ಸುಂಟಿಕೊಪ್ಪ, NEWS DESK ನ.2: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಂಟಿಕೊಪ್ಪ ವಲಯದ ಗದ್ದೆಹಳ್ಳ ಶೌರ್ಯ ಘಟಕದ ಪದಾಧಿಕಾರಿಗಳು ಹಾಗೂ ಸದಸ್ಯರು ಸುಂಟಿಕೊಪ್ಪದ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು.
ರುದ್ರಭೂಮಿಯಲ್ಲಿ ಬೆಳೆದು ನಿಂತಿದ್ದ ಕಾಡು ಗಿಡಗಂಟಿಗಳನ್ನು ಕಡಿದು ಸ್ವಚ್ಛಗೊಳಿಸುವ ಮೂಲಕ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ವಲಯದ ಮೇಲ್ವಿಚಾರಕರಾದ ಸಂತೋಷ್ ನಾಯ್ಕ್ ಅವರು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷೆ ಗೀತಾ ಜನಾರ್ದನ್, ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಸೇವಾ ಪ್ರತಿನಿಧಿ ಜ್ಯೋತಿ ಲಕ್ಷ್ಮಿ ಉಪಸ್ಥಿತರಿದ್ದರು.

















