Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಯುವಜನರಿಗೆ ಸ್ವಉದ್ಯೋಗ ಕಲ್ಪಿಸುವತ್ತ ತರಬೇತಿ ಕಾರ್ಯಕ್ರಮ ಆಯೋಜಿಸಿ : ಜಿಲ್ಲಾಧಿಕಾರಿ ಸೋಮಶೇಖರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಯುವಜನರಿಗೆ ಸ್ವಉದ್ಯೋಗ ಕಲ್ಪಿಸುವತ್ತ ತರಬೇತಿ ಕಾರ್ಯಕ್ರಮ ಆಯೋಜಿಸಿ : ಜಿಲ್ಲಾಧಿಕಾರಿ ಸೋಮಶೇಖರ್

ಅಕ್ಟೋಬರ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, ಅ.29 NEWS DESK : ಮುಖ್ಯಮಂತ್ರಿ ಅವರ ಕೌಶಲ್ಯ ಕರ್ನಾಟಕ ಯೋಜನೆಯು ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮವಾಗಿದ್ದು, ಯುವಜನತೆಗೆ ಕೌಶಲ್ಯ ತರಬೇತಿ ಕಾರ್ಯಕ್ರಮ ಏರ್ಪಡಿಸಿ ಉದ್ಯೋಗ ಕಲ್ಪಿಸುವತ್ತ ಹೆಚ್ಚಿನ ಗಮನಹರಿಸುವಂತೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ವತಿಯಿಂದ ಜಿಲ್ಲಾ ಕೌಶಲ್ಯ ಮಿಷನ್ ಅನುಷ್ಠಾನ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಿಗೆ ಭೇಟಿ ನೀಡಿ ಯುವಜನರಿಗೆ ಸ್ವಉದ್ಯೋಗದ ಕೌಶಲ್ಯ ತರಬೇತಿ ನೀಡಿ ಉದ್ಯೋಗದತ್ತ ಗಮನಹರಿಸಲು ಸಲಹೆ, ಮಾರ್ಗದರ್ಶನ ನೀಡಬೇಕು. ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗೂ ಸಹ ಅಗತ್ಯ ತರಬೇತಿ ಕಾರ್ಯಕ್ರಮ ಏರ್ಪಡಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿಗೆ ನಿರ್ದೇಶನ ನೀಡಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಅಧಿಕಾರಿ ರೇಖಾ ಗಣಪತಿ ಅವರು ಮಾತನಾಡಿ ಪ್ರಸಕ್ತ ವರ್ಷದಲ್ಲಿ ಮುಖ್ಯಮಂತ್ರಿ ಅವರ ಕೌಶಲ್ಯ ಕರ್ನಾಟಕ ಯೋಜನೆಯಡಿ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಬೇಡಿಕೆ ಇದ್ದು, ಕೌಶಲ್ಯ ತರಬೇತಿ ನೀಡಲು ಉದ್ದೇಶಿಸಲಾಗಿದೆ ಎಂದರು. ಡಾಟಾ ಎಂಟ್ರಿ ಆಪರೇಟರ್, ಪ್ಲಂಬಿಂಗ್, ಪೇಯಿಟಿಂಗ್, ವಿದ್ಯುತ್ ಚಾಲಿತ ಬ್ಯಾಟರಿ ರಿಪೇರಿ, ನರ್ಸರಿ, ಅಣಬೆ ಬೇಸಾಯ, ಜೇನು ಕೃಷಿ, ಟೈಲರಿಂಗ್, ಎಂಬ್ರಾಯಿಡಿಂಗ್, ಅಟೋ ಮೊಬೈಲ್, ಹೀಗೆ 29 ಬಗೆಯ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ರೇಖಾ ಅವರು ಮಾಹಿತಿ ನೀಡಿದರು. ಯುವನಿಧಿ ಯೋಜನೆಯಡಿ ಪದವಿ ಮತ್ತು ಡಿಪ್ಲೋಮ ಪೂರ್ಣಗೊಳಿಸಿದ ಯುವಜನರಿಗೆ ಆರ್ಥಿಕ ನೆರವು ನೀಡುವ ಗ್ಯಾರಂಟಿ ಯೋಜನೆಯಾಗಿದ್ದು, ಈ ಕಾರ್ಯಕ್ರಮದಡಿ ಡಿಬಿಟಿ ಮೂಲಕ ಅರ್ಹರಿಗೆ ಹಣ ಪಾವತಿಸಲಾಗುತ್ತಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್ ಅವರು ಮಾಹಿತಿ ನೀಡಿದರು. ಜಿಲ್ಲೆಯಲ್ಲಿ ಒಟ್ಟು 2511 ಯುವಜನರು ಯುವನಿಧಿ ಯೋಜನೆಯಡಿ ಹೆಸರು ನೋಂದಾಯಿಸಿದ್ದಾರೆ. ಕುಶಾಲನಗರ ತಾಲ್ಲೂಕಿನ- 416, ಮಡಿಕೇರಿ 673, ಪೊನ್ನಂಪೇಟೆ 269, ಸೋಮವಾರಪೇಟೆ 731, ವಿರಾಜಪೇಟೆ 422 ಮಂದಿ ಹೆಸರು ನೋಂದಾಯಿಸಿದ್ದಾರೆ ಎಂದು ಅವರು ಹೇಳಿದರು. ಯುವನಿಧಿ ಪ್ಲಸ್ ಯೋಜನೆಯಡಿ ನಿರುದ್ಯೋಗಿ ಪದವಿ ಮತ್ತು ಡಿಪ್ಲೋಮ ಹೊಂದಿರುವವರ ಉದ್ಯೋಗ ಸಾಮಥ್ರ್ಯವನ್ನು ಸುಧಾರಿಸಲು ಕೌಶಲ್ಯಾಭಿವೃದ್ಧಿ ಉಪಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ ಸಿಡಾಕ್ ವತಿಯಿಂದಲೂ ಉದ್ಯಮಶೀಲತಾ ತಿಳುವಳಿಕೆ ಶಿಬಿರ ಹಮ್ಮಿಕೊಳ್ಳಲಾಗುತ್ತದೆ ಎಂದು ಸಿಡಾಕ್ ಸಂಸ್ಥೆಯ ಪ್ರತಿನಿಧಿ ಅವರು ವಿವರಿಸಿದರು. ನಲ್-ಜಲ್ ಮಿತ್ರ ಯೋಜನೆಯಡಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ವತಿಯಿಂದ ಭಾರತ ಸರ್ಕಾರದ ಜಲಶಕ್ತಿ ಸಚಿವಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಉಧ್ಯಮಶೀಲತೆ ಸಚಿವಾಲಯ ಸಹಯೋಗದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ನಲ್-ಜಲ್ ಮಿತ್ರ ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತದೆ ಎಂದು ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ಹೇಳಿದರು. ಪಿಎಂ ಸ್ವನಿಧಿ ಯೋಜನೆ ಅನುಷ್ಠಾನ ಸೇರಿದಂತೆ ಹಲವು ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಅವರು ಮಾಹಿತಿ ನೀಡಿದರು. ಮೋಂತಿ ಗಣೇಶ್ ಅವರು ಮಾತನಾಡಿ ಜಿಲ್ಲೆಯಲ್ಲಿ ವಿದ್ಯುತ್ ಹಾಗೂ ಪ್ಲಂಮ್ಮಿಂಗ್ ಮತ್ತಿತರ ಕೌಶಲ್ಯ ವೃತ್ತಿಗೆ ಹೆಚ್ಚಿನ ಬೇಡಿಕೆ ಇದ್ದು, ಈ ತರಬೇತಿ ನೀಡುವಂತಾಗಬೇಕು ಎಂದು ಸಲಹೆ ಮಾಡಿದರು. ಅತಿಥಿ ವೃಕ್ಷ ತರಬೇತಿ ಸಂಸ್ಥೆಯ ಶಾಲಿನಿ ಅವರು ಮಾತನಾಡಿ ಇಂದಿನ ಯುವಜನರು ಕೌಶಲ್ಯಾಭಿವೃದ್ಧಿ ಪಡೆಯುವುದರ ಜೊತೆಗೆ ಪೂರ್ಣಾವಧಿಯ ಕೆಲಸ ಪಡೆಯಲು ಇಷ್ಟಪಡುತ್ತಾರೆ ಎಂದು ಅವರು ಮಾಹಿತಿ ನೀಡಿದರು. ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಗಂಗಾಧರ್ ನಾಯ್ಕ್ ಅವರು ಮಾತನಾಡಿ ಕೂಡಿಗೆಯಲ್ಲಿರುವ ಯೂನಿಯನ್ ಬ್ಯಾಂಕ್‍ನ ಸ್ವಉದ್ಯೋಗ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಹಲವು ಸ್ವ ಉದ್ಯೋಗ ತರಬೇತಿ ನಡೆಯುತ್ತಿದ್ದು, ಈ ಸೌಲಭ್ಯವನ್ನು ಬಳಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು. ಐಟಿಐ ಕಾಲೇಜಿನ ಪ್ರಾಂಶುಪಾಲರಾದ ಯೋಗೇಶ್, ಐಟಿಐ ಕಾಲೇಜಿನ ತರಬೇತಿ ಅಧಿಕಾರಿ ಇಂದ್ರೇಶ್ ಅವರು ಮಾತನಾಡಿ ಸಿಸಿಟಿವಿ ಅಳವಡಿಸುವುದು, ಪ್ಲಂಬಿಂಗ್, ಹೌಸ್ ವೈಯರಿಂಗ್, ಕಂಪ್ಯೂಟರ್ ತರಬೇತಿ ಹೀಗೆ ವಿವಿಧ ರೀತಿಯ ಕೌಶಲ್ಯ ತರಬೇತಿಯನ್ನು ಐಟಿಐ ಕಾಲೇಜು ಮೂಲಕ ನೀಡಬಹುದಾಗಿದೆ ಎಂದರು. ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಶಶಿಧರ, ಕೃಷಿ ಇಲಾಖೆ ಉಪ ನಿರ್ದೇಶಕರಾದ ಸೋಮಶೇಖರ, ಸ್ಥಳೀಯ ಸಂಸ್ಥೆ ಮುಖ್ಯಾಧಿಕಾರಿಗಳಾದ ಕೃಷ್ಣ ಪ್ರಸಾದ್, ನಾಚಪ್ಪ, ಗೋಪಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮಿಕ್ಸ್ ಬಾಕ್ಸಿಂಗ್‌ನಲ್ಲಿ ಕೃತನ್ ಹಾಗೂ ಸಂದೀಪ್‌ಗೆ ಬೆಳ್ಳಿ ಪದಕ

ಅಕ್ಟೋಬರ್ 30, 2026

ತೋಳೂರು ಶೆಟ್ಟಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನವೆಂಬರ್‌ನಲ್ಲಿ ಸರಣಿ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026

ತೋಳೂರು ಶೆಟ್ಟಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ಅ. 30: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು…

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನವೆಂಬರ್‌ನಲ್ಲಿ ಸರಣಿ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026

ಮುಂದಿನ ಕಸಾಪ ಅಧ್ಯಕ್ಷರನ್ನಾಗಿ ಟಿ.ಪಿ.ರಮೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ವಿಶ್ವಾಸ

ಅಕ್ಟೋಬರ್ 30, 2026

ರಾಪಿಡೋ, ರೆಂಟಲ್ ಬೈಕ್ ಸೇವೆಗೆ ಕಡಿವಾಣಕ್ಕೆ ಆಗ್ರಹಿಸಿ ಮಡಿಕೇರಿಯಲ್ಲಿ ಆಟೋ ಚಾಲಕರ ಬೃಹತ್ ಪ್ರತಿಭಟನೆ

ಅಕ್ಟೋಬರ್ 30, 2026

ಹಾಕಿ ಕ್ಷೇತ್ರದ ಸಾಧನೆಗೆ ಡಾ. ಎ.ಬಿ. ಸುಬ್ಬಯ್ಯ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಗೆ ಚಾಲನೆ; ಕೊಡಗು ಕ್ರೀಡೆಗಳ ತಪೋಭೂಮಿ: ಜಿ. ಚಿದ್ವಿಲಾಸ್ ಬಣ್ಣನೆ

ಅಕ್ಟೋಬರ್ 30, 2026

ಫ್ಯಾಷನ್ ಕ್ಷೇತ್ರದ ಸಾಧನೆಗೆ ಪ್ರಸಾದ್ ಬಿದ್ದಪ್ಪ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಅಕ್ಟೋಬರ್ 30, 2026

‘ಮುತ್ತುನಾಡ್’ ಚಿತ್ರದಲ್ಲಿ ಪ್ರಕೃತಿ ವಿಕೋಪದ ನೋವು, ಮೌನದ ಸಂಭಾಷಣೆಯ ಅನಾವರಣ

ಅಕ್ಟೋಬರ್ 30, 2026

ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕರ ಹಾಗೂ ಶಿಕ್ಷಕರ ಸಭೆ

ಅಕ್ಟೋಬರ್ 30, 2026

ಆರ್ಯನ್ ಕುನ್ವರ್ ಗೆ ಉದ್ದ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.