Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಹೆಬ್ಬಾಲೆ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ; ಸ್ವಸ್ಥ, ಸ್ವಚ್ಛ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಹೆಬ್ಬಾಲೆ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ; ಸ್ವಸ್ಥ, ಸ್ವಚ್ಛ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ

ನವೆಂಬರ್ 6, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ, NEWS DESK ನ. 6: ಬೆಳಕಿನ ಹಬ್ಬ ದೀಪಾವಳಿ ಸಂದರ್ಭದಲ್ಲಿ ಮಾಲಿನ್ಯಕಾರಿ ಪಟಾಕಿಗಳ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಮಕ್ಕಳಲ್ಲಿ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ ಕಾರ್ಯಕ್ರಮ ನಡೆಯಿತು.

ಶಾಲಾ ಶಿಕ್ಷಣ ಇಲಾಖೆ, ರಾಜ್ಯ ವಿಜ್ಞಾನ ಪರಿಷತ್ತು, ರಾಷ್ಟ್ರೀಯ ಹಸಿರು ಪಡೆ ಬನಶಂಕರಿ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಹಾಗೂ ಜಿಲ್ಲಾ ಪರಿಸರ ಜಾಗೃತಿ ಸಮಿತಿಯ ಆಶ್ರಯದಲ್ಲಿ ‘ಸ್ವಸ್ಥ ಹಾಗೂ ಸ್ವಚ್ಛ ಹಸಿರು ದೀಪಾವಳಿ-2026’ ಆಚರಣೆಯ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ಜನಜಾಗೃತಿ ಕಾರ್ಯಕ್ರಮದಲ್ಲಿ ಜಿಲ್ಲಾ ಪರಿಸರ ಜಾಗೃತಿ ಆಂದೋಲನದ ಜಿಲ್ಲಾ ಸಂಚಾಲಕ ಹಾಗೂ ಪ್ರೌಢಶಾಲಾ ನಿವೃತ್ತ ಮುಖ್ಯೋಪಾಧ್ಯಾಯ ಟಿ.ಜಿ. ಪ್ರೇಮಕುಮಾರ್ ಮಾತನಾಡಿದರು.

ಪಟಾಕಿ ಸಿಡಿಸುವುದರಿಂದ ವಾಯು ಮತ್ತು ಶಬ್ದ ಮಾಲಿನ್ಯ ಉಂಟಾಗುವುದಲ್ಲದೆ, ಮಕ್ಕಳು, ಹಿರಿಯ ನಾಗರಿಕರು, ಉಸಿರಾಟದ ಸಮಸ್ಯೆ ಹೊಂದಿರುವವರು, ಪ್ರಾಣಿಗಳು ಹಾಗೂ ಪಕ್ಷಿಗಳ ಆರೋಗ್ಯದ ಮೇಲೂ ಪ್ರತಿಕೂಲ ಪರಿಣಾಮ ಬೀರುತ್ತದೆ. ಆದ್ದರಿಂದ ಸಾರ್ವಜನಿಕರು ಪರಿಸರ ಸ್ನೇಹಿ, ಸುರಕ್ಷಿತ ಹಾಗೂ ಸ್ವಚ್ಛ ರೀತಿಯಲ್ಲಿ ದೀಪಾವಳಿ ಆಚರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಶಾಲಾ ಮುಖ್ಯೋಪಾಧ್ಯಾಯ ಎಚ್.ಎಂ. ವೆಂಕಟೇಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಮನೆಗಳಲ್ಲಿ ಮಾಲಿನ್ಯಕಾರಿ ಪಟಾಕಿಗಳನ್ನು ತ್ಯಜಿಸಿ ಹಣತೆ ಬೆಳಗಿಸುವ ಮೂಲಕ ದೀಪಾವಳಿ ಆಚರಿಸಬೇಕು. ಅಲ್ಲದೆ, ಪೋಷಕರು ಹಾಗೂ ಸಾರ್ವಜನಿಕರಲ್ಲಿ ಹಸಿರು ದೀಪಾವಳಿ ಆಚರಣೆಯ ಕುರಿತು ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.

ಶಾಲೆಯ ಇಕೋ ಕ್ಲಬ್ ಉಸ್ತುವಾರಿ ಶಿಕ್ಷಕಿ ಕೆ.ಎಸ್. ರಮ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಪಟಾಕಿಗಳ ಬಳಕೆಯಿಂದ ಪರಿಸರಕ್ಕೆ ಹಾನಿಯಾಗುವುದರಿಂದ ಪಟಾಕಿಗಳನ್ನು ತ್ಯಜಿಸಿ ಹಣತೆ ಬೆಳಗಿಸುವ ಮೂಲಕ ಪರಿಸರ ಸ್ನೇಹಿ ದೀಪಾವಳಿ ಆಚರಿಸುವ ಮಹತ್ವವನ್ನು ವಿವರಿಸಿದರು.

ವಿದ್ಯಾರ್ಥಿಗಳಾದ ಎಚ್.ವಿ. ಎಮೀಮ ಹಾಗೂ ಎಚ್.ಜಿ. ಹರ್ಷಿತ್ ಹಸಿರು ದೀಪಾವಳಿ ಆಚರಣೆಯ ಕುರಿತು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಶಾಲಾ ಶಿಕ್ಷಕರಾದ ಎಸ್.ಕೆ. ಶಿವಾನಂದ, ಸಿ.ಎಂ. ಬಬಿತ, ಜಿ. ವನಜ, ಸುಜಾತ ಹಾಗೂ ಎಚ್.ಪಿ. ಪ್ರತಿಮ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ಘೋಷಣಾ ಫಲಕಗಳನ್ನು ಹಿಡಿದು ಪರಿಸರ ಜಾಗೃತಿ ಮೂಡಿಸಿದರು. ‘ಹಣತೆ ಬೆಳಗಿಸಿ ದೀಪಾವಳಿ ಆಚರಿಸಿ’, ‘ಮಾಲಿನ್ಯಕಾರಿ ಪಟಾಕಿ ತ್ಯಜಿಸಿ ಪರಿಸರ ಉಳಿಸಿ’, ‘ಹಸಿರು ದೀಪಾವಳಿ ಆಚರಿಸಿ’, ‘ಸ್ವಸ್ಥ, ಸ್ವಚ್ಛ ದೀಪಾವಳಿ ಆಚರಣೆ ನಮ್ಮೆಲ್ಲರ ಹೊಣೆ’ ಎಂಬ ಘೋಷಣೆಗಳನ್ನು ಸಾರಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.6: ದೀಪಾವಳಿ ಹಬ್ಬದ ಪ್ರಯುಕ್ತ ಕುಶಾಲನಗರದ ಮುಖ್ಯರಸ್ತೆಯಲ್ಲಿರುವ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಚಿನ್ನಾಭರಣ, ವಜ್ರಾಭರಣ…

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಕೊಡಗು ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಿಎಂ, ಡಿಸಿಎಂ ಹಾಗೂ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಅಭಿನಂದನೆ; ಸಲ್ಲಿಸಿದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ.

ನವೆಂಬರ್ 6, 2026

ಭಾಗಮಂಡಲ ವಸತಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ; ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 6, 2026

ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ವಿಷ್ಣುಮೂರ್ತಿ ಕೋಲ; ಚಾಮುಂಡಿ ಉತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿ; ಪೇಟೆ ಸಂಚಾರದ ಮೂಲಕ ಪ್ರಸಾದ ವಿತರಣೆ

ನವೆಂಬರ್ 6, 2026

ನಿವೃತ್ತ ಅಂಗನವಾಡಿ ಶಿಕ್ಷಕಿ ನಳಿನಿ ರಮೇಶ್ ಅವರಿಗೆ ಸನ್ಮಾನ

ನವೆಂಬರ್ 6, 2026

ಹೆಬ್ಬಾಲೆ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ; ಸ್ವಸ್ಥ, ಸ್ವಚ್ಛ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ

ನವೆಂಬರ್ 6, 2026

ನಾಪೋಕ್ಲು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರಿಂದ ಭೂಮಿಪೂಜೆ

ನವೆಂಬರ್ 6, 2026

ಕಕ್ಕಬೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣರಿಂದ ಭೂಮಿಪೂಜೆ; ₹3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ

ನವೆಂಬರ್ 6, 2026

ನಾಪೋಕ್ಲು ಕೆಪಿಎಸ್ ಶಾಲೆಯ ಎಸ್.ಡಿ.ಎಂ.ಸಿ ಸಭೆಯಲ್ಲಿ ಶಾಸಕ ಪೊನ್ನಣ್ಣ ಭಾಗಿ

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.