ವಿರಾಜಪೇಟೆ ಅ.28 NEWS DESK : ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ವಿರಾಜಪೇಟೆ ತಾಲೂಕು ಘಟಕದ ವತಿಯಿಂದ ವಿಜಯದಶಮಿ ಪ್ರಯುಕ್ತ ಅ.31ರಂದು ಶನಿವಾರ ಪಥಸಂಚಲನ ಕಾರ್ಯಕ್ರಮ ಆಯೋಜಿಸಲಾಗಿದೆ. ಅಂದು ಸಂಜೆ 3 ಗಂಟೆಗೆ ವಿರಾಜಪೇಟೆಯ ಪಂಜರಪೇಟೆಯಿಂದ ಪಥಸಂಚಲನ ಆರಂಭವಾಗಿ ಮಹಿಳಾ ಸಮಾಜದವರೆಗೆ ಸಾಗಲಿದೆ. ಧರ್ಮ, ಸಂಸ್ಕೃತಿ ಹಾಗೂ ರಾಷ್ಟ್ರಭಕ್ತಿಯ ಸಂದೇಶ ಸಾರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಬಂಧು-ಮಿತ್ರರು ಕುಟುಂಬ ಸಮೇತರಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸಂಘಟಕರು ಮನವಿ ಮಾಡಿದ್ದಾರೆ.

















