Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸುಂಟಿಕೊಪ್ಪ ಮಲ ತ್ಯಾಜ್ಯ ಘಟಕದಲ್ಲಿ ಅವ್ಯವಹಾರದ ಆರೋಪ: ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಎಚ್ಚರಿಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ ಮಲ ತ್ಯಾಜ್ಯ ಘಟಕದಲ್ಲಿ ಅವ್ಯವಹಾರದ ಆರೋಪ: ವಾರದೊಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಎಚ್ಚರಿಕೆ

ನವೆಂಬರ್ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ, NEWS DESK ನ.2: ಸುಂಟಿಕೊಪ್ಪ ಪಟ್ಟಣದಲ್ಲಿರುವ ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳ ವ್ಯಾಪ್ತಿಯನ್ನು ಮೀರಿ ಜಿಲ್ಲೆಯ ವಿವಿಧೆಡೆ ಹಾಗೂ ಹೊರ ಜಿಲ್ಲೆಗಳಿಂದಲೂ ಮಲ ತ್ಯಾಜ್ಯವನ್ನು ತಂದು ವಿಲೇವಾರಿ ಮಾಡಲಾಗುತ್ತಿದೆ. ಈ ಸಂಬಂಧ ಘಟಕದ ನಿರ್ವಹಣೆ ಹಾಗೂ ಲೆಕ್ಕಪತ್ರಗಳಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಹಾಗೂ ವೇವ್ ಸಂಸ್ಥೆಯ ಪದಾಧಿಕಾರಿಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡರು.

ಸುಂಟಿಕೊಪ್ಪ ಗ್ರಾಮ ಪಂಚಾಯಿತಿಗೆ ಸೇರಿದ ಕಸ ವಿಲೇವಾರಿ ಘಟಕದಲ್ಲಿ ಸುಮಾರು ರೂ.75 ಲಕ್ಷ ವೆಚ್ಚದಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳ ಗ್ರಾಮಗಳ ಮಲ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಘಟಕವನ್ನು ಸ್ಥಾಪಿಸಲಾಗಿದೆ. ಆದರೆ, ಕಳೆದ ಒಂದು ತಿಂಗಳಿನಿಂದ ಹಗಲು-ರಾತ್ರಿ ಎನ್ನದೆ ಪ್ರತಿದಿನ 5ರಿಂದ 6 ಮಲ ತ್ಯಾಜ್ಯ ಸಂಗ್ರಹಣಾ ವಾಹನಗಳಲ್ಲಿ ತ್ಯಾಜ್ಯವನ್ನು ತಂದು ಸುರಿಯಲಾಗುತ್ತಿದೆ ಎಂದು ಆರೋಪಿಸಲಾಗಿದೆ.

ಘಟಕವು ಸಮರ್ಪಕ ನಿರ್ವಹಣೆಯಿಲ್ಲದೆ ಅವೈಜ್ಞಾನಿಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಸುತ್ತಮುತ್ತಲಿನ ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವುದರ ಜೊತೆಗೆ ಪರಿಸರಕ್ಕೂ ಹಾನಿಯುಂಟುಮಾಡುತ್ತಿದೆ ಎಂದು ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ಕಸ ವಿಲೇವಾರಿ ಘಟಕದ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇದರಿಂದ ಸ್ಥಳೀಯ ನಿವಾಸಿಗಳು ಹಾಗೂ ಸಮೀಪದಲ್ಲಿರುವ ವಿಶೇಷಚೇತನ ಮಕ್ಕಳ ಶಾಲೆಯ ವಿದ್ಯಾರ್ಥಿಗಳ ಆರೋಗ್ಯಕ್ಕೂ ಅಪಾಯ ಎದುರಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಹಿಂದಿನ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯು ಮಲ ತ್ಯಾಜ್ಯ ಘಟಕದ ನಿರ್ವಹಣೆಯನ್ನು ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳಿಗೆ ಮಾತ್ರ ಸೀಮಿತಗೊಳಿಸಲು ನಿರ್ಧರಿಸಿತ್ತು. ಆದರೆ, ಇದೀಗ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳ ಏಕಪಕ್ಷೀಯ ನಿರ್ಧಾರದಿಂದ ಘಟಕದ ನಿರ್ವಹಣೆ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಅಲ್ಲದೆ, ಗುತ್ತಿಗೆ ಪ್ರಕ್ರಿಯೆಯಲ್ಲೂ ಅವ್ಯವಹಾರ ನಡೆದಿರುವ ಶಂಕೆಯಿದೆ ಎಂದು ಮಾಜಿ ಸದಸ್ಯರು ಆರೋಪಿಸಿದರು.

ಈ ಕುರಿತು ಪ್ರತಿಕ್ರಿಯಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಅವರು, ಕಳೆದ ಒಂದು ತಿಂಗಳ ಅವಧಿಯಲ್ಲಿ ಸುಮಾರು 75ಕ್ಕೂ ಅಧಿಕ ಲಾರಿಗಳ ಮೂಲಕ ಮಲ ತ್ಯಾಜ್ಯ ವಿಲೇವಾರಿ ಮಾಡಲಾಗಿದ್ದು, ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು ನಿಗದಿಪಡಿಸಿರುವ ಮೊತ್ತವನ್ನು ಗುತ್ತಿಗೆದಾರರು ಪಂಚಾಯಿತಿಗೆ ಜಮಾ ಮಾಡಿದ್ದಾರೆ ಎಂದು ಸಮಜಾಯಿಷಿ ನೀಡಿದರು.

ಆದರೆ, ಈ ಉತ್ತರದಿಂದ ಅತೃಪ್ತರಾದ ಮಾಜಿ ಸದಸ್ಯರಾದ ಪ್ರಸಾದ್ ಕುಟ್ಟಪ್ಪ, ಆಲಿಕುಟ್ಟಿ, ರಫೀಕ್ ಖಾನ್, ಶಬೀರ್ ಹಾಗೂ ವೇವ್ ಸಂಘಟನೆಯ ಸಂಚಾಲಕ ಲತೀಫ್, ಪರಾಝ್ ಉಸ್ಮಾನ್, ರಶೀದ್, ಇಬ್ರಾಹಿಂ ಮತ್ತಿತರರು ಘಟಕದ ನಿರ್ವಹಣೆಯನ್ನು ಒಂದು ವಾರದೊಳಗೆ ಸಮರ್ಪಕಗೊಳಿಸಬೇಕು ಎಂದು ಆಗ್ರಹಿಸಿದರು.

ಅಲ್ಲದೆ, ಪ್ರತಿದಿನ ಎಷ್ಟು ವಾಹನಗಳು ಘಟಕಕ್ಕೆ ಸಂಚರಿಸುತ್ತಿವೆ ಎಂಬುದರ ಕುರಿತು ಸರಿಯಾದ ಲೆಕ್ಕಪತ್ರಗಳನ್ನು ಬಹಿರಂಗಪಡಿಸಬೇಕು. ಲೆಕ್ಕಪತ್ರಗಳಲ್ಲಿ ವಂಚನೆ ನಡೆಯುತ್ತಿರುವ ಶಂಕೆಯಿದ್ದು, ಸಮಸ್ಯೆಗಳನ್ನು ಶೀಘ್ರ ಪರಿಹರಿಸದಿದ್ದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.2: ಕೊಡಗು ಜಿಲ್ಲಾ ಕುಲಾಲ ಕುಂಬಾರರ ಸಂಘ, ಯುವ ಘಟಕ, ಮಹಿಳಾ ಘಟಕ ಹಾಗೂ ಮಡಿಕೆಬೀಡಿನ…

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026

ಭರತನಾಟ್ಯ ಜೂನಿಯರ್ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕು. ಖುಷಿಗೆ ಉನ್ನತ ಶ್ರೇಣಿ

ನವೆಂಬರ್ 2, 2026

ಹೆಬ್ಬಾಲೆ ವ್ಯಾಪ್ತಿಯ ವೀರಶೈವ ಲಿಂಗಾಯತ ಸಮಾಜದ ಸಭೆ: ನೂತನ ಬಸವ ಸಮಿತಿ ರಚನೆ, ಮೋಹನ್ ಹಕ್ಕೆ ನಂಜಪ್ಪ ಅಧ್ಯಕ್ಷರಾಗಿ ಆಯ್ಕೆ

ನವೆಂಬರ್ 2, 2026

ವಿಶ್ವದಾದ್ಯಂತ ಕನ್ನಡ ಭಾಷೆ ಪ್ರಸಾರದಲ್ಲಿ ಯುವಜನತೆಯ ಪಾತ್ರ ಅಪಾರ: ಸಿದ್ದಪ್ಪ ಹೆಳವರಹುಂಡಿ

ನವೆಂಬರ್ 2, 2026

ಕೊಡವಲ್ಯಾಂಡ್ ಸ್ವಾಯತ್ತತೆಗೆ ವಂಶಪಾರಂಪರ್ಯ ಭೂಮಿ ಮತ್ತು ಮಾತೃಭಾಷೆಯ ಸಂರಕ್ಷಣೆ ಅತ್ಯಂತ ಅಗತ್ಯವಾಗಿದೆ : ಎನ್.ಯು. ನಾಚಪ್ಪ : ಪೊನ್ನಂಪೇಟೆಯಲ್ಲಿ CNCಯ 8ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.