Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.3: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾದ ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಜಿಲ್ಲೆಯ ಬಹುಭಾಷಾ ಸಾಹಿತಿ ಉಳುವಂಗಡ ಕಾವೇರಿ ಉದಯ್ ಅವರು ಆಯ್ಕೆಯಾಗಿದ್ದಾರೆ.

2026-27ನೇ ಸಾಲಿನ ದತ್ತಿ ಪ್ರಶಸ್ತಿಯ ಆಯ್ಕೆ ಪ್ರಕ್ರಿಯೆಗಾಗಿ ಜಿಲ್ಲೆಯ ಮಹಿಳಾ ಲೇಖಕಿಯರಿಂದ ಕೃತಿಗಳನ್ನು ಆಹ್ವಾನಿಸಲಾಗಿತ್ತು. ಸ್ವೀಕೃತ ಕೃತಿಗಳನ್ನು ಜಿಲ್ಲೆಯ ಮೂವರು ಹಿರಿಯ ಸಾಹಿತಿಗಳು ಪ್ರತ್ಯೇಕವಾಗಿ ಪರಿಶೀಲಿಸಿ ನೀಡಿದ ಅಂಕಗಳನ್ನು ಕ್ರೋಢೀಕರಿಸಿ ಕಾವೇರಿ ಉದಯ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಟಿ. ಶೆಟ್ಟಿಗೇರಿ ನಿವಾಸಿ ಚಂಗುಲಂಡ ಸಿ. ಮಾದಪ್ಪ ಮತ್ತು ಸರಸ್ವತಿ ದಂಪತಿಯ ಪುತ್ರಿಯಾಗಿ 1969ರ ಮೇ 18ರಂದು ಜನಿಸಿದ ಇವರು ಪುತ್ತೂರಿನಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದಾರೆ. ಬಳಿಕ ವಗರೆಯ ನಿವಾಸಿ ಉಳುವಂಗಡ ಯು. ಉದಯ್ ಅವರನ್ನು ವಿವಾಹವಾಗಿದ್ದು, ಇಬ್ಬರು ಪುತ್ರರು ಹಾಗೂ ಮೊಮ್ಮಕ್ಕಳೊಂದಿಗೆ ಕುಟುಂಬ ಜೀವನ ನಡೆಸುತ್ತಿದ್ದಾರೆ.

ಬಹುಭಾಷಾ ಸಾಹಿತಿ, ಕವಯಿತ್ರಿಯಾಗಿರುವ ಕಾವೇರಿ ಉದಯ್ ಅವರು ಹವ್ಯಾಸಿ ರಂಗ ಕಲಾವಿದೆ ಹಾಗೂ ಚಿತ್ರಕಲಾವಿದೆಯೂ ಆಗಿದ್ದಾರೆ. ಕನ್ನಡ, ಕೊಡವ, ಇಂಗ್ಲಿಷ್, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಕಥೆ, ಕವನ, ಕಾದಂಬರಿ, ಮುಕ್ತಕ, ವಚನ, ಜೀವನ ಚರಿತ್ರೆ, ಭಕ್ತಿ ಪ್ರಧಾನ ಕೃತಿಗಳು, ಲಲಿತ ಪ್ರಬಂಧ ಹಾಗೂ ನಾಟಕ ಸೇರಿದಂತೆ ಒಟ್ಟು 36 ಕೃತಿಗಳನ್ನು ರಚಿಸಿ ಪ್ರಕಟಿಸಿದ್ದಾರೆ. ಆರು ಭಾಷೆಗಳಲ್ಲಿ ಕವನ ವಾಚನ ಮಾಡಿರುವ ಹೆಗ್ಗಳಿಕೆಯೂ ಇವರಿಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮಂಗಲ ಹೋಬಳಿ ಅಧ್ಯಕ್ಷೆ, ಸಿರಿಗನ್ನಡ ವೇದಿಕೆಯ ಕೊಡಗು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ, ಗುರುಕುಲ ಕಲಾ ಪ್ರತಿಷ್ಠಾನದ ಕೊಡಗು ಜಿಲ್ಲಾ ಘಟಕದ ಗೌರವಾಧ್ಯಕ್ಷೆ ಹಾಗೂ ಕರ್ನಾಟಕ ಲೇಖಕಿಯರ ಸಂಘದ ಕೊಡಗು ಶಾಖೆಯ ಉಪಾಧ್ಯಕ್ಷೆಯಾಗಿ ಸಾಹಿತ್ಯ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಇವರು ರಚಿಸಿರುವ ಕಾದಂಬರಿಯೊಂದು ಕೊಡವ ಚಲನಚಿತ್ರವಾಗಿ ಮೂಡಿಬಂದಿದ್ದು, ಇವರ ಸಣ್ಣ ಕಥೆಗಳನ್ನು ಆಧರಿಸಿ ನಾಲ್ಕು ಕಿರುಚಿತ್ರಗಳು ನಿರ್ಮಾಣಗೊಂಡಿವೆ. ಇವರು ರಚಿಸಿರುವ ಹಾಡುಗಳನ್ನು ಹಲವು ಗಾಯಕರು ಹಾಡಿದ್ದು, ಮಡಿಕೇರಿ ಆಕಾಶವಾಣಿಯ ಸುಪ್ರಭಾತ ಕಾರ್ಯಕ್ರಮದಲ್ಲಿಯೂ ಪ್ರಸಾರವಾಗುತ್ತಿವೆ.

ಮೈಸೂರು ದಸರಾ ಕವಿಗೋಷ್ಠಿಯಲ್ಲಿ ಕೊಡವ ಮತ್ತು ಕನ್ನಡ ಭಾಷೆಗಳಲ್ಲಿ ಎರಡು ಬಾರಿ ಕವನ ವಾಚನ ಮಾಡಿರುವ ಇವರು, ಹಲವು ಕವಿಗೋಷ್ಠಿಗಳ ಅಧ್ಯಕ್ಷತೆ ವಹಿಸಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ವಿಚಾರ ಮಂಡನೆ ಮಾಡಿರುವುದಲ್ಲದೆ, ಪೌರಾಣಿಕ ಮತ್ತು ಸಾಮಾಜಿಕ ನಾಟಕಗಳನ್ನು ರಚಿಸಿ, ಮಹಿಳೆಯರಿಗೆ ನಿರ್ದೇಶನ ನೀಡಿ, ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿ ಪ್ರದರ್ಶನಗಳನ್ನು ನೀಡಿದ್ದಾರೆ.

ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದ ಸೇವೆಗಾಗಿ 2022ನೇ ಸಾಲಿನ ಕರ್ನಾಟಕ ಸರ್ಕಾರದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ, ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಮಕ್ಕಳ ಚಂದಿರ ಪುಸ್ತಕ ಪ್ರಶಸ್ತಿ, ಗುರುಕುಲ ಕಲಾ ಪ್ರತಿಷ್ಠಾನದ ಗುರುಕುಲ ಶಿರೋಮಣಿ ಪ್ರಶಸ್ತಿ, ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿ, ನಾಡಿನ ಸಮಾಚಾರ ದಿನಪತ್ರಿಕೆಯ ಸಾಹಿತ್ಯ ರತ್ನ ಮತ್ತು ಸಾಹಿತ್ಯ ತಪಸ್ವಿ ಪ್ರಶಸ್ತಿ, ಮೈಸೂರು ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದ ಬಹುಭಾಷಾ ಸಾಹಿತ್ಯ ಚೇತನ ಪ್ರಶಸ್ತಿ, ವಿದ್ಯಾಧರ ಕನ್ನಡ ಪ್ರತಿಷ್ಠಾನದ ಕನ್ನಡ ಬಹುಭಾಷಾ ಸಾಹಿತ್ಯ ಸಿರಿ ಪ್ರಶಸ್ತಿ, ಯಶೋಮಾರ್ಗ ಸೇವಾ ಫೌಂಡೇಶನ್‌ನ ಕೆ.ಪಿ. ಪೂರ್ಣಚಂದ್ರ ತೇಜಸ್ವಿ (ಪೂಚಂತೆ) ಪ್ರಶಸ್ತಿ, ಮಾಣಿಕ್ಯ ಪ್ರಕಾಶನದ ಕಾದಂಬರಿ ಮಾಣಿಕ್ಯ ಪ್ರಶಸ್ತಿ ಸೇರಿದಂತೆ ಒಟ್ಟು ಹನ್ನೊಂದು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇಂಟರ್‌ನ್ಯಾಷನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿಯಿಂದ ಗೌರವ ಡಾಕ್ಟರೇಟ್ ಪದವಿಯನ್ನೂ ಪಡೆದಿದ್ದಾರೆ.

ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಈವರೆಗೆ 26 ಸಂಘ-ಸಂಸ್ಥೆಗಳು ಸನ್ಮಾನಿಸಿವೆ.

ಹಿಂದಿನ ವರ್ಷಗಳಲ್ಲಿ ವಿಜಯ ವಿಷ್ಣು ಭಟ್ ಪ್ರಥಮ ದತ್ತಿ ಪ್ರಶಸ್ತಿಯನ್ನು ಸಾಹಿತಿ ಸುಮಿತಾ ಅಮೃತ್ ರಾಜ್ ಹಾಗೂ ದ್ವಿತೀಯ ಪ್ರಶಸ್ತಿಯನ್ನು ಸಾಹಿತಿ ಪ್ರತಿಭಾ ಹರೀಶ್ ರೈ ಅವರು ಪಡೆದುಕೊಂಡಿದ್ದರು. ಈ ಬಾರಿ ತೃತೀಯ ಪ್ರಶಸ್ತಿಗೆ ಉಳುವಂಗಡ ಕಾವೇರಿ ಉದಯ್ ಅವರು ಭಾಜನರಾಗಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾಗಿರುವ ಕಾವೇರಿ ಉದಯ್ ಅವರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಭಿನಂದಿಸಿದೆ ಎಂದು ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಬಾಲ್ಯದಿಂದಲೇ ಸ್ವಚ್ಛತೆಯ ಹವ್ಯಾಸ ಬೆಳೆಸುವುದು ಅವಶ್ಯ: ಸೀತಾಲಕ್ಷ್ಮಿ

ನವೆಂಬರ್ 4, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026

ಪೇರಿಯಂಡ ಪೆಮ್ಮಯ್ಯ ದಂಪತಿ ಸ್ಥಾಪಿಸಿದ ಪ್ರಥಮ ವರ್ಷದ ಸಾಹಿತ್ಯ ಪ್ರಶಸ್ತಿಗೆ ಡಾ. ಕೋರನ ಸರಸ್ವತಿ ಆಯ್ಕೆ

ನವೆಂಬರ್ 3, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.3: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಜಿಲ್ಲೆಯ ವಕೀಲರಾದ ಪೇರಿಯಂಡ ಪಿ. ಪೆಮ್ಮಯ್ಯ ಮತ್ತು…

ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಗೆ ಸಾಹಿತಿ ಉಳುವಂಗಡ ಕಾವೇರಿ ಉದಯ್ ಆಯ್ಕೆ

ನವೆಂಬರ್ 3, 2026

ಸಾಹಿತಿ ನಾ. ಡಿಸೋಜಾ ವಿಶ್ವಮಾನವತ್ವ ಮೇಳೈಸಿದ ದಾರ್ಶನಿಕ: ಎಸ್.ಐ. ಮುನೀರ್ ಅಹಮದ್

ನವೆಂಬರ್ 3, 2026

ಸರ್ವದೈವತ ಪದವಿ ಪೂರ್ವ ಕಾಲೇಜಿನ ಮೂರು ತಂಡಗಳು ರಾಜ್ಯಮಟ್ಟಕ್ಕೆ ಆಯ್ಕೆ

ನವೆಂಬರ್ 3, 2026

ಶಿಕ್ಷಣ ಇಲಾಖೆಯ ವಿಶೇಷ ಸಭೆ ಹಾಗೂ ಸಂವಾದಕ್ಕೆ ಜ್ಞಾನಗಂಗಾ ಶಾಲೆಯ ಬಿ.ಎಸ್. ನಿಂಗಪ್ಪ ಆಯ್ಕೆ

ನವೆಂಬರ್ 3, 2026

ತಂತ್ರಜ್ಞಾನ ಆಧಾರಿತ ಕೃಷಿ ಮಾರುಕಟ್ಟೆ ಕುರಿತು ರೈತ ಕ್ಷೇತ್ರ ಪಾಠಶಾಲೆ

ನವೆಂಬರ್ 3, 2026

2027ರ ಕೊಡವ ಜಮ್ಮ ಮುಸ್ಲಿಂ ಕುಟುಂಬಗಳ ಕ್ರೀಡಾ ಸಂಭ್ರಮಕ್ಕೆ ಸಿದ್ಧತೆ; ವಾಲಿಬಾಲ್ ಮತ್ತು ಕ್ರಿಕೆಟ್ ಪಂದ್ಯಾಟದ ಧ್ವಜ ಹಸ್ತಾಂತರ: ಎರಡು ಕುಟುಂಬಗಳಿಗೆ ಆತಿಥ್ಯದ ಜವಾಬ್ದಾರಿ

ನವೆಂಬರ್ 3, 2026

ಮಡಿಕೇರಿ ದಸರಾ ಜನೋತ್ಸವಕ್ಕೆ ಹೊಸ ವೈಭವ ತಂದುಕೊಟ್ಟ ಶಾಸಕ ಡಾ.ಮಂತರ್ ಗೌಡ : ಪ್ರಕಾಶ್ ಆಚಾರ್ಯ ಬಣ್ಣನೆ : ನಾಲ್ಕು ವರ್ಷಗಳ ದಸರಾ ಯಶಸ್ಸಿನ ಹಿಂದೆ ಶಾಸಕರ ಇಚ್ಛಾಶಕ್ತಿ ಮತ್ತು ವಿಶೇಷ ಆಸಕ್ತಿ : ದಸರಾ ಆರ್ಥಿಕ ವ್ಯವಸ್ಥೆಗೆ ಹೊಸ ಚೈತನ್ಯ

ನವೆಂಬರ್ 3, 2026

ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಅರಿಯೋಣ: ಉ.ರಾ. ನಾಗೇಶ್

ನವೆಂಬರ್ 3, 2026

ಕುಶಾಲನಗರದಲ್ಲಿ ಸ್ವಚ್ಛತಾ ಜಾಗೃತಿ: ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ಇನ್ನರ್ ವೀಲ್ ಸಂಸ್ಥೆಯಿಂದ ಕಸದ ಬುಟ್ಟಿ ಕೊಡುಗೆ

ನವೆಂಬರ್ 3, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.