತಿ ರಮೇಶ್

ಅಕ್ಟೋಬರ್ 23, 2026

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಮಡಿಕೇರಿ ಗಾಂಧಿ ಮೈದಾನದಲ್ಲಿ ಸ್ವಚ್ಛತಾ ಅಭಿಯಾನ : ವರ್ಷದ 365 ದಿನವೂ ಸ್ವಚ್ಛತೆಗೆ ಆದ್ಯತೆ ನೀಡಿ : ಶಾಸಕ ಡಾ.ಮಂತರ್ ಗೌಡ

ಅಕ್ಟೋಬರ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.23 NEWS DESK :  ದಸರಾ ಹಬ್ಬ ಹಿನ್ನೆಲೆ ನವರಾತ್ರಿ ಉತ್ಸವಕ್ಕೆ ಸಾಕ್ಷಿಯಾಗಿದ್ದ ನಗರದ ಗಾಂಧಿ ಮೈದಾನದಲ್ಲಿ ಸ್ವಚ್ಛತಾ…

ಗೋಣಿಕೊಪ್ಪಲು ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟ್ಯ ನಂದಿನಿ ವಿದ್ಯಾರ್ಥಿಗಳ ಭರತನಾಟ್ಯ ಪ್ರದರ್ಶನ

ಅಕ್ಟೋಬರ್ 22, 2026

ಮೂರ್ನಾಡಿನಲ್ಲಿ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಯುಧ ಪೂಜೆ : ಸಾಧಕರಿಗೆ ಸನ್ಮಾನ

ಅಕ್ಟೋಬರ್ 22, 2026

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯಲ್ಲಿ ಸಂಭ್ರಮದ ಆಯುಧ ಪೂಜೆ

ಅಕ್ಟೋಬರ್ 22, 2026

ವಿರಾಜಪೇಟೆ : ಶಿವಕೇರಿ ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿದ ನವರಾತ್ರಿ ಉತ್ಸವ

ಅಕ್ಟೋಬರ್ 22, 2026

ನ. 5ರಂದು ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳ ಕವಿಗೋಷ್ಠಿ; ಸ್ವರಚಿತ ಕವನಗಳನ್ನು ಅ. 30ರೊಳಗೆ ಕಳುಹಿಸಲು ಕಸಾಪ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಮನವಿ

ಅಕ್ಟೋಬರ್ 22, 2026

ನಾಪೋಕ್ಲುವಿನಲ್ಲಿ ನಾಲ್ಕು ನಾಡು ಆಟೋ ಚಾಲಕರ ಸಂಘದಿಂದ 34ನೇ ವರ್ಷದ ಆಯುಧ ಪೂಜೆ

ಅಕ್ಟೋಬರ್ 22, 2026

ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಆಯುಧಪೂಜಾ ಅಲಂಕಾರ ಸ್ಪರ್ಧೆ: ಟೀಮ್ ವಾರಿಯರ್ಸ್‌ಗೆ ಪ್ರಥಮ ಬಹುಮಾನ

ಅಕ್ಟೋಬರ್ 22, 2026

ಅ.24ರಂದು ಬಿ.ಎಸ್.ಗೋಪಾಲಕೃಷ್ಣ ದತ್ತಿ ಪ್ರಶಸ್ತಿ ಪ್ರದಾನ : ಬಾಳೆಯಡ ಕಿಶನ್ ಪೂವಯ್ಯ ಅವರ ‘ರಾಜಕೀಯ ಮತ್ತು ಪ್ರಕೃತಿ’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 22, 2026

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಯುವಕ ಸಾವು

ಅಕ್ಟೋಬರ್ 22, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.