ಮಡಿಕೇರಿ, NEWS DESK ನ.6: ಮಕ್ಕಳ ಕ್ರೀಡಾ ಸಾಧನೆಯು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ ಎಂದು ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಿಜಯ್ ಪಿ.ಆರ್. ತಿಳಿಸಿದರು.
ನ.3ರಿಂದ 5ರವರೆಗೆ ಕೂಡಿಗೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದ ವಿವಿಧ ವಿಭಾಗಗಳಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಕಾಲೇಜಿನ ವಿದ್ಯಾರ್ಥಿಗಳನ್ನು ಅಭಿನಂದಿಸಿ ಅವರು ಮಾತನಾಡಿದರು.
ಕಾಲೇಜಿನ ಹಿರಿಯ ಉಪನ್ಯಾಸಕರಾದ ಚಿದಾನಂದ ಎನ್.ಎಸ್., ಅನಿಲ್ ಕುಮಾರ್, ಮಮತಾ ಸಿ.ಎಂ., ಮುಕ್ತಕೇಶಿ ಪಿ.ಆರ್. ಹಾಗೂ ಶಿವಪ್ಪ ವಿ.ವಿ. ಅವರ ಮಾರ್ಗದರ್ಶನ ಮತ್ತು ಮೇಲ್ವಿಚಾರಣೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸುದನ್ವ ಜಿ.ಎಸ್. ಅವರು ಬಾಲಕರ ಗುಡ್ಡಗಾಡು ಓಟದಲ್ಲಿ ಪ್ರಥಮ ಸ್ಥಾನ ಹಾಗೂ 3000 ಮೀ. ಮತ್ತು 1500 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಶಾಂತ್ ಸಿ.ಡಿ. ಅವರು ಬಾಲಕರ 5000 ಮೀ. ನಡಿಗೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಬಾಲಕಿಯರ ಗುಡ್ಡಗಾಡು ಓಟದಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿನಿ ತೀರ್ಥಕುಮಾರಿ ಐದನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪಂದ್ಯಾಟ ವಿಭಾಗದಲ್ಲಿ ಕಾಲೇಜಿನ ವಿದ್ಯಾರ್ಥಿನಿಯರಾದ ತ್ವಿಷಾ ದೇಚಮ್ಮ ಸಿ.ಎನ್., ಸೀತಮ್ಮ ಎನ್.ವಿ., ಕನಗಶ್ರೀ ಕೆ.ಎಸ್., ತಲಹರಿ ಹೇಮ, ಮದ್ದಿಲೆಟ್ಟಿ ಭಾನುತೇಜ, ಮತ್ತಿಯದ್ದುಲ ಮೈಥಿಲಿ, ಎ.ಜೆ. ಪರ್ಲಿನ್ ಪೊನ್ನಮ್ಮ, ಶೇಕ್ ಸುಮಿಯಾ, ಅಕ್ಷರ ತಿಮ್ಮಯ್ಯ ಕೆ.ಪಿ., ಸಬಿತಾ ಎ., ಪೂರ್ವಿ ಪೂವಮ್ಮ ಕೆ.ಎ., ರಮಾವತ್ ವರ್ಷ ಹಾಗೂ ತಲಹರಿ ಹರ್ಷಿತಾ ಅವರು ಹಾಕಿ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ರಾಜ್ಯಮಟ್ಟಕ್ಕೆ ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳನ್ನು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕ ವೃಂದ, ಕಾಲೇಜು ಅಭಿವೃದ್ಧಿ ಸಮಿತಿ ಹಾಗೂ ಸಿಬ್ಬಂದಿ ಅಭಿನಂದಿಸಿ ಮುಂದಿನ ಹಂತದ ಸ್ಪರ್ಧೆಗಳಿಗೆ ಶುಭ ಹಾರೈಸಿದರು.

















