ಮಡಿಕೇರಿ, NEWS DESK ನ.1: ಮಡಿಕೇರಿ ನಗರಸಭೆಯ ಆವರಣದಲ್ಲಿ 71ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ನಗರಸಭೆಯ ಆಯುಕ್ತರಾದ ರಮೇಶ್ ಅವರು ಕನ್ನಡ ಧ್ವಜಾರೋಹಣ ನೆರವೇರಿಸಿದರು. ಕನ್ನಡ ನಾಡು, ನುಡಿ ಹಾಗೂ ಸಂಸ್ಕೃತಿಯ ಮಹತ್ವವನ್ನು ಸಾರುವ ಮೂಲಕ ಕನ್ನಡಾಭಿಮಾನವನ್ನು ಮೆರೆದರು.
ಕಾರ್ಯಕ್ರಮದಲ್ಲಿ ನಗರಸಭೆಯ ಅಧಿಕಾರಿಗಳು, ಸಿಬ್ಬಂದಿ ವರ್ಗ, ಜನಪ್ರತಿನಿಧಿಗಳು, ನಗರಸಭೆ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದು, ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಭಾಗಿಯಾದರು.
ಜೈ ಕರ್ನಾಟಕ! ಜೈ ಕನ್ನಡಾಂಬೆ!

















