ಮಡಿಕೇರಿ, NEWS DESK ಅ.31: ನಗರದ ದೇಚೂರು ಶ್ರೀ ರಾಮ ಮಂದಿರದ ದಸರಾ ಮಹೋತ್ಸವದ ಅಂಗವಾಗಿ ನಿರ್ಮಿಸಲಾಗಿದ್ದ ಆಕರ್ಷಕ ಕಲಾಕೃತಿಗಳಿಗೆ ಶಾಂತಿ ಪೂಜೆಯನ್ನು ನೆರವೇರಿಸಲಾಯಿತು.
ಪ್ರತಿವರ್ಷದಂತೆ ಈ ಬಾರಿಯೂ ದಸರಾ ಮಹೋತ್ಸವದಲ್ಲಿ ವಿಶೇಷವಾಗಿ ನಿರ್ಮಿಸಲಾಗಿದ್ದ ಕಲಾಕೃತಿಗಳು ಸಾರ್ವಜನಿಕರ ಗಮನ ಸೆಳೆದಿದ್ದವು. ಈ ಕಲಾಕೃತಿಗಳ ನಿರ್ಮಾಣಕ್ಕಾಗಿ ಹಗಲಿರುಳು ಶ್ರಮಿಸಿದ ಕಲಾವಿದರು ಹಾಗೂ ವಿವಿಧ ತಂಡಗಳ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು.
ದಸರಾ ಮಹೋತ್ಸವದ ಯಶಸ್ಸಿಗೆ ಕಲಾವಿದರು ಮತ್ತು ಕಾರ್ಯಕರ್ತರ ಪರಿಶ್ರಮವೇ ಪ್ರಮುಖ ಕಾರಣವಾಗಿದೆ. ಅವರ ಕಲಾ ಸೇವೆ, ಸಮರ್ಪಣಾ ಮನೋಭಾವ ಹಾಗೂ ಶ್ರಮವನ್ನು ದೇಚೂರು ಶ್ರೀ ರಾಮ ಮಂದಿರದ ದಸರಾ ಸಮಿತಿಯ ಸದಸ್ಯರು ಪ್ರಶಂಸಿಸಿ, ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.

















