ಮಡಿಕೇರಿ ಅ.31 NEWS DESK : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು ಹಾಗೂ ಸಹಕಾರ ಇಲಾಖೆ ಸಹಯೋಗದಲ್ಲಿ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಮಡಿಕೇರಿ ಇಲ್ಲಿ ನವೆಂಬರ್ 14 ರಿಂದ ಪ್ರಾರಂಭವಾಗುತ್ತಿರುವ 6 ತಿಂಗಳ ಅವಧಿಯ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ತರಬೇತಿ ಪಡೆಯಲು ಬಿಕಾಂ, ಬಿಬಿಎಂ ಅಥವಾ ಯಾವುದೇ ಪದವಿಯಲ್ಲಿ ಮೂರು ವರ್ಷವೂ ಲೆಕ್ಕಶಾಸ್ತ್ರವನ್ನು ಒಂದು ವಿಷಯವನ್ನಾಗಿ ಒಳಗೊಂಡ ಪದವಿದರರಾಗಿರಬೇಕು. ಈ ತರಬೇತಿಗೆ ಪ್ರವೇಶ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ ರೂ.10 ಸಾವಿರ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಹಾಗೂ ಬಡತನ ರೇಖೆಗಿಂತ ಕೆಳಗಿನ ಅಭ್ಯರ್ಥಿಗಳಿಗೆ (ಬಿ.ಪಿ.ಎಲ್ ಕಾರ್ಡ್ ದಾರರಿಗೆ) ತರಬೇತಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಈ ತರಬೇತಿ ಪಡೆದವರು ಸಹಕಾರ ಸಂಘಗಳ ಲೆಕ್ಕಪರಿಶೋಧನೆ ನಡೆಸಲು ಅವಕಾಶ ಕಲ್ಪಿಸಲಾಗುವುದು; ಸಹಕಾರ ಸಂಘಗಳ ಲೆಕ್ಕಪರಿಶೋಧನೆ ನಡೆಸುವುದಕ್ಕಾಗಿ ಸರ್ಕಾರದ ಅನುಮತಿ ಪತ್ರ ಪಡೆಯಲು ಅರ್ಹತೆ ಪಡೆಯುತ್ತಾರೆ; ಅರ್ಜಿ ದೊರೆಯುವ ಸ್ಥಳ: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್, ಮಡಿಕೇರಿ ಹಾಗೂ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿ., ಮಡಿಕೇರಿ ಮತ್ತು ಹಾಸನ ಜಿಲ್ಲಾ ಸಹಕಾರ ಯೂನಿಯನ್ ನಿ., ಹಾಸನ ಇಲ್ಲಿ ಪಡೆದು ನವೆಂಬರ್, 13 ರೊಳಗೆ ಸಲ್ಲಿಸಬೇಕು. ಆನ್ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು. ಆನ್ಲೈನ್ ವೆಬ್ಸೈಟ್ ವಿಳಾಸ: https://dca.kscfl.in. ತರಬೇತಿಯ ಅವಧಿಯಲ್ಲಿ ಪ್ರವೇಶ ಪಡೆದ ಅಭ್ಯರ್ಥಿಗಳಿಗೆ ಉಚಿತ ವಸತಿ ಗೃಹದ ಸೌಲಭ್ಯವಿರುತ್ತದೆ(ಊಟದ ವೆಚ್ಚ ಭರಿಸಬೇಕು). ಹೆಚ್ಚಿನ ಮಾಹಿತಿಗೆ ದೂ.ಸಂ.9902189872, 9663153922, 8762110952, 8762925862ರಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ನ ಅಧಿಕಾರಿ ಅವರು ತಿಳಿಸಿದ್ದಾರೆ.

















