ಮಡಿಕೇರಿ, NEWS DESK ಅ.28: ಮಡಿಕೇರಿ ನಗರಸಭೆಯಲ್ಲಿ ಕಳೆದ ಐದು ವರ್ಷಗಳಿಂದ ಆಡಳಿತ ನಡೆಸಿದ ಬಿಜೆಪಿ ಅಭಿವೃದ್ಧಿ ಕಾರ್ಯಗಳಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಮಡಿಕೇರಿ ನಗರ ಕಾಂಗ್ರೆಸ್ ಸಮಿತಿಯು ಅ.29ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಅವರು, ಗುರುವಾರ ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿಯಿಂದ ನಗರಸಭೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ರಸ್ತೆಗಳ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಬಿಜೆಪಿ ಆಡಳಿತ ವಿಫಲವಾಗಿದೆ. ಕಳೆದ ಐದು ವರ್ಷಗಳಲ್ಲಿ ಯಾವುದೇ ಗಮನಾರ್ಹ ಸಾಧನೆ ಮಾಡಿಲ್ಲ ಎಂದು ಆರೋಪಿಸಿರುವ ಅವರು, ನಗರದ ಜನತೆ ಆಡಳಿತದ ಬಗ್ಗೆ ಬೇಸತ್ತಿದ್ದಾರೆ ಎಂದು ಹೇಳಿದ್ದಾರೆ.
















