ಬೆಂಗಳೂರು ಅ.31 NEWS DESK : ಭಾಗಮಂಡಲದ ಶ್ರೀ ಭಗಂಡೇಶ್ವರ ಹಾಗೂ ತಲಕಾವೇರಿ ದೇವಾಲಯ ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷರಾದ ಬಾನಂಡ ಪ್ರಥ್ಯು ಹಾಗೂ ಸಮಿತಿಯ ಸದಸ್ಯರ ತಂಡವು ಶನಿವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ನಾಡಿನ ಜೀವನದಿ ತಾಯಿ ಕಾವೇರಿಯ ಪವಿತ್ರ ತೀರ್ಥೋದ್ಭವದ ಪ್ರಸಾದವನ್ನು ವಿತರಿಸಿತು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್. ಪೊನ್ನಣ್ಣ ಅವರ ಮಾರ್ಗದರ್ಶನದಲ್ಲಿ ಈ ಭೇಟಿ ನಡೆಯಿತು. ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಪ್ರಮುಖರಾದ ಟಾಟು ಮೊಣ್ಣಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.


















