Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.2: ರೈತರ ಹಿತ ಕಾಪಾಡುವ ಭರವಸೆ ನೀಡಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ಪೌಷ್ಟಿಕ ಆಹಾರವಾದ ಹಾಲಿನ ದರವನ್ನು ಏರಿಸುವ ಮೂಲಕ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹೇರುತ್ತಿದೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಡಳಿತ ಭವನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.

ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಅನಿತಾ ಪೂವಯ್ಯ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಅವರ ನೇತೃತ್ವದಲ್ಲಿ ಸೋಮವಾರ ಬೆಳಿಗ್ಗೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ರೈತ ಸಮುದಾಯಕ್ಕೆ ಬೆಂಬಲ ಬೆಲೆ ಸೇರಿದಂತೆ ಅಗತ್ಯ ನೆರವು ನೀಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಆದರೆ, ಇದೀಗ ಹಾಲಿನ ಬೆಲೆ ಏರಿಸುವ ಮೂಲಕ ಗ್ರಾಹಕರ ಜೇಬಿಗೆ ಕತ್ತರಿ ಹಾಕಿ, ಅದರಿಂದ ಸಂಗ್ರಹವಾಗುವ ಹಣವನ್ನು ರೈತರಿಗೆ ಬೆಂಬಲ ಬೆಲೆಯಾಗಿ ನೀಡುತ್ತಿದೆ ಎಂದು ಆರೋಪಿಸಿದರು.

ರೈತರಿಗೆ ಬೆಂಬಲ ಬೆಲೆ ನೀಡುವುದಕ್ಕೆ ಬಿಜೆಪಿಯ ವಿರೋಧವಿಲ್ಲ. ಆದರೆ, ಅದರ ವೆಚ್ಚವನ್ನು ಸರ್ಕಾರವೇ ಭರಿಸಬೇಕೇ ಹೊರತು ಗ್ರಾಹಕರ ಮೇಲೆ ಹೊರೆ ಹಾಕಬಾರದು. ಆದ್ದರಿಂದ ಹಾಲಿನ ದರ ಏರಿಕೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ:
ಸಮಾಜದ ಎಲ್ಲ ವರ್ಗದ ಜನರು ಬಳಸುವ ಪೌಷ್ಟಿಕ ಆಹಾರವಾದ ಹಾಲಿನ ವಿವಿಧ ಮಾದರಿಗಳ ಪ್ರತಿ ಲೀಟರ್‌ಗೆ 6ರಿಂದ 14 ರೂ.ವರೆಗೆ ದರ ಹೆಚ್ಚಿಸುವ ಮೂಲಕ ಜನಸಾಮಾನ್ಯರಿಗೆ ಆರ್ಥಿಕ ಸಂಕಷ್ಟ ಉಂಟುಮಾಡಲಾಗಿದೆ. ರೈತರಿಗೆ ಬೆಂಬಲ ಬೆಲೆ ನೀಡಲೂ ಸಾಧ್ಯವಾಗದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಟೀಕಿಸಿದರು.

ಬರ ಪರಿಸ್ಥಿತಿಯಲ್ಲಿ ಸರ್ಕಾರದ ನಿರ್ಲಕ್ಷ್ಯ:
ಮುಂಗಾರು ವೈಫಲ್ಯದಿಂದ ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸಿದ್ದರೂ, ಜನರ ನೆರವಿಗೆ ಧಾವಿಸಬೇಕಾದ ಸರ್ಕಾರ ಬರ ಪರಿಸ್ಥಿತಿ ಪರಿಶೀಲನೆಯ ಹೆಸರಿನಲ್ಲಿ ಪ್ರವಾಸ ನಡೆಸುತ್ತಿದೆಯೇ ಹೊರತು ಯಾವುದೇ ಗಮನಾರ್ಹ ನೆರವು ನೀಡುತ್ತಿಲ್ಲ ಎಂದು ಆರೋಪಿಸಿದರು.

ರಂಗಕರ್ಮಿ ಅಡ್ಡಂಡ ಕಾರ್ಯಪ್ಪ ಅವರಿಗೆ ಅವಮಾನ ಖಂಡನೆ:
ಕೊಡಗಿನ ಹಿರಿಯ ರಂಗಕರ್ಮಿ ಅಡ್ಡಂಡ ಕಾರ್ಯಪ್ಪ ಅವರಿಗೆ ಬೆಂಗಳೂರಿನಲ್ಲಿ ನಾಟಕ ಪ್ರದರ್ಶನದ ಸಂದರ್ಭದಲ್ಲಿ ಮಸಿ ಬಳಿದು ಅವಮಾನಿಸಿರುವ ಘಟನೆಯನ್ನು ತೀವ್ರವಾಗಿ ಖಂಡಿಸಿದ ಅವರು, ಇದು ಕಾಂಗ್ರೆಸ್ ಪ್ರೇರಿತ ಕೃತ್ಯ ಎಂದು ಆರೋಪಿಸಿದರು.

ರಾಜ್ಯ ಸರ್ಕಾರ ಎಲ್ಲ ಕ್ಷೇತ್ರಗಳಲ್ಲಿಯೂ ವಿಫಲವಾಗಿದ್ದು, ಸರ್ಕಾರವನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರಾಷ್ಟ್ರಪತಿಗಳಿಗೆ ಮನವಿ:
ಪ್ರತಿಭಟನೆಯ ಬಳಿಕ ಜಿಲ್ಲಾ ಬಿಜೆಪಿ ಹಾಗೂ ಮಹಿಳಾ ಮೋರ್ಚಾ ವತಿಯಿಂದ ಅಪರ ಜಿಲ್ಲಾಧಿಕಾರಿ ಜಯಲಕ್ಷ್ಮಿ ರಾಯಕೋಡ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಪಕ್ಷದ ಪ್ರಮುಖರಾದ ಶಾಂತೆಯಂಡ ರವಿ ಕುಶಾಲಪ್ಪ, ಪಿ. ಕಲಾವತಿ, ಯಮುನಾ ಚಂಗಪ್ಪ, ಎಡಿಕೇರಿ ಪ್ರಸನ್ನ, ಮಹೇಶ್ ಜೈನಿ, ಉಮೇಶ್ ಸುಬ್ರಮಣಿ, ಬಿ.ಕೆ. ಅರುಣ್ ಕುಮಾರ್, ಪಾಂಡೀರ ಪೂಣಚ್ಚ, ಕನ್ನಂಡ ಸಂಪತ್, ಪಿ.ಎಂ. ರವಿ, ಬಿ.ಕೆ. ಜಗದೀಶ್, ಡೀನ್ ಬೋಪಣ್ಣ, ಸಜಿಲ್ ಕೃಷ್ಣನ್, ಬಿ.ಪಿ. ಡಿಶು, ಸುವಿನ್ ಗಣಪತಿ, ಜಿ.ಎಂ. ಸತೀಶ್ ಪೈ, ಉಮಾ ಪ್ರಭು, ಮನು ಮಹೇಶ್, ಕುಟ್ಟಂಡ ಅಜಿತ್, ಸಬಿತಾ, ಮಂಜುಳ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ವಿರಾಜಪೇಟೆ ಕರ್ನಾಟಕ ಸಂಘದಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿಗೆ ನೆರವು: ‘ರಾಣಿ’ ಬಸ್ ಸಿಬ್ಬಂದಿಗೆ ಸನ್ಮಾನ

ನವೆಂಬರ್ 2, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ನ.2 NEWS DESK : ಪ್ರಸವ ವೇದನೆಯಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಯನ್ನು ಸಕಾಲದಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಸುರಕ್ಷಿತ…

ಕುಶಾಲನಗರದ ನೂತನ ತಹಶೀಲ್ದಾರ್ ಆಗಿ ರಮೇಶ್ ಬಾಬು ಅಧಿಕಾರ ಸ್ವೀಕಾರ; ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯಿಂದ ಆತ್ಮೀಯ ಸ್ವಾಗತ ಹಾಗೂ ಗೌರವ ಸನ್ಮಾನ

ನವೆಂಬರ್ 2, 2026

ಕುಲಾಲ ಕ್ರಿಕೆಟ್ ಚಾಂಪಿಯನ್ ಟ್ರೋಫಿ ಸೀಸನ್-2: ಗೆಳೆಯರ ಬಳಗ ಕುಶಾಲನಗರ ತಂಡ ಚಾಂಪಿಯನ್

ನವೆಂಬರ್ 2, 2026

ಹಾಲಿನ ದರ ಏರಿಕೆ ಖಂಡಿಸಿ ಕೊಡಗು ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ; ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ; ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಆಗ್ರಹ

ನವೆಂಬರ್ 2, 2026

ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಕಲರವಕ್ಕೆ ಸಚಿವ ಪಿ.ಎಂ. ನರೇಂದ್ರಸ್ವಾಮಿ ಚಾಲನೆ

ನವೆಂಬರ್ 2, 2026

ಚೆಯ್ಯಂಡಾಣೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಥಿಲ ಕಟ್ಟಡ: ತಕ್ಷಣ ದುರಸ್ತಿಗೆ ಆಗ್ರಹ

ನವೆಂಬರ್ 2, 2026

ಸೋಲಿನ ಭೀತಿಯಿಂದ ಹುದಿಕೇರಿ ಜಿ.ಪಂ. ಕ್ಷೇತ್ರದ ಮೀಸಲಾತಿ ಬದಲಾವಣೆಗೆ ಕಾಂಗ್ರೆಸ್ ಪ್ರಯತ್ನ: ಚೆಪ್ಪುಡಿರ ರಾಕೇಶ್ ದೇವಯ್ಯ ಆರೋಪ

ನವೆಂಬರ್ 2, 2026

ನಾಪೋಕ್ಲುವಿನಲ್ಲಿ ‘ಸೇವ್ ಬರ್ಡ್ಸ್, ಸೇವ್ ಟ್ರೀ’ ಅಭಿಯಾನದಡಿ ಗಿಡ ನೆಡುವ ಕಾರ್ಯಕ್ರಮ

ನವೆಂಬರ್ 2, 2026

ಭರತನಾಟ್ಯ ಜೂನಿಯರ್ ರಾಜ್ಯಮಟ್ಟದ ಪರೀಕ್ಷೆಯಲ್ಲಿ ಕು. ಖುಷಿಗೆ ಉನ್ನತ ಶ್ರೇಣಿ

ನವೆಂಬರ್ 2, 2026

ಹೆಬ್ಬಾಲೆ ವ್ಯಾಪ್ತಿಯ ವೀರಶೈವ ಲಿಂಗಾಯತ ಸಮಾಜದ ಸಭೆ: ನೂತನ ಬಸವ ಸಮಿತಿ ರಚನೆ, ಮೋಹನ್ ಹಕ್ಕೆ ನಂಜಪ್ಪ ಅಧ್ಯಕ್ಷರಾಗಿ ಆಯ್ಕೆ

ನವೆಂಬರ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.