ಮಡಿಕೇರಿ, NEWS DESK ಅ.31: ಕೊಡವ ಪ್ರೀಮಿಯರ್ ಲೀಗ್ (ಕೆಪಿಎಲ್) ಸೀಸನ್-5 ಕ್ರಿಕೆಟ್ ಪಂದ್ಯಾವಳಿಗೆ ಸಂಬಂಧಿಸಿದಂತೆ ಆಟಗಾರರ ಹರಾಜು ಪ್ರಕ್ರಿಯೆಯು ನವೆಂಬರ್ 1ರಂದು ಬೆಳಿಗ್ಗೆ 9.30ಕ್ಕೆ ಮಡಿಕೇರಿಯ ಆಕ್ಸಿರಿಚ್ ಬಿಸಿನೆಸ್ ಕ್ಲಾಸ್ ಹೋಟೆಲ್ನಲ್ಲಿ ನಡೆಯಲಿದೆ.
ಹರಾಜು ಪ್ರಕ್ರಿಯೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ಕೊಡವ ಪ್ರೀಮಿಯರ್ ಲೀಗ್ ಸೀಸನ್-5 ಕ್ರಿಕೆಟ್ ಪಂದ್ಯಾವಳಿಯು 2026ರ ಡಿಸೆಂಬರ್ 4, 5 ಮತ್ತು 6ರಂದು ಮೂರು ದಿನಗಳ ಕಾಲ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಕುಟ್ಟಂಡ ಕುಟ್ಟಪ್ಪ (9483263846) ಹಾಗೂ ಚೆಕ್ಕೇರ ಕಾರ್ಯಪ್ಪ (9066146100) ಅವರನ್ನು ಸಂಪರ್ಕಿಸುವಂತೆ ಆಯೋಜಕರು ಕೋರಿದ್ದಾರೆ.

















