Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಗೆ ಚಾಲನೆ; ಕೊಡಗು ಕ್ರೀಡೆಗಳ ತಪೋಭೂಮಿ: ಜಿ. ಚಿದ್ವಿಲಾಸ್ ಬಣ್ಣನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಗೆ ಚಾಲನೆ; ಕೊಡಗು ಕ್ರೀಡೆಗಳ ತಪೋಭೂಮಿ: ಜಿ. ಚಿದ್ವಿಲಾಸ್ ಬಣ್ಣನೆ

ಅಕ್ಟೋಬರ್ 30, 20263 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ಅ. 30: ಹಾಕಿ ಕೂರ್ಗ್ ಕ್ಲಬ್ ಹಾಗೂ ಕೇರಳದ ಯುನೈಟೆಡ್ ತಲಚೇರಿ ಸ್ಪೋರ್ಟ್ಸ್ ಕ್ಲಬ್ ಸಹಭಾಗಿತ್ವದಲ್ಲಿ ಹಾಕಿ ಕೂರ್ಗ್ ಅಧೀನದ ಮಡಿಕೇರಿಯ ಸಾಯಿ ಕ್ರೀಡಾ ತರಬೇತಿ ಕೇಂದ್ರದ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 2ನೇ ಆವೃತ್ತಿಯ ‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಗೆ ಶುಕ್ರವಾರ ಚಾಲನೆ ನೀಡಲಾಯಿತು.

ಶಕ್ತಿ ದಿನಪತ್ರಿಕೆಯ ಸಂಪಾದಕ ಜಿ. ಚಿದ್ವಿಲಾಸ್ ಅವರು ಹಾಕಿ ಸ್ಟಿಕ್‌ನಿಂದ ಚೆಂಡನ್ನು ಗೋಲ್‌ಪೋಸ್ಟ್‌ಗೆ ಬಾರಿಸುವ ಮೂಲಕ ಪಂದ್ಯಾವಳಿಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಬಳಿಕ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಬರಗಾಲದ ಆತಂಕ ಎದುರಾಗಿದ್ದರೂ ಕ್ರೀಡಾಕೂಟಗಳಿಗೆ ಯಾವುದೇ ಬರವಿಲ್ಲ. ಪಾಂಡಂಡ ಕುಟ್ಟಪ್ಪ ಅವರು ಹಾಕಿ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯಲ್ಲಿ ವಿವಿಧ ಕ್ರೀಡೆಗಳು ಬೆಳೆಯಲು ಭದ್ರ ಬುನಾದಿ ಹಾಕಿದ್ದಾರೆ. ಅವರ ಪ್ರಯತ್ನದಿಂದ ಕೊಡಗು ಜಿಲ್ಲೆ ಕ್ರೀಡೆಯ ತಪೋಭೂಮಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕ್ರೀಡಾಪಟುಗಳು ರೂಪುಗೊಳ್ಳಲಿ

ಕೊಡಗು ಜಿಲ್ಲೆಗೆ ಹಾಕಿ ಕ್ರೀಡೆಯು ಬಹುದೊಡ್ಡ ಕೊಡುಗೆ ನೀಡಿದ್ದು, ಕೌಟುಂಬಿಕ ಹಾಕಿ ಪಂದ್ಯಾವಳಿಗಳು ಗಿನ್ನೆಸ್ ದಾಖಲೆ ನಿರ್ಮಿಸಿವೆ. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳನ್ನು ರೂಪಿಸುವ ಕೆಲಸವೂ ನಡೆಯಬೇಕಿದೆ. ಹಾಕಿ ಕೂರ್ಗ್, ಹಾಕಿ ಅಕಾಡೆಮಿ ಹಾಗೂ ಹಾಕಿ ಪಂದ್ಯಾವಳಿಗಳನ್ನು ಆಯೋಜಿಸುವ ಸಂಸ್ಥೆಗಳು ಜಿಲ್ಲೆಯಲ್ಲಿ ಹಾಕಿ ತರಬೇತಿ ಸಂಸ್ಥೆಯನ್ನು ಆರಂಭಿಸಲು ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಕೂಡಿಗೆ ಕ್ರೀಡಾ ಶಾಲೆಯನ್ನು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟಕ್ಕೆ ತಕ್ಕಂತೆ ಅಭಿವೃದ್ಧಿಪಡಿಸಬೇಕು. ಇದಕ್ಕಾಗಿ ಮಾಜಿ ಕ್ರೀಡಾಪಟುಗಳು ಸರ್ಕಾರದೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಎರಡು ರಾಜ್ಯಗಳ ಮನಸ್ಸುಗಳನ್ನು ಬೆಸೆಯುವ ವೇದಿಕೆ

ಹಾಕಿ ಕೂರ್ಗ್ ಕ್ಲಬ್ ಹಾಗೂ ಕೇರಳದ ಯುನೈಟೆಡ್ ತಲಚೇರಿ ಸ್ಪೋರ್ಟ್ಸ್ ಕ್ಲಬ್ ಜಿಲ್ಲೆಯಲ್ಲಿ ಹಾಕಿ ಪಂದ್ಯಾವಳಿ ಆಯೋಜಿಸುವ ಮೂಲಕ ಕ್ರೀಡೆಯನ್ನು ಜೀವಂತವಾಗಿಡಲು ನಡೆಸುತ್ತಿರುವ ಪ್ರಯತ್ನ ಶ್ಲಾಘನೀಯ. ಎರಡು ರಾಜ್ಯಗಳ ಕ್ರೀಡಾಭಿಮಾನಿಗಳ ಮನಸ್ಸುಗಳನ್ನು ಬೆಸೆಯುವ ಕೆಲಸವೂ ಈ ಮೂಲಕ ನಡೆಯುತ್ತಿರುವುದು ಹೆಮ್ಮೆಯ ಸಂಗತಿ ಎಂದು ಜಿ. ಚಿದ್ವಿಲಾಸ್ ತಿಳಿಸಿದರು.

ಹಾಕಿ ಕೂರ್ಗ್ ಸಂಸ್ಥೆಯ ಸ್ಥಾಪಕ ಸದಸ್ಯ ಪಾರ್ಥ ಚಂಗಪ್ಪ ಮಾತನಾಡಿ, ಹಾಕಿ ಕ್ರೀಡಾಭಿಮಾನಿ ಬೆಲ್ಲು ಕುಟ್ಟಪ್ಪ ಅವರು ಹಾಕಿ ಕೂರ್ಗ್ ಕ್ಲಬ್ ಸ್ಥಾಪಿಸಿ ಕ್ರೀಡೆಗೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ. ಕೊಡಗು, ರಾಜ್ಯ ಹಾಗೂ ದೇಶ ಮಾತ್ರವಲ್ಲದೆ ವಿದೇಶದ ಮಸ್ಕತ್‌ನಲ್ಲಿಯೂ ಹಾಕಿ ಪಂದ್ಯಾವಳಿಗಳನ್ನು ಆಯೋಜಿಸುವ ಮೂಲಕ ಹಾಕಿ ಕ್ರೀಡೆಯನ್ನು ಜೀವಂತವಾಗಿಡುವ ಕಾರ್ಯ ನಡೆಯುತ್ತಿದೆ ಎಂದರು.

ಹಾಕಿ ಕೂರ್ಗ್ ಸಂಸ್ಥೆಯ ಅಧ್ಯಕ್ಷ ಲವ್ ಕುಮಾರ್ ಮಾತನಾಡಿ, ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಮಕ್ಕಳು, ಹಿರಿಯರು, ಯುವತಿಯರು ಹಾಗೂ ಮಹಿಳೆಯರಿಗಾಗಿ ಹಾಕಿ ಪಂದ್ಯಾವಳಿ ಆಯೋಜಿಸಿರುವುದು ಅಪರೂಪದ ಸಂಗತಿ. ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಹಾಕಿ ಕೂರ್ಗ್ ಕ್ಲಬ್ ಹಾಗೂ ಯುನೈಟೆಡ್ ತಲಚೇರಿ ಸ್ಪೋರ್ಟ್ಸ್ ಕ್ಲಬ್ ಅಭಿನಂದನಾರ್ಹ ಎಂದು ಹೇಳಿದರು.

ಮೂರು ವಿಭಾಗಗಳಲ್ಲಿ ಪಂದ್ಯಾವಳಿ

ಹಾಕಿ ಕ್ರೀಡೆಯ ಬೆಳವಣಿಗೆ ಹಾಗೂ ಹಿರಿಯ ಮತ್ತು ಕಿರಿಯ ಆಟಗಾರರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಮಡಿಕೇರಿಯ ಸಾಯಿ ಕ್ರೀಡಾ ತರಬೇತಿ ಕೇಂದ್ರದ ಸಿಂಥೆಟಿಕ್ ಟರ್ಫ್ ಮೈದಾನದಲ್ಲಿ ಎರಡನೇ ವರ್ಷದ ‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿ ಆಯೋಜಿಸಲಾಗಿದೆ.

ಪಂದ್ಯಾವಳಿಯಲ್ಲಿ 40 ವರ್ಷ ಮೇಲ್ಪಟ್ಟ ಪುರುಷರು, 35 ವರ್ಷ ಮೇಲ್ಪಟ್ಟ ಮಹಿಳೆಯರು ಹಾಗೂ 16 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ತಂಡಗಳು ಭಾಗವಹಿಸುತ್ತಿವೆ.

ಹಿರಿಯರಲ್ಲಿ ಹಾಕಿ ಕ್ರೀಡೆಯ ಆಸಕ್ತಿಯನ್ನು ಜೀವಂತವಾಗಿಡುವುದರ ಜೊತೆಗೆ ಕಿರಿಯ ಆಟಗಾರರಿಗೆ ಉತ್ತಮ ವೇದಿಕೆ ಕಲ್ಪಿಸುವುದು ಪಂದ್ಯಾವಳಿಯ ಪ್ರಮುಖ ಉದ್ದೇಶವಾಗಿದೆ. ಹಿರಿಯರು ಮತ್ತು ಕಿರಿಯರಿಗೆ ಒಂದೇ ಮೈದಾನದಲ್ಲಿ ಪ್ರತ್ಯೇಕ ವಿಭಾಗಗಳಲ್ಲಿ ಪಂದ್ಯಗಳನ್ನು ಆಯೋಜಿಸಿರುವುದು ಈ ಕ್ರೀಡಾಕೂಟದ ವಿಶೇಷತೆಯಾಗಿದೆ.

ಭಾಗವಹಿಸುತ್ತಿರುವ ತಂಡಗಳು

ಪುರುಷರ ಮಾಸ್ಟರ್ಸ್ ವಿಭಾಗದಲ್ಲಿ ಕೇರಳ ಹಾಕಿ ಮಾಸ್ಟರ್ಸ್, ಕೊಡವ ಹಾಕಿ ಅಕಾಡೆಮಿ, ಟೈಗರ್ಸ್ ಬಾಳೆಲೆ, ಯಂಗ್ ಮಾಸ್ಟರ್ಸ್ ಬೆಂಗಳೂರು, ಕೂರ್ಗ್ ಡೈನಾಮಿಕ್ಸ್ ಹಾಗೂ ಭಗವತಿ ಇಲೆವೆನ್ ತಂಡಗಳು ಭಾಗವಹಿಸುತ್ತಿವೆ.

ಮಹಿಳೆಯರ ಮಾಸ್ಟರ್ಸ್ ವಿಭಾಗದಲ್ಲಿ ಮಾಸ್ಟರ್ಸ್ ವಿಮೆನ್ಸ್ ಟೀಮ್, ಕೇರಳ ಸ್ಟೈಲ್ಸ್ ಗರ್ಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೂರ್ಗ್ ವಂಡರ್ ವಿಮೆನ್ ತಂಡಗಳು ಸೆಣಸಲಿವೆ.

ಅಂಡರ್-16 ಬಾಲಕಿಯರ ವಿಭಾಗದಲ್ಲಿ ಸ್ಪೋರ್ಟ್ಸ್ ಸ್ಕೂಲ್ ಪೊನ್ನಂಪೇಟೆ, ಸ್ಪೋರ್ಟ್ಸ್ ಸ್ಕೂಲ್ ಕೂಡಿಗೆ, ಸಾಯಿ ಮಡಿಕೇರಿ, ಸ್ಪೋರ್ಟ್ಸ್ ಸ್ಕೂಲ್ ಹಾಸನ ಹಾಗೂ ಕೊಡಗು ವಿದ್ಯಾಲಯ ಮಡಿಕೇರಿ ತಂಡಗಳು ಪಾಲ್ಗೊಳ್ಳಲಿವೆ.

ಬಾಲಕರ ವಿಭಾಗದಲ್ಲಿ ಸೋಮವಾರಪೇಟೆಯ ಡಾಲ್ಫಿನ್ಸ್ ಯಂಗ್, ಅಪ್ಪಚ್ಚಕವಿ ವಿದ್ಯಾಲಯ ಪೊನ್ನಂಪೇಟೆ, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಶಾಲಾ ಅಕಾಡೆಮಿ ವಿರಾಜಪೇಟೆ, ರಾಮ್‌ಟ್ರಸ್ಟ್ ನಾಪೋಕ್ಲು, ಸ್ಪೋರ್ಟ್ಸ್ ಸ್ಕೂಲ್ ಕೂಡಿಗೆ, ಸ್ಪೋರ್ಟ್ಸ್ ಸ್ಕೂಲ್ ಹಾಸನ, ರಿಪಬ್ಲಿಕನ್ಸ್ ಸ್ಪೋರ್ಟ್ಸ್ ಕ್ಲಬ್ ಮುಂಬೈ, ಮುನಾಳು ರೂರಲ್ ಫ್ರೆಂಡ್ಸ್, ಯು.ಟಿ.ಎಸ್.ಸಿ ಕೇರಳ, ಕೊಡಗು ವಿದ್ಯಾಲಯ ಮಡಿಕೇರಿ, ಕೂಡಿಗೆ ಸ್ಪೋರ್ಟ್ಸ್ ಹಾಸ್ಟೆಲ್ (ಬಿ), ಕೊಡವ ಸಮಾಜ ವಿರಾಜಪೇಟೆ ಹಾಗೂ ಲಯನ್ಸ್ ಶಾಲೆ ಗೋಣಿಕೊಪ್ಪ ತಂಡಗಳು ಭಾಗವಹಿಸುತ್ತಿವೆ.

ಆಕರ್ಷಕ ನಗದು ಬಹುಮಾನ

ಪುರುಷರ ಮತ್ತು ಮಹಿಳೆಯರ ಮಾಸ್ಟರ್ಸ್ ವಿಭಾಗದಲ್ಲಿ ವಿಜೇತ ತಂಡಗಳಿಗೆ ತಲಾ ₹10 ಸಾವಿರ ನಗದು ಹಾಗೂ ಟ್ರೋಫಿ, ರನ್ನರ್ಸ್ ತಂಡಗಳಿಗೆ ₹5 ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುತ್ತದೆ.

ಅಂಡರ್-16 ಬಾಲಕರ ವಿಭಾಗದಲ್ಲಿ ವಿಜೇತರಿಗೆ ₹25 ಸಾವಿರ ಹಾಗೂ ಟ್ರೋಫಿ, ರನ್ನರ್ಸ್ ತಂಡಕ್ಕೆ ₹15 ಸಾವಿರ ಹಾಗೂ ಟ್ರೋಫಿ ಬಹುಮಾನವಿದೆ. ಬಾಲಕಿಯರ ವಿಭಾಗದಲ್ಲಿ ವಿಜೇತ ತಂಡಕ್ಕೆ ₹15 ಸಾವಿರ ಹಾಗೂ ಟ್ರೋಫಿ, ರನ್ನರ್ಸ್ ತಂಡಕ್ಕೆ ₹10 ಸಾವಿರ ಹಾಗೂ ಟ್ರೋಫಿ ನೀಡಲಾಗುತ್ತದೆ.

ಕಳೆದ ವರ್ಷದ ಮೊದಲ ಆವೃತ್ತಿಯ ಪಂದ್ಯಾವಳಿ ಪೊನ್ನಂಪೇಟೆಯಲ್ಲಿ ನಡೆದಿತ್ತು. ಇದೀಗ ಎರಡನೇ ಆವೃತ್ತಿಯನ್ನು ಮಡಿಕೇರಿಯಲ್ಲಿ ಆಯೋಜಿಸಲಾಗಿದೆ. ಮೂಲತಃ ಹಾಕಿ ಕ್ರೀಡೆಯ ಮೇಲಿನ ಅಪಾರ ಆಸಕ್ತಿ ಮತ್ತು ಅಭಿಮಾನದಿಂದ ಬೆಲ್ಲು ಕುಟ್ಟಪ್ಪ ಅವರು ಈ ಪಂದ್ಯಾವಳಿಯ ಆಯೋಜನೆಗೆ ಮುಂದಾಗಿದ್ದಾರೆ. ಕೊಡಗು ಮಾತ್ರವಲ್ಲದೆ ಬೆಂಗಳೂರು ಹಾಗೂ ಮಸ್ಕತ್‌ನಲ್ಲಿಯೂ ವಿವಿಧ ಮಾದರಿಯ ಹಾಕಿ ಪಂದ್ಯಾವಳಿಗಳನ್ನು ಆಯೋಜಿಸುವ ಮೂಲಕ ಕ್ರೀಡೆಯ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ರಾಜ್ಯ ಮಟ್ಟದ ಮಿಕ್ಸ್ ಕಿಕ್ ಬಾಕ್ಸಿಂಗ್‌ನಲ್ಲಿ ಮಡಿಕೇರಿಯ ಕೊಡಗು ಕಿಕ್ ಬಾಕ್ಸಿಂಗ್ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 30: ಕೂರ್ಗ್ ಹಾಕ್ಸ್ ಕ್ಲಬ್ ಹಾಗೂ ಕೇರಳದ ಯುನೈಟೆಡ್ ತಲಚೇರಿ ಸ್ಪೋರ್ಟ್ಸ್ ಕ್ಲಬ್ ಸಹಭಾಗಿತ್ವದಲ್ಲಿ…

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026

ಮಿಕ್ಸ್ ಬಾಕ್ಸಿಂಗ್‌ನಲ್ಲಿ ಕೃತನ್ ಹಾಗೂ ಸಂದೀಪ್‌ಗೆ ಬೆಳ್ಳಿ ಪದಕ

ಅಕ್ಟೋಬರ್ 30, 2026

ತೋಳೂರು ಶೆಟ್ಟಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನವೆಂಬರ್‌ನಲ್ಲಿ ಸರಣಿ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026

ಮುಂದಿನ ಕಸಾಪ ಅಧ್ಯಕ್ಷರನ್ನಾಗಿ ಟಿ.ಪಿ.ರಮೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ವಿಶ್ವಾಸ

ಅಕ್ಟೋಬರ್ 30, 2026

ರಾಪಿಡೋ, ರೆಂಟಲ್ ಬೈಕ್ ಸೇವೆಗೆ ಕಡಿವಾಣಕ್ಕೆ ಆಗ್ರಹಿಸಿ ಮಡಿಕೇರಿಯಲ್ಲಿ ಆಟೋ ಚಾಲಕರ ಬೃಹತ್ ಪ್ರತಿಭಟನೆ

ಅಕ್ಟೋಬರ್ 30, 2026

ಹಾಕಿ ಕ್ಷೇತ್ರದ ಸಾಧನೆಗೆ ಡಾ. ಎ.ಬಿ. ಸುಬ್ಬಯ್ಯ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಗೆ ಚಾಲನೆ; ಕೊಡಗು ಕ್ರೀಡೆಗಳ ತಪೋಭೂಮಿ: ಜಿ. ಚಿದ್ವಿಲಾಸ್ ಬಣ್ಣನೆ

ಅಕ್ಟೋಬರ್ 30, 2026

ಫ್ಯಾಷನ್ ಕ್ಷೇತ್ರದ ಸಾಧನೆಗೆ ಪ್ರಸಾದ್ ಬಿದ್ದಪ್ಪ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.