ಮಡಿಕೇರಿ, NEWS DESK ನ.6: ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ವಸತಿ ಕಾಲೇಜಿನ ವಿದ್ಯಾರ್ಥಿಗಳು ಕೂಡಿಗೆಯ ಸರ್ಕಾರಿ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಕೂಟದಲ್ಲಿ ಕಾಲೇಜಿನ ಶರಣ ಬಸವ ಅವರು 110 ಮೀಟರ್ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನ ಹಾಗೂ ದರ್ಶನ್ ಅವರು 400 ಮೀಟರ್ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಕುಶಿ ಕೆ. ಎಂ. ಅವರು ಟ್ರಿಪಲ್ ಜಂಪ್ನಲ್ಲಿ ಪ್ರಥಮ ಸ್ಥಾನ ಹಾಗೂ ಲಾಂಗ್ ಜಂಪ್ನಲ್ಲಿ ದ್ವಿತೀಯ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಭುವನ್ ಕೆ. ವಿ. ಅವರು ಖೋ-ಖೋ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಲೋಕೇಶ್, ನಿಲಯಪಾಲಕರಾದ ದೀಪಕ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಪವನ್ ಸಾಗರ್ ಮತ್ತು ಕೆ. ಪಿ. ಸಂತೋಷ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ರಾಜ್ಯಮಟ್ಟದ ಕ್ರೀಡಾಕೂಟದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.

















