ವಿರಾಜಪೇಟೆ ಅ.24 NEWS DESK : ಎಸ್ಜಿಎಫ್ಐ (SGFI – School Games Federation of India) ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್ಶಿಪ್ಗೆ ರಾಜಪೇಟೆಯ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ ಆಗುವ ಮೂಲಕ ಸಾಧನೆ ಮಾಡಿದ್ದಾರೆ. ವಿರಾಜಪೇಟೆಯ ಪ್ರಗತಿ ನರ್ಸರಿ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಧನ್ವಿ, ಸನ್ವಿ ಹಾಗೂ ಮಾನುಶ್ರೀ ಕೆ.ಎಂ. ಅವರು ಆಯ್ಕೆಯಾಗುವ ಮೂಲಕ ಶಾಲೆ ಹಾಗೂ ಕೊಡಗು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ರಾಜ್ಯಮಟ್ಟದ ಕ್ರಿಕೆಟ್ ಚಾಂಪಿಯನ್ಶಿಪ್ 2026ರ ಅಕ್ಟೋಬರ್ 27ರಿಂದ 29ರವರೆಗೆ ಕೋಲಾರದಲ್ಲಿ ನಡೆಯಲಿದ್ದು, ಈ ಮೂವರು ವಿದ್ಯಾರ್ಥಿನಿಯರು ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ. ವಿದ್ಯಾರ್ಥಿಗಳಲ್ಲಿನ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡುವಲ್ಲಿ ಪ್ರಗತಿ ಶಾಲೆ ನಿರಂತರವಾಗಿ ಶ್ರಮಿಸುತ್ತಿದೆ. ಮೂವರು ವಿದ್ಯಾರ್ಥಿನಿಯರ ಈ ಸಾಧನೆಯು ಶಾಲೆಯ ಕ್ರೀಡಾ ಕ್ಷೇತ್ರದ ಸಾಧನೆಗೆ ಮತ್ತೊಂದು ಗರಿ ಮೂಡಿಸಿದೆ. ವಿದ್ಯಾರ್ಥಿನಿಯರ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಕ್ರೀಡಾ ತರಬೇತುದಾರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದ ಚಾಂಪಿಯನ್ಶಿಪ್ನಲ್ಲಿ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ಕೊಡಗು ಜಿಲ್ಲೆಗೆ ಕೀರ್ತಿ ತರಲಿ ಎಂದು ಶುಭ ಹಾರೈಸಿದ್ದಾರೆ.


















