ಮಡಿಕೇರಿ, NEWS DESK ನ.6: ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಭಾಗದಲ್ಲಿ ₹1.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಅಲಿ, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ವಲಯ ಅಧ್ಯಕ್ಷ ಕುಶಾಲಪ್ಪ, ಮಾಜಿ ಬ್ಲಾಕ್ ಅಧ್ಯಕ್ಷ ಇಸ್ಮಾಯಿಲ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಕಕ್ಕಬೆ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಗೂ ಕಕ್ಕಬೆ ವಲಯ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಗ್ರಾಮ ಪಂಚಾಯಿತಿ ಸದಸ್ಯೆ ಅಮೀನ, ಮಾಜಿ ಅಧ್ಯಕ್ಷೆ ವನಜಾಕ್ಷಿ, ಉಪಾಧ್ಯಕ್ಷ ಬೇಬಣ್ಣ, ಸದಸ್ಯ ಮಮ್ಮಾದ್ ಸೇರಿದಂತೆ ಹಲವು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಅರುಣ್ ಬೇಬ, ಹೇಮಾವತಿ, ಸಾಬ, ಹ್ಯಾರಿಸ್, ತಮ್ಮಿ, ಅಜೀಜ್ ಹಾಗೂ ಪಕ್ಷದ ಮುಖಂಡರಾದ ತಮ್ಮಯ್ಯ, ದಯಾ ಚಿನ್ನಪ್ಪ, ಪ್ರಕಾಶ್, ಮಿಥುನ್ ಮಾಚಯ್ಯ, ಮಚುರ ರವೀಂದ್ರ, ವಾಸಿಮ್, ಕುಂಡಚ್ಚಿರ ಮಂಜು ದೇವಯ್ಯ, ಝುಬೈರ್, ಸಿರಾಜ್ ಪರವಂಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

















