ಮಡಿಕೇರಿ NEWS DESK ಅ.29 : ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘ, ಕೊಡಗು ಜಿಲ್ಲಾ ಕುಲಾಲ ಕುಂಬಾರ ಯುವ ಘಟಕ, ಮಹಿಳಾ ಘಟಕ ಹಾಗೂ ಸಮಸ್ತ ಕುಲಾಲ ಕುಂಬಾರ ಕುಲಬಾಂಧವರು ಮಡಿಕೆಬೀಡು, ಮಾಯಮುಡಿ ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಕುಲಾಲ ಕುಂಬಾರರ ಚಾಂಪಿಯನ್ಸ್ ಲೀಗ್ ಕ್ರಿಕೆಟ್ ಪಂದ್ಯಾವಳಿ-2026ರ ಸೀಸನ್-2 ಆಯೋಜಿಸಲಾಗಿದೆ. ಪಂದ್ಯಾವಳಿ ಅ.31 ಮತ್ತು ನ.1ರಂದು ಮಾಯಮುಡಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. *ಅ.31ರಂದು ಉದ್ಘಾಟನಾ ಸಮಾರಂಭ* ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ಲಯನ್ ದಾಮೋದರ್ ಅವರ ಅಧ್ಯಕ್ಷತೆಯಲ್ಲಿ ಅ.31ರಂದು ಬೆಳಿಗ್ಗೆ 8 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ. ಕರ್ನಾಟಕ ಸರ್ಕಾರದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ ಅವರು ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದಾರೆ. ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಸ್ಥಾಪಕ ಅಧ್ಯಕ್ಷರಾದ ಮುತ್ತಮ್ಮ ಕೋಟಿ, ಸಂಘದ ಮಾಜಿ ಅಧ್ಯಕ್ಷ ಎಂ.ಡಿ.ನಾಣಯ್ಯ, ಕುಶಾಲಪ್ಪ ಮೂಲ್ಯ, ಮಾಯಮುಡಿ ಗ್ರಾ.ಪಂ ಮಾಜಿ ಅಧ್ಯಕ್ಷ ಎ.ಎಸ್.ಟಾಟು ಮೊಣ್ಣಪ್ಪ, ಜಿ.ಪಂ ಮಾಜಿ ಸದಸ್ಯ ಬಿ.ಎನ್.ಪ್ರಥ್ಯು, ಕಾಫಿ ಬೆಳೆಗಾರ ಕಿಟ್ಟು ಅಯ್ಯಪ್ಪ (ಕೋಣನಕಟ್ಟೆ), ಕೃಷಿ ಪತ್ತಿನ ಸಹಕಾರ ಸಂಘದ ಮಾಯಮುಡಿಯ ಮಾಜಿ ಅಧ್ಯಕ್ಷ ಎಸ್.ಎಸ್.ಸುರೇಶ್, ಕಾಫಿ ಬೆಳೆಗಾರ ಸಿ.ಕೆ.ಪ್ರದೀಪ್ (ಧನುಗಾಲ), ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎ.ಎ.ಬೋಪಣ್ಣ, ಕಾಫಿ ಬೆಳೆಗಾರರಾದ ಎ.ಸಿ.ಪ್ರದೀಪ್ (ಬಾಳಾಜಿ), ಸಣ್ಣುವಂಡ ಎಂ.ಸುರೇಶ್ (ಮಾಯಮುಡಿ), ಎ.ಎಸ್.ನಾಚಯ್ಯ (ಬಾಳಾಜಿ) ಹಾಗೂ ಮಾಚಿಮಾಡ ನಂದ (ಮಾಯಮುಡಿ) ಉಪಸ್ಥಿತರಿರುವರು.
*ನ.1ರಂದು ಸಮಾರೋಪ ಸಮಾರಂಭ* ನ.1ರ0ದು ಬೆಳಿಗ್ಗೆ 9 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಜಿಲ್ಲಾಧ್ಯಕ್ಷ ಲಯನ್ ದಾಮೋದರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕÀ ಡಾ.ಮಂತರ್ ಗೌಡ, ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಕಾಫಿ ಬೆಳೆಗಾರರಾದ ಕೆ.ಎಂ.ಗಣಪತಿ, ಕೆ.ಟಿ.ಬಿದ್ದಪ್ಪ, ಕೆ.ಸಿ.ಸುಧೀರ್, ಎಸ್.ಎಂ.ವಿಶ್ವನಾಥ್, ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಉಪಾಧ್ಯಕ್ಷರಾದ ಸುರೇಶ್ ಕುಲಾಲ್, ಸಂಘದ ಮಾಜಿ ಕಾರ್ಯದರ್ಶಿ ಅರುಣ್ ಕುಲಾಲ್, ಮಡಿಕೆಬೀಡು ಶ್ರೀ ಬಸವೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರಾದ ಕೆ.ಆರ್. ಚಂದ್ರ, ಮಡಿಕೆಬೀಡು ಕುಂಬಾರ ಕುಲಾಲ ಸಂಘದ ಅಧ್ಯಕ್ಷ ಕೆ.ಎನ್.ಶಿವು, ಮಾಯಮುಡಿ ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯರು ಹಾಗೂ ಕೃಷಿಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಕೆ.ಆರ್.ಶ್ರೀನಿವಾಸ್, ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ.ಆರ್.ರಮೇಶ್, ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಕಾಂತಿಮಣಿ, ಯುವ ಘಟಕದ ಅಧ್ಯಕ್ಷರಾದ ಜಿ.ಪಿ.ಕುಲಾಲ್ ಹಾಗೂ ವಿರಾಜಪೇಟೆಯ ಎಲ್ಐಸಿ ವ್ಯವಸ್ಥಾಪಕÀ ಮಧುಸೂದನ್ ಉಪಸ್ಥಿತರಿರುವರು. ಕುಲಾಲ ಕುಂಬಾರ ಸಮುದಾಯದ ಕ್ರೀಡಾಪಟುಗಳಿಗೆ ವೇದಿಕೆ ಕಲ್ಪಿಸುವುದರ ಜೊತೆಗೆ ಸಮುದಾಯದ ಬಾಂಧವ್ಯ ಮತ್ತು ಒಗ್ಗಟ್ಟನ್ನು ಬಲಪಡಿಸುವ ಉದ್ದೇಶದಿಂದ ಪಂದ್ಯಾವಳಿಯನ್ನು ಆಯೋಜಿಸಿದ್ದು, ಕ್ರೀಡಾಭಿಮಾನಿಗಳು ಹಾಗೂ ಸಮುದಾಯ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಕೋರಿದ್ದಾರೆ.

















