Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ, NEWS DESK ನ.7: ರಾಷ್ಟ್ರಕವಿ ಕುವೆಂಪು ಅವರು ಆಧುನಿಕ ಕನ್ನಡ ಸಾಹಿತ್ಯ ಲೋಕದ ದಿಗ್ಗಜರಾಗಿದ್ದು, ಕನ್ನಡ ಸಾಹಿತ್ಯಕ್ಕೆ ಅವರ ಕೊಡುಗೆ ಅನನ್ಯ ಮತ್ತು ಹಿರಿದಾದುದು. ಅವರ ಸಾಹಿತ್ಯವು ವಿಶ್ವಮಾನವ ಸಂದೇಶ, ವೈಚಾರಿಕತೆ, ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಪರಿಸರ ಪ್ರಜ್ಞೆಯನ್ನು ಸಾರುತ್ತದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ದೇಶಕಿ ಹಾಗೂ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಕನ್ನಡ ಅಧ್ಯಾಪಕಿ ಬಿ.ಬಿ.ಹೇಮಲತಾ ಹೇಳಿದರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ದಿವಂಗತ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ, ಪದವಿ ಪೂರ್ವ ಮತ್ತು ಪದವಿ ವಿದ್ಯಾರ್ಥಿಗಳಿಗೆ ನಡೆದ ಪ್ರಬಂಧ ಸ್ಪರ್ಧೆಯ ಬಹುಮಾನ ವಿತರಣೆ ಹಾಗೂ 71ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ‘ಕನ್ನಡ ಸಾಹಿತ್ಯಕ್ಕೆ ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯದ ಕೊಡುಗೆಗಳು’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಿದರು.

ಕುವೆಂಪು ಅವರು ಇಪ್ಪತ್ತನೇ ಶತಮಾನ ಕಂಡ ದೈತ್ಯ ಪ್ರತಿಭೆಯಾಗಿದ್ದು, ‘ಯುಗದ ಕವಿ, ಜಗದ ಕವಿ’ ಎನಿಸಿಕೊಂಡವರು. ‘ಓ ನನ್ನ ಚೇತನ, ಆಗು ನೀ ಅನಿಕೇತನ’ ಎಂಬ ತತ್ವದ ಮೂಲಕ ಮನುಜಮತ, ವಿಶ್ವಪಥದ ಪರಿಕಲ್ಪನೆಯನ್ನು ಜಗತ್ತಿಗೆ ಸಾರಿದವರು. ಕನ್ನಡ ಸಾಹಿತ್ಯ ಲೋಕದ ಪ್ರಕೃತಿ ಕವಿ ಮತ್ತು ರಸಕವಿಯಾಗಿ ಪ್ರಸಿದ್ಧರಾಗಿರುವ ಅವರ ಸಾಹಿತ್ಯಕ್ಕೂ ಪ್ರಕೃತಿಗೂ ಅವಿನಾಭಾವ ಸಂಬಂಧವಿದೆ ಎಂದರು.

ಕುವೆಂಪು ಅವರು ಜನಿಸಿ ಬೆಳೆದ ಮಲೆನಾಡಿನ ಕುಪ್ಪಳ್ಳಿಯ ದಟ್ಟ ಅರಣ್ಯ, ಮಳೆ, ಬೆಟ್ಟ-ಗುಡ್ಡಗಳು, ನದಿಗಳು ಹಾಗೂ ಪಕ್ಷಿಗಳ ಚಿಲಿಪಿಲಿ ನಾದ ಅವರ ಬಾಲ್ಯದ ಮೇಲೆ ಗಾಢ ಪ್ರಭಾವ ಬೀರಿದ್ದು, ಅವರ ಕಾವ್ಯಕ್ಕೆ ಜೀವ ತುಂಬಿದವು ಎಂದು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಮಾತನಾಡಿ, ಕನ್ನಡ ನಾಡು-ನುಡಿ, ಕಲೆ ಮತ್ತು ಸಂಸ್ಕೃತಿಗೆ ಎರಡು ಸಾವಿರ ವರ್ಷಗಳಿಗೂ ಅಧಿಕ ಭವ್ಯ ಇತಿಹಾಸವಿದೆ. ಇದರ ಸಂರಕ್ಷಣೆ ಮತ್ತು ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯವನ್ನು ಅಭ್ಯಾಸ ಮಾಡುವ ಮೂಲಕ ಭಾಷೆಯ ಬೆಳವಣಿಗೆಯೊಂದಿಗೆ ತಮ್ಮ ಜ್ಞಾನವನ್ನೂ ವೃದ್ಧಿಸಿಕೊಳ್ಳಬೇಕು ಎಂದರು.

ಕನ್ನಡವು ಭಾರತದ ಶಾಸ್ತ್ರೀಯ ಭಾಷೆಗಳಲ್ಲಿ ಒಂದಾಗಿದ್ದು, ಶ್ರೀಮಂತ ವ್ಯಾಕರಣ ಮತ್ತು ಶಬ್ದಕೋಶವನ್ನು ಹೊಂದಿದೆ. ಕನ್ನಡ ದತ್ತಿ ಉಪನ್ಯಾಸ ಕಾರ್ಯಕ್ರಮಗಳು ಭಾಷೆ, ಸಾಹಿತ್ಯ, ಸಂಸ್ಕೃತಿ, ಇತಿಹಾಸ ಹಾಗೂ ಸಾಮಾಜಿಕ ಮೌಲ್ಯಗಳನ್ನು ಜನರಿಗೆ ತಲುಪಿಸುವುದರೊಂದಿಗೆ ಹಿರಿಯ ಚೇತನಗಳನ್ನು ಸ್ಮರಿಸುವ ಮಹತ್ವದ ಸಾಹಿತ್ಯಿಕ ಕಾರ್ಯಕ್ರಮಗಳಾಗಿವೆ ಎಂದು ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಎಸ್.ಎನ್.ರಾಜೇಂದ್ರ ಮಾತನಾಡಿ, ಕನ್ನಡ ಭಾಷೆ, ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿಯಾಗಿದೆ. ವಿದ್ಯಾರ್ಥಿಗಳು ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳುವುದರೊಂದಿಗೆ ಕನ್ನಡ ಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಂಡು ಮಾತೃಭಾಷೆಗೆ ಪ್ರಾಮುಖ್ಯತೆ ನೀಡಬೇಕು ಎಂದರು.

ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಕುವೆಂಪು ಅವರು ಕೇವಲ ಮಹಾನ್ ಕವಿಗಳಷ್ಟೇ ಅಲ್ಲದೆ, ಸಮಾಜದಲ್ಲಿದ್ದ ಮೌಢ್ಯ, ಜಾತಿ ಪದ್ಧತಿ ಮತ್ತು ಅಸಮಾನತೆಯ ವಿರುದ್ಧ ಧ್ವನಿ ಎತ್ತಿದ ಸಾಮಾಜಿಕ ಹರಿಕಾರ ಹಾಗೂ ಮಾನವತಾವಾದಿಯಾಗಿದ್ದರು. ಅವರ ವೈಚಾರಿಕ ಪ್ರಜ್ಞೆ ಸಮಾಜದ ಕಣ್ತೆರೆಸುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದರು.

ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ಬಿ.ಜಿ.ಶಾಂತಿ, ಮನುಷ್ಯನನ್ನು ಮನುಷ್ಯನಾಗಿಯೇ ಕಾಣಬೇಕು ಎಂಬ ಶುದ್ಧ ಮಾನವತಾವಾದವನ್ನು ಕುವೆಂಪು ಪ್ರತಿಪಾದಿಸಿದ್ದರು. ‘ಮನುಜಮತ, ವಿಶ್ವಪಥ’ ಎಂಬ ದಿವ್ಯ ಮಂತ್ರವನ್ನು ಜಗತ್ತಿಗೆ ಸಾರಿದ ಅವರ ಸಾಹಿತ್ಯವನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಬೇಕು ಎಂದರು.

ದತ್ತಿ ಉಪನ್ಯಾಸದ ದಾನಿಯೂ ಆದ ಶಿಕ್ಷಕಿ ಸ್ನೇಹ ಬಸಮ್ಮ ಮಾತನಾಡಿ, ವಿದ್ಯಾರ್ಥಿಗಳು ಕುವೆಂಪು ಅವರ ವಿಶ್ವಮಾನವ ಸಂದೇಶ ಮತ್ತು ವೈಚಾರಿಕತೆಯನ್ನು ಅರಿತುಕೊಳ್ಳುವುದರೊಂದಿಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಭಾಷಾವಾರು ಪ್ರಾಂತ್ಯಗಳ ರಚನೆ ಕುರಿತು ಮಾತನಾಡಿದ ರಾಜ್ಯಶಾಸ್ತ್ರ ಉಪನ್ಯಾಸಕ ಟಿ.ಡಿ.ರಾಜ ಅವರು ಕರ್ನಾಟಕ ಏಕೀಕರಣದ ಹೋರಾಟದ ವಿವಿಧ ಮಜಲುಗಳನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕು ಕೋಶಾಧಿಕಾರಿ ಕೆ.ವಿ.ಉಮೇಶ್, ಹೆಬ್ಬಾಲೆ ಘಟಕದ ಅಧ್ಯಕ್ಷ ಎಂ.ಎನ್.ಮೂರ್ತಿ, ಉಪನ್ಯಾಸಕರಾದ ಫಿಲಿಪ್ ವಾಸ್, ಕೆ.ಎಲ್.ಅವಿನಾಶ್, ಪ್ರಮೋದ್, ಕಾಲೇಜಿನ ಗ್ರಂಥಪಾಲಕ ಎಸ್.ನಂದೀಶ್ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕಿ ಎಂ.ಎಚ್.ಸೋನಿಯಾ ಕಾರ್ಯಕ್ರಮ ನಿರ್ವಹಿಸಿದರು. ಉಪನ್ಯಾಸಕ ಕೆ.ಎಲ್.ಅವಿನಾಶ್ ಸ್ವಾಗತಿಸಿದರು. ಉಪನ್ಯಾಸಕ ಪ್ರಮೋದ್ ವಂದಿಸಿದರು. ವಿದ್ಯಾರ್ಥಿಗಳು ನಾಡಗೀತೆ ಹಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ನಾಂಗಲ ಗ್ರಾಮದಲ್ಲಿ ಮಹಿಳಾ ಸಮಾಜದ ನೂತನ ಕಟ್ಟಡಕ್ಕೆ ಭೂಮಿ ಪೂಜೆ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026

ಕುಶಾಲನಗರದಲ್ಲಿ ಕರ್ಕಶ ಡಿಜೆ ಸೌಂಡ್: ಮೂರು ಪ್ರವಾಸಿ ಬಸ್‌ಗಳಿಗೆ ದಂಡ

ನವೆಂಬರ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.7: ಕೊಡಗು ಜಿಲ್ಲೆಗೆ ಹೊರ ರಾಜ್ಯಗಳಿಂದ ಪ್ರವಾಸಕ್ಕೆ ಆಗಮಿಸುವ ಪ್ರವಾಸಿಗರು ಬಸ್‌ಗಳಲ್ಲಿ ಡಿಜೆ ಸೌಂಡ್ ಸಿಸ್ಟಮ್…

ಕ.ಸಾ.ಪ.ವತಿಯಿಂದ ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗಂಗಮ್ಮ ರಾಚಪ್ಪ ದತ್ತಿನಿಧಿ ಉಪನ್ಯಾಸ; ಕನ್ನಡ ಸಾಹಿತ್ಯಕ್ಕೆ ಕುವೆಂಪು ಅವರ ಕೊಡುಗೆ ಅನನ್ಯ: ಬಿ.ಬಿ.ಹೇಮಲತಾ ಬಣ್ಣನೆ

ನವೆಂಬರ್ 7, 2026

ಕೃಷಿ ಪದ್ಧತಿಗೆ ವಿರುದ್ಧವಾಗಿ ಕಟ್ಟಡಗಳ ನಿರ್ಮಾಣ: ಕೊಡಗಿನ ಭೌಗೋಳಿಕ ಚಿತ್ರಣವೇ ಬದಲು; ಕೃಷಿ ಭೂಮಿಗಳ ಮಾರಾಟದಿಂದ ಪರಿಸರಕ್ಕೆ ಧಕ್ಕೆ: ಅಮ್ಮತ್ತಿ ರೈತ ಸಂಘ ಆತಂಕ

ನವೆಂಬರ್ 7, 2026

ಗೂಂಡಾ ಕಾಯ್ದೆಯಡಿ ಕಳ್ಳತನ ಪ್ರಕರಣಗಳ ಆರೋಪಿ ಬಂಧನ; 25 ಕಳ್ಳತನ ಪ್ರಕರಣಗಳ ಆರೋಪಿಯನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ

ನವೆಂಬರ್ 6, 2026

ವಿರಾಜಪೇಟೆ ಕ್ಷೇತ್ರದಲ್ಲಿ ಕಾನೂನುಬಾಹಿರವಾಗಿ ಮತದಾನದ ಹಕ್ಕು ರದ್ದಾಗಿದ್ದರೆ ದಾಖಲೆ ಸಹಿತ ಸಾಬೀತುಪಡಿಸಿ: ಕಾಂಗ್ರೆಸ್‌ಗೆ ಬಿಜೆಪಿ ವಕ್ತಾರ ರಾಕೇಶ್ ದೇವಯ್ಯ ಸವಾಲು

ನವೆಂಬರ್ 6, 2026

ಕ್ರೀಡಾಕೂಟದಲ್ಲಿ ಸಾಧನೆ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಕೊಡಗಿನ ವಿದ್ಯಾರ್ಥಿಗಳು

ನವೆಂಬರ್ 6, 2026

ದೀಪಾವಳಿ ಹಬ್ಬಕ್ಕೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಿಂದ ಆಕರ್ಷಕ ಕೊಡುಗೆ

ನವೆಂಬರ್ 6, 2026

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಿಂಪಡೆಯಲು ವಿಮೆನ್ ಇಂಡಿಯಾ ಮೂವ್‌ಮೆಂಟ್ ಒತ್ತಾಯ

ನವೆಂಬರ್ 6, 2026

ತುಟ್ಟಿಭತ್ಯೆ ಶೇ.15.75ಕ್ಕೆ ಹೆಚ್ಚಳ: ರಾಜ್ಯ ಸರ್ಕಾರಕ್ಕೆ ಕೊಡಗು ಸರ್ಕಾರಿ ನೌಕರರ ಸಂಘದಿಂದ ಅಭಿನಂದನೆ ಸಿಎಂ, ಡಿಸಿಎಂ ಹಾಗೂ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರಿಗೆ ಅಭಿನಂದನೆ; ಸಲ್ಲಿಸಿದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್ ಎಂ.ಸಿ.

ನವೆಂಬರ್ 6, 2026

ಭಾಗಮಂಡಲ ವಸತಿ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ; ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 6, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.