ಕುಶಾಲನಗರ, NEWS DESK ನ.3: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನವೆಂಬರ್ 4ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯಲಿರುವ ಶಿಕ್ಷಣ ಇಲಾಖೆಯ ವಿಶೇಷ ಸಭೆ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಲು ಕುಶಾಲನಗರ ತಾಲ್ಲೂಕಿನ ಅತ್ತೂರಿನ ಜ್ಞಾನಗಂಗಾ ವಸತಿ ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಹಾಗೂ ಶಿಕ್ಷಣ ತಜ್ಞರಾದ ಬಿ.ಎಸ್. ನಿಂಗಪ್ಪ ಅವರು ಆಯ್ಕೆಯಾಗಿದ್ದಾರೆ.
ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ನಡೆಯಲಿರುವ ಈ ವಿಶೇಷ ಸಭೆ ಹಾಗೂ ಸಂವಾದದಲ್ಲಿ ಭಾಗವಹಿಸಲು ಜಿಲ್ಲೆಯಿಂದ ನಿಂಗಪ್ಪ ಅವರನ್ನು ಆಯ್ಕೆ ಮಾಡಲಾಗಿದ್ದು, ಅವರ ಆಯ್ಕೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.

















