ಮಾದಾಪುರ, NEWS DESK ಅ.28: ತಾಲ್ಲೂಕಿನ ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ವತಿಯಿಂದ ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲೆಯ ಇಕೋ ಕ್ಲಬ್ ಆಶ್ರಯದಲ್ಲಿ ಏಳು ದಿನಗಳ ವಾರ್ಷಿಕ ವಿಶೇಷ ಶಿಬಿರವನ್ನು ಆಯೋಜಿಸಲಾಗಿದೆ.
ಶಿಬಿರದಲ್ಲಿ ಪರಿಸರ ಸಂರಕ್ಷಣೆ ಕುರಿತು ವಿಶೇಷ ಉಪನ್ಯಾಸ ನೀಡಲಾಯಿತು. ಯುವಜನಾಂಗವು ಪರಿಸರದ ಮಹತ್ವವನ್ನು ಅರಿತು ಪ್ರಕೃತಿ ಮತ್ತು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂಬ ಸಂದೇಶವನ್ನು ಸಾರಲಾಯಿತು.
ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಎ.ಎಂ. ಭರತ್ ಕುಮಾರ್ ಮಾತನಾಡಿ, ಮಾನವನ ಚಟುವಟಿಕೆಗಳಿಂದ ಪ್ರಕೃತಿ, ಜೀವವೈವಿಧ್ಯ ಹಾಗೂ ನೈಸರ್ಗಿಕ ಸಂಪನ್ಮೂಲಗಳಿಗೆ ಹಾನಿಯಾಗದಂತೆ ರಕ್ಷಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಶಿಬಿರಾಧಿಕಾರಿ ಎನ್.ಎನ್. ಮನೋಹರ್ ಮಾತನಾಡಿ, ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಕುರಿತು ಜನಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಎಂ.ಎ. ನಾಚಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಉಪನ್ಯಾಸಕಿ ಕು. ಪ್ರಫುಲ್ಲ, ಶಾಲಾ ಶಿಕ್ಷಕರಾದ ಪಿ.ಜೆ. ಗ್ರೇಸಿ, ಬಿ.ಎಸ್. ಅನಿತ, ಕೆ. ಭವಾನಿ, ಅನ್ವರ್ ಪಾಷ, ಸಬೀನ, ನೇತ್ರಾವತಿ ಹಾಗೂ ಸಿಬ್ಬಂದಿ ಬಿ.ಎ. ಕಮಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

















