ವಿರಾಜಪೇಟೆ ಅ.24 NEWS DESK : ಅಂಡರ್-15 ಮಂಗಳೂರು ವಲಯದ ಮಹಿಳಾ ಕ್ರಿಕೆಟ್ ತಂಡಕ್ಕೆ ವಿರಾಜಪೇಟೆಯ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆಯಾಗಿದ್ದಾರೆ. ವಿರಾಜಪೇಟೆಯ ಪ್ರಗತಿ ನರ್ಸರಿ, ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ವಿನಯ ವಿ.ಎಸ್., ಪ್ರೇಕ್ಷಾ ಹಾಗೂ ವರ್ಷಿಣಿ ಅವರು ಅಂಡರ್-15 ಮಂಗಳೂರು ವಲಯದ ಮಹಿಳಾ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗುವ ಮೂಲಕ ಶಾಲೆಗೆ ಹಾಗೂ ಕೊಡಗು ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ. ಆಟಗಾರ್ತಿಯರು ಬೆಂಗಳೂರಿನ ಪ್ರತಿಷ್ಠಿತ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತರ್ ವಲಯ ಕ್ರಿಕೆಟ್ ಚಾಂಪಿಯನ್ಶಿಪ್ನಲ್ಲಿ ಮಂಗಳೂರು ವಲಯವನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಗಳಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ತರಬೇತಿ ಹಾಗೂ ಪ್ರೋತ್ಸಾಹ ನೀಡುವಲ್ಲಿ ಪ್ರಗತಿ ಶಾಲೆ ನಿರಂತರವಾಗಿ ಶ್ರಮಿಸುತ್ತಿದೆ. ಈ ಮೂವರು ವಿದ್ಯಾರ್ಥಿನಿಯರ ಆಯ್ಕೆ ಶಾಲೆಯ ಕ್ರೀಡಾ ಸಾಧನೆಗೆ ಮತ್ತೊಂದು ಗರಿ ಮೂಡಿಸಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಕ್ರೀಡಾ ತರಬೇತುದಾರರು ಮುಂಬರುವ ಚಾಂಪಿಯನ್ಶಿಪ್ನಲ್ಲಿ ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ಕೀರ್ತಿ ತರಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


















