Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ. 28: ತಲಕಾವೇರಿ ವನ್ಯಜೀವಿ ಅಭಯಾರಣ್ಯವನ್ನು ಪ್ರವೇಶಿಸಿ ವನ್ಯಜೀವಿಗಳ ಬೇಟೆಯಾಡಲು ಯತ್ನಿಸಿದ ಎಂಟು ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ.

ಭಾಗಮಂಡಲ ವ್ಯಾಪ್ತಿಯ ಚೇರಂಡೇಣಿ, ಸಿಂಗತ್ತೂರು, ಕೊಟ್ಟೂರು ಹಾಗೂ ತಣ್ಣಿಮಾನಿ ಗ್ರಾಮದ ನಿವಾಸಿಗಳಾದ ಸಿ.ಆರ್. ಕಿಶೋರ್, ಹೆಚ್.ಸಿ. ರೋಷನ್, ಪಿ.ಜಿ. ಸತೀಶ್, ಕೆ.ಎಂ. ರಾಜೇಶ್, ಎಸ್.ಪಿ. ಹರೀಶ್ ಕುಮಾರ್, ಹರೀಶ್ ಪಿ.ಜಿ., ಬಿ.ಬಿ. ಶ್ರೀಕಾಂತ್ ಹಾಗೂ ಕೆ.ಆರ್. ಕರುಣೇಶ್ ಬಂಧಿತ ಆರೋಪಿಗಳಾಗಿದ್ದಾರೆ. ಮತ್ತೋರ್ವ ಆರೋಪಿ ಹೆಚ್.ಪಿ. ವಸಂತ ತಲೆಮರೆಸಿಕೊಂಡಿದ್ದಾನೆ.

ಒಟ್ಟು ಒಂಬತ್ತು ಮಂದಿ ಅ. 27ರಂದು ರಾತ್ರಿ ವನ್ಯಜೀವಿಗಳನ್ನು ಬೇಟೆಯಾಡುವ ಉದ್ದೇಶದಿಂದ ಒಂದು ಸಿಂಗಲ್ ಬ್ಯಾರೆಲ್ ಬಂದೂಕಿನೊಂದಿಗೆ ಮೂರು ವಾಹನಗಳಲ್ಲಿ ತಲಕಾವೇರಿ ವನ್ಯಜೀವಿ ಅಭಯಾರಣ್ಯವನ್ನು ಪ್ರವೇಶಿಸಿದ್ದರು ಎಂದು ಆರೋಪಿಸಲಾಗಿದೆ.

ಅಕ್ಕಿಕಂಡಿ ಎಪಿಸಿ ಬಳಿ ಗುಂಡಿನ ಶಬ್ದ ಕೇಳಿಬಂದ ಹಿನ್ನೆಲೆಯಲ್ಲಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಆರೋಪಿಗಳು ಸ್ಥಳದಿಂದ ಪರಾರಿಯಾಗಲು ಯತ್ನಿಸಿದರೂ, ಭಾಗಮಂಡಲದ ಬಳಿ ಮೂರು ವಾಹನಗಳಲ್ಲಿದ್ದ ಎಂಟು ಮಂದಿಯನ್ನು ವಶಕ್ಕೆ ಪಡೆಯಲಾಯಿತು.

ಆರೋಪಿಗಳಿಂದ ಎರಡು ಓಮ್ನಿ ವ್ಯಾನ್‌ಗಳು, ಒಂದು ಮಾರುತಿ ಕಾರು, ಕೃತ್ಯಕ್ಕೆ ಬಳಸಿದ ಒಂದು ಸಿಂಗಲ್ ಬ್ಯಾರೆಲ್ ಬಂದೂಕು, ಮೂರು ಕಾರ್ಟ್ರಿಡ್ಜ್‌ಗಳು, ಹೆಡ್‌ಟಾರ್ಚ್‌ಗಳು, ಚಾಕುಗಳು ಹಾಗೂ ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ತಲಕಾವೇರಿ ವನ್ಯಜೀವಿ ಅಭಯಾರಣ್ಯದ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಎಚ್.ಎಸ್., ಉಪ ವಲಯ ಅರಣ್ಯಾಧಿಕಾರಿ ಅಕ್ಕಮ್ಮ ಎನ್.ಎನ್. ಹಾಗೂ ಅರಣ್ಯ ವೀಕ್ಷಕರಾದ ಧನಂಜಯ್, ಕಿರಣ್, ವಿವೇಕ್, ಲಕ್ಷ್ಮಣ್, ರಾಜೇಶ್, ಜೀವನ್ ಮತ್ತು ರಾಘವೇಂದ್ರ ಅವರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಡಾ. ಬಿ.ಆರ್. ಅಂಬೇಡ್ಕರ್ ಶತಮಾನೋತ್ಸವ ಭವನ ನಿರ್ಮಾಣ ಸಮಿತಿಗೆ ಆಡಳಿತಾಧಿಕಾರಿ ನೇಮಕ

ಅಕ್ಟೋಬರ್ 28, 2026

ಅ.29ರಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026

ಅ.29ರಂದು ನಗರಸಭೆ ಬಿಜೆಪಿ ಆಡಳಿತದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಅಕ್ಟೋಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ.28: ಮಡಿಕೇರಿ ನಗರಸಭೆಯಲ್ಲಿ ಕಳೆದ ಐದು ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿ ಅಭಿವೃದ್ಧಿ ಕಾರ್ಯಗಳಲ್ಲಿ ಸಂಪೂರ್ಣ…

ತಲಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಬೇಟೆಗೆ ಯತ್ನ: 8 ಆರೋಪಿಗಳ ಬಂಧನ, ಓರ್ವ ಪರಾರಿ

ಅಕ್ಟೋಬರ್ 28, 2026

ಕುಶಾಲನಗರದಲ್ಲಿ 191ನೇ ಮಹಾ ಆರತಿ ಕಾರ್ಯಕ್ರಮ; ಕಾವೇರಿ ನದಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು: ಸದಾಶಿವ ಸ್ವಾಮೀಜಿ

ಅಕ್ಟೋಬರ್ 28, 2026

ಅಹಿಂದ ಬಳಗ ಕೊಡಗು ಜಿಲ್ಲೆಗೆ ನೂತನ ಪದಾಧಿಕಾರಿಗಳ ನೇಮಕ

ಅಕ್ಟೋಬರ್ 28, 2026

ಪಾಡಿ ಶ್ರೀ ಇಗ್ಗುತಪ್ಪ ದೇವಾಲಯದಲ್ಲಿ ‘ಪತ್ತಾಲೋಧಿ’ ಆರಾಧನೋತ್ಸವ ಸಂಪನ್ನ

ಅಕ್ಟೋಬರ್ 28, 2026

ಕೂರ್ಗ್ ಹೋಂಸ್ಟೇಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ; ಪ್ರವಾಸೋದ್ಯಮದ ಅಭಿವೃದ್ಧಿಗೆ ಜಿಲ್ಲಾಡಳಿತದಿಂದ ಅಗತ್ಯ ಸಹಕಾರ: ಜಿಲ್ಲಾಧಿಕಾರಿ ಸೋಮಶೇಖರ್ ಭರವಸೆ

ಅಕ್ಟೋಬರ್ 28, 2026

ಅಥ್ಲೆಟಿಕ್ಸ್‌ನಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಅಕ್ಟೋಬರ್ 28, 2026

ನ. 8ರಂದು ಕೊಡಗು ಗೌಡ ಮಾಜಿ ಯೋಧರ ಒಕ್ಕೂಟದ 16ನೇ ವರ್ಷದ ವಾರ್ಷಿಕ ಸಂತೋಷ ಕೂಟ

ಅಕ್ಟೋಬರ್ 28, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ

ಅಕ್ಟೋಬರ್ 28, 2026

ಡ್ರಗ್ ವ್ಯಸನದ ವಿರುದ್ಧ ಶಿಕ್ಷಣ ಸಂಸ್ಥೆಗಳಲ್ಲಿ ಜಾಗೃತಿ ಮೂಡಿಸಿ : ಅನಿಲ್ ಹೆಚ್.ಟಿ.

ಅಕ್ಟೋಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.