Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.6: ಕೊಡಗು ಜಿಲ್ಲೆಯಲ್ಲಿ ಕೃಷಿ ಭೂಮಿಗಳ ಮಾರಾಟ ಹಾಗೂ ಸಾಂಪ್ರದಾಯಿಕ ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ ಹೆಚ್ಚುತ್ತಿರುವುದರಿಂದ ಜಿಲ್ಲೆಯ ಭೌಗೋಳಿಕ ಚಿತ್ರಣವೇ ಬದಲಾಗುತ್ತಿದೆ. ಇದರಿಂದ ಹಸಿರು ಪರಿಸರ ಹದಗೆಡುತ್ತಿದ್ದು, ಅಂತರ್ಜಲ ಮಟ್ಟವೂ ಕುಸಿಯುತ್ತಿದೆ ಎಂದು ಅಮ್ಮತ್ತಿ ರೈತ ಸಂಘ ಆತಂಕ ವ್ಯಕ್ತಪಡಿಸಿದೆ.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಗೌರವಾಧ್ಯಕ್ಷ ಕಾವಡಿಚಂಡ ಯು. ಗಣಪತಿ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಮಂದಿ ಕೊಡಗಿನಲ್ಲಿ ಮನಬಂದಂತೆ ಆಸ್ತಿಗಳನ್ನು ಖರೀದಿಸಿ, ತಮ್ಮ ಇಚ್ಛೆಯಂತೆ ಬಳಸಿಕೊಳ್ಳುತ್ತಿದ್ದಾರೆ. ಜಿಲ್ಲೆಯ ಕೃಷಿ ಸಂಸ್ಕೃತಿಗೆ ವಿರುದ್ಧವಾಗಿ ಕೃಷಿ ಭೂಮಿಗಳಲ್ಲಿ ಕಟ್ಟಡಗಳನ್ನು ನಿರ್ಮಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಹಿಂದೆ ಗದ್ದೆ ಬಯಲುಗಳಲ್ಲಿ ವ್ಯಾಪಕವಾಗಿ ಭತ್ತದ ಕೃಷಿ ನಡೆಯುತ್ತಿದ್ದುದರಿಂದ ಅಂತರ್ಜಲ ಮಟ್ಟ ಉತ್ತಮವಾಗಿತ್ತು. ಆದರೆ, ಇದೀಗ ಕೃಷಿ ಭೂಮಿಗಳನ್ನು ಕಟ್ಟಡ ನಿರ್ಮಾಣಕ್ಕೆ ಬಳಸುತ್ತಿರುವುದರಿಂದ ಅಂತರ್ಜಲ ಮಟ್ಟ ಕುಸಿಯುತ್ತಿದೆ. ಕೃಷಿ ಭೂಮಿಗಳ ಪರಿವರ್ತನೆಯಿಂದ ಜಮೀನುಗಳು ಬರಡಾಗುತ್ತಿದ್ದು, ಜಿಲ್ಲೆಯ ಪರಿಸರ ಸಮತೋಲನಕ್ಕೂ ಧಕ್ಕೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಕೊಡಗಿನ ನೈಸರ್ಗಿಕ ಸೌಂದರ್ಯಕ್ಕೆ ಧಕ್ಕೆ

ಕೊಡಗು 1952ರಿಂದ 1956ರವರೆಗೆ ‘ಸಿ’ ರಾಜ್ಯವಾಗಿದ್ದ ಅವಧಿಯಲ್ಲಿ ಅತ್ಯಂತ ಸುಂದರ ನಾಡಾಗಿತ್ತು. ಬಳಿಕ ವಿಶಾಲ ಕರ್ನಾಟಕದೊಂದಿಗೆ ವಿಲೀನಗೊಂಡ ನಂತರ ಹೊರಭಾಗದ ಮಂದಿ ಜಿಲ್ಲೆಯ ಜಮೀನುಗಳನ್ನು ಖರೀದಿಸಿ ನಡೆಸುತ್ತಿರುವ ಚಟುವಟಿಕೆಗಳಿಂದ ಕೊಡಗಿನ ನೈಸರ್ಗಿಕ ಸೌಂದರ್ಯ ಹಾಳಾಗುವುದರ ಜೊತೆಗೆ ಸ್ಥಳೀಯ ಸಂಸ್ಕೃತಿಗೂ ಧಕ್ಕೆಯಾಗಿದೆ ಎಂದು ಗಣಪತಿ ಬೇಸರ ವ್ಯಕ್ತಪಡಿಸಿದರು.

ಕೃಷಿ ಭೂಮಿಗಳ ಪರಿವರ್ತನೆಯಿಂದ ಅಂತರ್ಜಲ ಮಟ್ಟ ನಿರಂತರವಾಗಿ ಕುಸಿಯುತ್ತಿದ್ದು, ಈಗಾಗಲೇ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.

ಕೊಡಗಿನ ಸ್ಥಳೀಯ ನಿವಾಸಿಗಳು ತಮ್ಮ ಜಮೀನುಗಳ ಮಹತ್ವವನ್ನು ಅರಿತುಕೊಳ್ಳಬೇಕು. ಯಾವುದೇ ಕಾರಣಕ್ಕೂ ಹೊರಗಿನವರಿಗೆ ಜಮೀನುಗಳನ್ನು ಪರಭಾರೆ ಮಾಡದೆ, ಮಾರಾಟ ಅನಿವಾರ್ಯವಾದಲ್ಲಿ ಸ್ಥಳೀಯರಿಗೇ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.

ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಬಿಲ್ ವಿನಾಯಿತಿಗೆ ಆಗ್ರಹ

ಹಿಂದಿನ ಸರ್ಕಾರದ ಅವಧಿಯಲ್ಲಿ ಕೊಡಗಿನ ಬೆಳೆಗಾರರು ಕೃಷಿ ಚಟುವಟಿಕೆಗಳಿಗೆ ಬಳಸುವ 10 ಎಚ್‌ಪಿ ವರೆಗಿನ ಮೋಟಾರ್ ಪಂಪ್‌ಗಳಿಗೆ ವಿದ್ಯುತ್ ಬಿಲ್‌ನಲ್ಲಿ ರಿಯಾಯಿತಿ ನೀಡುವ ವಿಚಾರ ಪ್ರಸ್ತಾಪವಾಗಿತ್ತು. ಆದರೆ, ಪ್ರಸ್ತುತ ಸರ್ಕಾರದ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಹೊರತುಪಡಿಸಿ ರೈತರ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿಲ್ಲ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕವೇ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದ ಅವರು, ಕೊಡಗಿನ ಬೆಳೆಗಾರರ ಹಿತದೃಷ್ಟಿಯಿಂದ ಕೃಷಿ ಪಂಪ್‌ಸೆಟ್‌ಗಳಿಗೆ ತಕ್ಷಣ ವಿದ್ಯುತ್ ಬಿಲ್ ವಿನಾಯಿತಿ ಒದಗಿಸಬೇಕೆಂದು ಒತ್ತಾಯಿಸಿದರು.

ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿ

ಕೊಡಗಿನ ಕೃಷಿಕರು ಜಮೀನಿನ ದಾಖಲೆಗಳಲ್ಲಿನ ಪೌತಿ ಖಾತೆ ಸಮಸ್ಯೆಯಿಂದ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಜಿಲ್ಲೆಯ ಹಲವು ಜಮೀನುಗಳ ಆರ್‌ಟಿಸಿಗಳಲ್ಲಿ ಒಂದೇ ಕುಟುಂಬದ ಹತ್ತಾರು ಮಂದಿಯ ಹೆಸರುಗಳಿದ್ದು, ಅವರಲ್ಲಿ ಮೃತಪಟ್ಟವರ ಹೆಸರುಗಳೂ ಇನ್ನೂ ದಾಖಲೆಗಳಲ್ಲಿ ಮುಂದುವರಿದಿವೆ ಎಂದು ತಿಳಿಸಿದರು.

ಕೆಲವು ಆರ್‌ಟಿಸಿಗಳಲ್ಲಿ ಹಿಂದಿನ ತಲೆಮಾರಿನವರ ಹೆಸರುಗಳಿದ್ದು, ಅವರ ಬಗ್ಗೆ ಪ್ರಸ್ತುತ ಕುಟುಂಬದ ಸದಸ್ಯರಿಗೆ ಸ್ಪಷ್ಟ ಮಾಹಿತಿಯೇ ಇಲ್ಲ. ಇನ್ನೂ ಕೆಲವು ದಾಖಲೆಗಳಲ್ಲಿ ನಮೂದಾಗಿರುವ ವ್ಯಕ್ತಿಗಳು ಜೀವಂತವಾಗಿದ್ದಾರೆಯೇ ಅಥವಾ ಮೃತಪಟ್ಟಿದ್ದಾರೆಯೇ ಎಂಬುದೂ ತಿಳಿದಿಲ್ಲ ಎಂದರು.

ನಾಲ್ಕೈದು ದಶಕಗಳ ಹಿಂದೆ ಮೃತಪಟ್ಟವರ ಮರಣ ಪ್ರಮಾಣಪತ್ರಗಳು ಲಭ್ಯವಿಲ್ಲದ ಕಾರಣ ಆರ್‌ಟಿಸಿಗಳಲ್ಲಿನ ಲೋಪದೋಷಗಳನ್ನು ಸರಿಪಡಿಸುವುದು ಕಷ್ಟಕರವಾಗಿದೆ. ಇದರಿಂದ ರೈತರು ತಮ್ಮ ಜಮೀನುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸರಿಪಡಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರ ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ವಿಶೇಷ ಕ್ರಮ ಕೈಗೊಳ್ಳಬೇಕೆಂದು ಕಾವಡಿಚಂಡ ಯು. ಗಣಪತಿ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಅಮ್ಮತ್ತಿ ರೈತ ಸಂಘದ ಅಧ್ಯಕ್ಷ ಕೇಚಂಡ ಕುಶಾಲಪ್ಪ, ಕಾರ್ಯದರ್ಶಿ ಮನೆಯಪಂಡ ಜಿ. ಪೊನ್ನಪ್ಪ ಹಾಗೂ ಖಜಾಂಚಿ ಪಟ್ಟಡ ಬಿ. ಅರುಣ್ ಚಂಗಪ್ಪ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 2026

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.6: ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದ ವ್ಯಕ್ತಿಯನ್ನು ಕರ್ನಾಟಕ ಗೂಂಡಾ…

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 2026

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಕೊಡಗು ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಿಎಂ, ಡಿಸಿಎಂ ಹಾಗೂ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಅಭಿನಂದನೆ; ಸಲ್ಲಿಸಿದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ.

ನವೆಂಬರ್ 6, 2026

ಭಾಗಮಂಡಲ ವಸತಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ; ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 6, 2026

ಭಗಂಡೇಶ್ವರ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನಡೆದ ವಿಷ್ಣುಮೂರ್ತಿ ಕೋಲ; ಚಾಮುಂಡಿ ಉತ್ಸವದಲ್ಲಿ ಸಹಸ್ರಾರು ಭಕ್ತರು ಭಾಗಿ; ಪೇಟೆ ಸಂಚಾರದ ಮೂಲಕ ಪ್ರಸಾದ ವಿತರಣೆ

ನವೆಂಬರ್ 6, 2026

ನಿವೃತ್ತ ಅಂಗನವಾಡಿ ಶಿಕ್ಷಕಿ ನಳಿನಿ ರಮೇಶ್ ಅವರಿಗೆ ಸನ್ಮಾನ

ನವೆಂಬರ್ 6, 2026

ಹೆಬ್ಬಾಲೆ ಶಾಲೆಯಲ್ಲಿ ಹಸಿರು ದೀಪಾವಳಿ ಆಚರಣೆ; ಸ್ವಸ್ಥ, ಸ್ವಚ್ಛ ಹಾಗೂ ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಟಿ.ಜಿ. ಪ್ರೇಮಕುಮಾರ್ ಮನವಿ

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.