Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ.25 : ಕೊಡಗು ಜಿಲ್ಲೆಯಲ್ಲಿ ಅನೇಕ ಸಮಸ್ಯೆಗಳು ತಾಂಡವವಾಡುತ್ತಿದ್ದು, ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಶೀಘ್ರವೇ ಕೊಡಗು ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಅವರು ಒತ್ತಾಯಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕೊಡಗು ಜಿಲ್ಲೆ ರಾಜ್ಯದ ಪ್ರಮುಖ ಪ್ರವಾಸೋದ್ಯಮ ಹಾಗೂ ಕಾಫಿ ಉತ್ಪಾದನಾ ಪ್ರದೇಶವಾಗಿದ್ದು, ಜಿಲ್ಲೆಯ ಜನರು ಹಲವು ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ರಸ್ತೆ, ಕುಡಿಯುವ ನೀರು, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ, ರೈತರ ಸಮಸ್ಯೆಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವು ಬೇಡಿಕೆಗಳು ಈಡೇರಬೇಕಿದೆ. ಜಿಲ್ಲೆಯ ಅಭಿವೃದ್ಧಿಗೆ ಸಂಬAಧಿಸಿದ ಸಮಸ್ಯೆಗಳಿಗೆ ಸರ್ಕಾರ ವಿಶೇಷ ಆದ್ಯತೆ ನೀಡಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕೊಡಗು ಜಿಲ್ಲೆಯ ಜನರ ಸಮಸ್ಯೆಗಳನ್ನು ಸಮಗ್ರವಾಗಿ ಚರ್ಚಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸಚಿವ ಸಂಪುಟ ಸಭೆ ಸಹಕಾರಿಯಾಗಲಿದೆ. ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವುದರ ಜೊತೆಗೆ, ವಿವಿಧ ಇಲಾಖೆಗಳ ಬಾಕಿ ಉಳಿದಿರುವ ಯೋಜನೆಗಳಿಗೆ ವೇಗ ನೀಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಿ, ಜನಪರ ನಿರ್ಧಾರಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಬೇಕು. ಕೊಡಗಿನ ಅಭಿವೃದ್ಧಿ ಹಾಗೂ ಜನರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ವಿಳಂಬ ಮಾಡದೆ ಶೀಘ್ರ ಸಚಿವ ಸಂಪುಟ ಸಭೆ ನಡೆಸಿ ಜಿಲ್ಲೆಯ ಪ್ರಮುಖ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ಜಿಲ್ಲೆಯ ರಸ್ತೆಗಳೆಲ್ಲವೂ ಸಂಪೂರ್ಣವಾಗಿ ಹದಗೆಟ್ಟಿವೆ. ರಸ್ತೆ ಅವ್ಯವಸ್ಥೆಯಿಂದ ನಾಡಹಬ್ಬ ದಸರಾವನ್ನು ಕೂಡ ಜಿಲ್ಲೆಯ ಜನ ಸಂಭ್ರಮದಿAದ ಆಚರಿಸಲು ಸಾಧ್ಯವಾಗಿಲ್ಲ. ಅಕ್ಟೋಬರ್ ತಿಂಗಳಿನಲ್ಲಿ ಸುರಿದ ಮಳೆಗೆ ಭತ್ತ ಬೆಳೆ ನಷ್ಟವಾಗಿದೆ. ವನ್ಯಜೀವಿಗಳ ದಾಳಿ ತಡೆಗೆ ಶಾಶ್ವತ ಪರಿಹಾರ ಇಲ್ಲಿಯವರೆಗೆ ಜಾರಿಗೆ ಬಂದಿಲ್ಲ. ಅರಣ್ಯ ಭೂಮಿ ಮತ್ತು ಕೃಷಿ ಭೂಮಿ ನಡುವಿನ ವಿವಾದ ಹಾಗೇ ಮುಂದುವರಿದಿದ್ದು, ರೈತರು ಆತಂಕದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿ ಮತ್ತು ಯುವ ಜನಾಂಗಕ್ಕೆ ಉದ್ಯೋಗ ಸೃಷ್ಟಿಸವ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ವಿವಿಧ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಗುತ್ತಿಗೆದಾರರ ಬಿಲ್ ಹಣ ಪಾವತಿಯಾಗದೆ ಅನೇಕ ವರ್ಷಗಳಾಗಿದೆ. ಇದೇ ಕಾರಣಕ್ಕೆ ಗುತ್ತಿಗೆದಾರರು ಯಾವುದೇ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ. ಕಾವೇರಿ ನದಿಯ ನೀರಿನಿಂದ ರಾಜ್ಯಕ್ಕೆ ಹೆಚ್ಚು ಲಾಭವಾಗುತ್ತಿದೆ, ಆದರೆ ಕಾವೇರಿ ಹುಟ್ಟುವ ತವರು ಜಿಲ್ಲೆ ಕೊಡಗನ್ನು ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಶಿವಕುಮಾರ್ ನಾಣಯ್ಯ ಟೀಕಿಸಿದ್ದಾರೆ.
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಲ್ಲಿನ ಅಭಿವೃದ್ಧಿಗಾಗಿ 32,611 ಕೋಟಿ ರೂ. ಮೊತ್ತದ ವಿವಿಧ ಯೋಜನೆಗಳಿಗೆ ಅನುಮೋದನೆ ನೀಡಿದ್ದಾರೆ. ಇದೇ ಮಾದರಿಯಲ್ಲಿ ಕಾವೇರಿನಾಡು ಕೊಡಗು ಜಿಲ್ಲೆಯ ಅಭಿವೃದ್ಧಿಗೂ ದೊಡ್ಡ ಮೊತ್ತದ ಹಣವನ್ನು ಬಿಡುಗಡೆ ಮಾಡಬೇಕು. ತುಳು ಭಾಷೆಗೆ ಮಾನ್ಯತೆ ನೀಡಿದಂತೆ ಕೊಡವ ಮತ್ತು ಅರೆಭಾಷೆಗೂ ಮಾನ್ಯತೆ ನೀಡಬೇಕು. ಈ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಲು ಮುಖ್ಯಮಂತ್ರಿಗಳು ಶೀಘ್ರ ಕೊಡಗಿನಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

 

Follow us Follow us
Share. WhatsApp Facebook Twitter Email Telegram Copy Link

Related Posts

ಅ.27ರಂದು 24ನೇ ಕೊಡಗಿನ ಗೌರಮ್ಮ ದತ್ತಿ ಪ್ರಶಸ್ತಿ ಪ್ರದಾನ; ಡಾ. ಲಲಿತ ಕೆ.ಪಿ. ಅವರ ‘ಕೊಡಗಿನ ಜಾನಪದ ಕಥೆಗಳು’ ಕೃತಿಗೆ ಪ್ರಶಸ್ತಿ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ವಿರಾಜಪೇಟೆಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ; ಸ್ವಾವಲಂಬಿ ಬದುಕಿಗೆ ಶಿಕ್ಷಣ ಮತ್ತು ಆರ್ಥಿಕ ಸ್ವಾತಂತ್ರ್ಯ ಮುಖ್ಯ: ಆನಂದ ಸುವರ್ಣ

ಅಕ್ಟೋಬರ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.25: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದಡಿ ವಿರಾಜಪೇಟೆಯ…

48ನೇ ಗೋಣಿಕೊಪ್ಪ ದಸರಾ ಜನೋತ್ಸವದಲ್ಲಿ ಭರತನಾಟ್ಯ ಮತ್ತು ಸಂಗೀತ ಪ್ರದರ್ಶನ

ಅಕ್ಟೋಬರ್ 25, 2026

ಕಿವುಡ ಕ್ರೀಡಾಪಟುಗಳಿಗೆ ಪ್ರಾಯೋಜಕತ್ವದ ನೆರವಿಗೆ ಕೊಡಗು ಜಿಲ್ಲಾ ಕಿವುಡರ ಸಂಘದ ಮನವಿ; ರಾಜ್ಯಮಟ್ಟದ ಕ್ರಿಕೆಟ್, ವಾಲಿಬಾಲ್ ಪಂದ್ಯಾವಳಿಗಳಲ್ಲಿ ಭಾಗವಹಿಸಲು ಸಜ್ಜು; ದಾನಿಗಳ ಸಹಕಾರಕ್ಕೆ ಅಧ್ಯಕ್ಷ ಸ್ಯಾಮ್ ಜೋಸೆಫ್ ಮನವಿ

ಅಕ್ಟೋಬರ್ 25, 2026

ನ. 2–3ರಂದು ರಾಜ್ಯಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ; 23 ಜಿಲ್ಲೆಗಳ ಪತ್ರಕರ್ತರ ತಂಡಗಳು ಭಾಗಿ; ಮಡಿಕೇರಿಯಲ್ಲಿ ಆಯೋಜನೆ

ಅಕ್ಟೋಬರ್ 25, 2026

ಮಾದಕ ದ್ರವ್ಯಗಳಿಂದ ದೂರವಿದ್ದು ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಎ.ಎಸ್.ಐ. ಸುಮತಿ; ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ಶಿಬಿರ

ಅಕ್ಟೋಬರ್ 25, 2026

ಕೊಡಗಿನಲ್ಲಿ ಶೀಘ್ರ ಸಚಿವ ಸಂಪುಟ ಸಭೆ ನಡೆಸಲು ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ಅಕ್ಟೋಬರ್ 25, 2026

ಮಂಗಳೂರು ವಲಯದ ಅಂಡರ್-15 ಮಹಿಳಾ ಕ್ರಿಕೆಟ್ ತಂಡಕ್ಕೆ ಪ್ರಗತಿ ಶಾಲೆಯ ಮೂವರು ವಿದ್ಯಾರ್ಥಿನಿಯರು ಆಯ್ಕೆ

ಅಕ್ಟೋಬರ್ 24, 2026

ಕುಶಾಲನಗರ : ಮಳೆಯಿಂದ ಮನೆಗಳಿಗೆ ಹಾನಿ

ಅಕ್ಟೋಬರ್ 24, 2026

ಮಳೆಯಿಂದ ಕೊಡಗಿನ ವಿವಿಧೆಡೆ ಹಾನಿ : ಕುಸಿದು ಬಿದ್ದ ಮನೆಗಳ ಗೋಡೆ, ಮೇಲ್ಛಾವಣಿ, ಕೊಟ್ಟಿಗೆ

ಅಕ್ಟೋಬರ್ 24, 2026

ಮಡಿಕೇರಿಯಲ್ಲಿ ಆರ್‌ಎಸ್‌ಎಸ್ ವಿಜಯದಶಮಿ ಪಥಸಂಚಲನ

ಅಕ್ಟೋಬರ್ 24, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.