Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಅ.31 NEWS DESK : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿಯಲ್ಲಿ 11ನೇ ಬ್ಯಾಚ್‍ನ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ವೈಟ್‍ಕೋಟ್ ಸಮಾರಂಭ ನಡೆಯಿತು. ಸಂಸ್ಥೆಯ ಡೀನ್ ಹಾಗೂ ನಿರ್ದೇಶಕರಾದ ಡಾ.ಲೋಕೇಶ್ ಎ.ಜೆ. ಅವರ ಮಾರ್ಗದರ್ಶನದಲ್ಲಿ ಜರುಗಿದ ಈ ಕಾರ್ಯಕ್ರಮವನ್ನು ಜೀವರಸಾಯನಶಾಸ್ತ್ರ ವಿಭಾಗದ ವತಿಯಿಂದ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ನೂತನವಾಗಿ ಪ್ರವೇಶ ಪಡೆದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಭಾಗವಹಿಸಿದ್ದರು. ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಪಯಣಕ್ಕೆ ನಾಂದಿ ಹಾಡಿದ ಈ ಸಮಾರಂಭವು ಎಲ್ಲರಿಗೂ ಸ್ಮರಣೀಯ ಕ್ಷಣವಾಗಿ ಮೂಡಿಬಂದಿತು. ಕಾರ್ಯಕ್ರಮದಲ್ಲಿ ಜೀವರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರು ಗಣ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಸಂಸ್ಥೆಯ ವೈದ್ಯಕೀಯ ಪ್ರಾಂಶುಪಾಲರು ಹಾಗೂ ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ವಿಶಾಲ್ ಕುಮಾರ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ವೈಟ್ ಕೋಟ್ ಸಮಾರಂಭದ ಮಹತ್ವ, ವೈದ್ಯಕೀಯ ವಿದ್ಯಾರ್ಥಿಗಳ ಜವಾಬ್ದಾರಿ ಹಾಗೂ ವೈದ್ಯಕೀಯ ವೃತ್ತಿಯಲ್ಲಿರಬೇಕಾದ ಬದ್ಧತೆ ಮತ್ತು ಸೇವಾ ಮನೋಭಾವದ ಕುರಿತು ತಿಳಿಸಿದರು. ಮುಖ್ಯ ಆಡಳಿತಾಧಿಕಾರಿ ರೋಹಿಣಿ, ಸ್ನಾತಕೋತ್ತರ ವಿಭಾಗದ ಪ್ರಾಂಶುಪಾಲರು ಡಾ.ಈಶಾ ಬಿ.ರಾವ್ ಹಾಗೂ ವೈದ್ಯಕೀಯ ಅಧೀಕ್ಷಕರಾದ ಡಾ. ಸೋಮಶೇಖರ್ ಎಚ್.ಕೆ. ಅವರು ನೂತನ ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವೈದ್ಯಕೀಯ ವೃತ್ತಿಯಲ್ಲಿ ವೃತ್ತಿಪರತೆ, ಶಿಸ್ತು, ಸಮರ್ಪಣೆ, ಮಾನವೀಯತೆ, ಕರುಣೆ ಹಾಗೂ ರೋಗಿಗಳ ಸೇವೆಯ ಮಹತ್ವ ವಿವರಿಸಿದರು. ಡಾ.ರವಿಕಿರಣ್ ಕಿಸಾನ್ ಅಕ್ಯಾಡೆಮಿಕ್ ರಿಜಿಸ್ವ್ರಾರ್ ಹಾಗೂ ಡಾ.ರಾಮಚಂದ್ರ ಕಾಮತ್ ಸಮುದಾಯ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು ಕಾರ್ಯಕ್ರಮದ ಉದ್ದೇಶ, ಮಹತ್ವ ಹಾಗೂ ಅದರ ಕಾರ್ಯಚಟುವಟಿಕೆಗಳ ಕುರಿತು ತಮ್ಮ ಅಮೂಲ್ಯವಾದ ವಿಚಾರಗಳನ್ನು ಹಂಚಿಕೊಂಡರು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡುವುದರ ಜೊತೆಗೆ, ಸಮುದಾಯ ಆರೋಗ್ಯ ಕ್ಷೇತ್ರದಲ್ಲಿ ವೈದ್ಯಕೀಯ ಶಿಕ್ಷಣದ ಮಹತ್ವವನ್ನು ವಿವರಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು. ಸಮಾರಂಭದ ಅಂಗವಾಗಿ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಗಣ್ಯರು ವೈಟ್‍ಕೋಟ್‍ಗಳನ್ನು ತೊಡಿಸಿದರು. ವೈದ್ಯಕೀಯ ವೃತ್ತಿಗೆ ಪಾದಾರ್ಪಣೆ ಮಾಡುವ ವಿದ್ಯಾರ್ಥಿಗಳಿಗೆ ಈ ವೈಟ್‍ಕೋಟ್ ಕೇವಲ ಉಡುಪಾಗಿರದೆ, ವೈದ್ಯಕೀಯ ಸೇವೆಯಲ್ಲಿನ ಜವಾಬ್ದಾರಿ, ನೈತಿಕತೆ, ಮಾನವೀಯ ಮೌಲ್ಯಗಳು ಹಾಗೂ ರೋಗಿಗಳ ಆರೈಕೆಯ ಸಂಕೇತವಾಗಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಕಾವೇರಿ ತೀರ್ಥೋದ್ಭವದ ಪ್ರಸಾದ ವಿತರಣೆ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಭರತನಾಟ್ಯ ಪರೀಕ್ಷೆ : ವಿರಾಜಪೇಟೆ ‘ನಾಟ್ಯಾಂಜಲಿ ನೃತ್ಯ ಸಂಸ್ಥೆ’ಗೆ ಶೇ.100 ಫಲಿತಾಂಶ

ಅಕ್ಟೋಬರ್ 31, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಅ.31 NEWS DESK : ಇತ್ತೀಚೆಗೆ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯದ ವತಿಯಿಂದ ನಡೆದ…

ಡಿಪ್ಲೋಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನ

ಅಕ್ಟೋಬರ್ 31, 2026

ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ವೈಟ್‍ಕೋಟ್ ಸಮಾರಂಭ

ಅಕ್ಟೋಬರ್ 31, 2026

ಪೊನ್ನಂಪೇಟೆಯಲ್ಲಿ ನ್ಯಾಯಾಲಯದ ಉದ್ಘಾಟನೆ : ನ್ಯಾಯಾಂಗ ವ್ಯವಸ್ಥೆ ಬಲಯುತವಾಗಿದ್ದಲ್ಲಿ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ ಎ.ಎಸ್.ಪೊನ್ನಣ್ಣ

ಅಕ್ಟೋಬರ್ 31, 2026

ಕೂಗ್೯ ಹೋಟೆಲ್, ರೆಸಾಟ್೯ ಅಸೋಸಿಯೇಷನ್ ವಾಷಿ೯ಕ ಮಹಾಸಭೆ : ಪ್ರವಾಸೋದ್ಯಮ ಪ್ರಗತಿಗೆ ಸಂಬಂಧಿಸಿದಂತೆ ಮಹತ್ವದ ಚಚೆ೯

ಅಕ್ಟೋಬರ್ 31, 2026

ರಾಜ್ಯಮಟ್ಟದ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಸೋಮವಾರಪೇಟೆ ಪಿ.ಎಂ.ಶ್ರೀ ಜಿ.ಎಂ.ಪಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಅಕ್ಟೋಬರ್ 31, 2026

ಹಾಕತ್ತೂರು-ಬಿಳಿಗೇರಿ ಮಖಾಮ್ ಉರೂಸ್ ಮೇ 2ರಿಂದ 4ರವರೆಗೆ

ಅಕ್ಟೋಬರ್ 31, 2026

ದೇಚೂರು ಶ್ರೀ ರಾಮ ಮಂದಿರದ ದಸರಾ ಕಲಾಕೃತಿಗಳಿಗೆ ಶಾಂತಿ ಪೂಜೆ

ಅಕ್ಟೋಬರ್ 31, 2026

ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ: ಮಡಿಕೇರಿಯಲ್ಲಿ ಅರ್ಥಪೂರ್ಣ ಆಚರಣೆ; ಸ್ವಾತಂತ್ರ್ಯ ಹೋರಾಟಗಾರನಿಗೆ ಗಣ್ಯರಿಂದ ಗೌರವ ನಮನ; ಅಪ್ಪಯ್ಯ ಗೌಡರ ತ್ಯಾಗ, ಬಲಿದಾನ ಸ್ಮರಣೆ

ಅಕ್ಟೋಬರ್ 31, 2026

ಫ್ಯಾಪ್ ಕಪ್ ಹಾಕಿ ಪಂದ್ಯಾವಳಿ: ವಿವಿಧ ತಂಡಗಳಿಂದ ಭರ್ಜರಿ ಪ್ರದರ್ಶನ; ನ.1ರಂದು ಸಮಾರೋಪ

ಅಕ್ಟೋಬರ್ 31, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.