ಮಡಿಕೇರಿ ಅ.28 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿರುವ ಸರ್ಕಾರಿ ಶುಶ್ರೂಷಾ ಕಾಲೇಜಿನಲ್ಲಿ ಬಿ.ಎಸ್ಸಿ. ನರ್ಸಿಂಗ್ ಪದವಿ ಕೋರ್ಸ್ಗೆ ಬಾಕಿ ಉಳಿದಿರುವ 52 ಸೀಟುಗಳನ್ನು ನೇರ ಪ್ರವೇಶಾತಿ (ವಾಕ್-ಇನ್ ಅಡ್ಮಿಷನ್) ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ, ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ಗೆ ಸೇರಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ (RGUHS) ನಿಯಮಾನುಸಾರ ಪ್ರವೇಶಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ದಾಖಲೆಗಳೊಂದಿಗೆ ಅಕ್ಟೋಬರ್ 30ರಂದು (ಶುಕ್ರವಾರ) ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆಯೊಳಗೆ ಮಡಿಕೇರಿಯ ಸರ್ಕಾರಿ ಶುಶ್ರೂಷಾ ಕಾಲೇಜಿಗೆ ಹಾಜರಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ಸರ್ಕಾರದ ಮಾರ್ಗಸೂಚಿಗಳನ್ವಯ ಮೆರಿಟ್ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು ಎಂದು ತಿಳಿಸಲಾಗಿದೆ. :: ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:: ಮಂಜುಳಾ ಎ.ಕೆ. — ಪ್ರಾಂಶುಪಾಲರು, ಸರ್ಕಾರಿ ಶುಶ್ರೂಷಾ ಕಾಲೇಜು, ಮಡಿಕೇರಿ. ಮೊಬೈಲ್: 8088835156, ಗುರುಪಾದ ಕೆ.ಪಿ. — ಸಮನ್ವಯಾಧಿಕಾರಿ, ಸರ್ಕಾರಿ ಶುಶ್ರೂಷಾ ಕಾಲೇಜು, ಮಡಿಕೇರಿ. ಮೊಬೈಲ್: 9964244304

















