Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ತೋಳೂರು ಶೆಟ್ಟಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ತೋಳೂರು ಶೆಟ್ಟಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ, NEWS DESK ಅ. 30: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತೋಳೂರು ಶೆಟ್ಟಳ್ಳಿಯ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಚೆರಿಯಾ ಮನೆ ದಿವಂಗತ ಕೃಷ್ಣ ಜ್ಞಾಪಕಾರ್ಥ ದತ್ತಿ ನಿಧಿ ಕಾರ್ಯಕ್ರಮ ಹಾಗೂ ಇರುವೈಲು ರಘುರಾಮ ಅಶ್ರಣ್ಣ ಮತ್ತು ಲೀಲಾ ಅಶ್ರಣ್ಣ ಜ್ಞಾಪಕಾರ್ಥ ದತ್ತಿ ಕಾರ್ಯಕ್ರಮವು ಶಾಲೆಯ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈಗಾಗಲೇ 60ಕ್ಕೂ ಹೆಚ್ಚು ದತ್ತಿ ನಿಧಿಗಳನ್ನು ಹೊಂದಿದ್ದು, ಕೊಡಗು ಜಿಲ್ಲೆಯಾದ್ಯಂತ ವಿವಿಧ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸುತ್ತಿದೆ ಎಂದರು.

ಜಾನಪದ ಸಾಹಿತ್ಯದ ಕುರಿತು ಉಪನ್ಯಾಸ ನೀಡಿದ 6ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಜಲಕಾಳಪ್ಪ ಮಾತನಾಡಿ, ಭಾರತದ ಜಾನಪದ ಸಂಸ್ಕೃತಿಯಲ್ಲಿ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ, ನಾಟಕ, ಯಕ್ಷಗಾನ, ಬಯಲಾಟ ಸೇರಿದಂತೆ ಹಲವು ಪ್ರಕಾರಗಳು ಕನ್ನಡ ಜಾನಪದ ಸಂಸ್ಕೃತಿಯ ವೈವಿಧ್ಯತೆಯನ್ನು ಸಾರುತ್ತವೆ ಎಂದು ತಿಳಿಸಿದರು.

ಮತ್ತೋರ್ವ ಉಪನ್ಯಾಸಕರಾದ ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕ ಹಾಗೂ ಧರ್ಮಗುರು ಶಾಫಿ ಸಾ ಅಸದಿ ಅವರು ‘ಕೊಡಗಿನ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆ’ ವಿಷಯದ ಕುರಿತು ಮಾತನಾಡಿ, ಜಿಲ್ಲೆಯ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಗಳು ವಿಶಿಷ್ಟವಾಗಿದ್ದು, ಕರ್ನಾಟಕದ ಅತ್ಯಂತ ಸಮೃದ್ಧ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತ ಜಿಲ್ಲೆಗಳಲ್ಲಿ ಕೊಡಗು ಪ್ರಮುಖ ಸ್ಥಾನ ಹೊಂದಿದೆ ಎಂದರು.

ಮುಖ್ಯ ಅತಿಥಿಗಳಾಗಿ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಯ ಪ್ರಾಂಶುಪಾಲ ಚಂದ್ರಶೇಖರ್ ರೆಡ್ಡಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ದಿನೇಶ್ ಪಾಲ್ಗೊಂಡಿದ್ದರು.

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ಪುಣ್ಯ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೋಮವಾರಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಡಿ. ವಿಜೇತ್ ವಹಿಸಿದ್ದರು. ವೇದಿಕೆಯಲ್ಲಿ ಗೌರವ ಕಾರ್ಯದರ್ಶಿ ಎ.ಪಿ. ವೀರರಾಜ್, ಟಿ.ಜೆ. ಶುಭ, ಜಮೀರ್, ಗಿರೀಶ್ ಕಾಟ್ನಮನೆ ಹಾಗೂ ಶ್ರೀಧರ್ ಹೂವಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

ರಾಜ್ಯ ಮಟ್ಟದ ಮಿಕ್ಸ್ ಕಿಕ್ ಬಾಕ್ಸಿಂಗ್‌ನಲ್ಲಿ ಮಡಿಕೇರಿಯ ಕೊಡಗು ಕಿಕ್ ಬಾಕ್ಸಿಂಗ್ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಯ ಮೊದಲ ದಿನದ ಫಲಿತಾಂಶ ಪ್ರಕಟ

ಅಕ್ಟೋಬರ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 30: ಕೂರ್ಗ್ ಹಾಕ್ಸ್ ಕ್ಲಬ್ ಹಾಗೂ ಕೇರಳದ ಯುನೈಟೆಡ್ ತಲಚೇರಿ ಸ್ಪೋರ್ಟ್ಸ್ ಕ್ಲಬ್ ಸಹಭಾಗಿತ್ವದಲ್ಲಿ…

ಕಂಡಂಗಾಲ ಹಿರಿಯ ಪ್ರಾಥಮಿಕ ಶಾಲೆಗೆ ಐದು ಕಂಪ್ಯೂಟರ್‌ಗಳ ಕೊಡುಗೆ; ಜನರಲ್ ವಿಕ್ರಮ್ ತನೇಜ ಹಾಗೂ ಡಾ. ಪೊನ್ನಕಚ್ಚಿರ ವಿದ್ಯಾ ಪೂಣಚ್ಚ ದಂಪತಿಗಳಿಂದ ನೆರವು

ಅಕ್ಟೋಬರ್ 30, 2026

ಮಿಕ್ಸ್ ಬಾಕ್ಸಿಂಗ್‌ನಲ್ಲಿ ಕೃತನ್ ಹಾಗೂ ಸಂದೀಪ್‌ಗೆ ಬೆಳ್ಳಿ ಪದಕ

ಅಕ್ಟೋಬರ್ 30, 2026

ತೋಳೂರು ಶೆಟ್ಟಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ನವೆಂಬರ್‌ನಲ್ಲಿ ಸರಣಿ ದತ್ತಿ ಕಾರ್ಯಕ್ರಮ

ಅಕ್ಟೋಬರ್ 30, 2026

ಮುಂದಿನ ಕಸಾಪ ಅಧ್ಯಕ್ಷರನ್ನಾಗಿ ಟಿ.ಪಿ.ರಮೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡುವ ವಿಶ್ವಾಸ

ಅಕ್ಟೋಬರ್ 30, 2026

ರಾಪಿಡೋ, ರೆಂಟಲ್ ಬೈಕ್ ಸೇವೆಗೆ ಕಡಿವಾಣಕ್ಕೆ ಆಗ್ರಹಿಸಿ ಮಡಿಕೇರಿಯಲ್ಲಿ ಆಟೋ ಚಾಲಕರ ಬೃಹತ್ ಪ್ರತಿಭಟನೆ

ಅಕ್ಟೋಬರ್ 30, 2026

ಹಾಕಿ ಕ್ಷೇತ್ರದ ಸಾಧನೆಗೆ ಡಾ. ಎ.ಬಿ. ಸುಬ್ಬಯ್ಯ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಅಕ್ಟೋಬರ್ 30, 2026

‘ಫ್ಯಾಪ್ ಕಪ್ ಹಾಕಿ’ ಪಂದ್ಯಾವಳಿಗೆ ಚಾಲನೆ; ಕೊಡಗು ಕ್ರೀಡೆಗಳ ತಪೋಭೂಮಿ: ಜಿ. ಚಿದ್ವಿಲಾಸ್ ಬಣ್ಣನೆ

ಅಕ್ಟೋಬರ್ 30, 2026

ಫ್ಯಾಷನ್ ಕ್ಷೇತ್ರದ ಸಾಧನೆಗೆ ಪ್ರಸಾದ್ ಬಿದ್ದಪ್ಪ ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಅಕ್ಟೋಬರ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.