ಚೆಟ್ಟಳ್ಳಿ, NEWS DESK ನ.9: ದೀಪಾವಳಿ ಹಬ್ಬದ ಪ್ರಯುಕ್ತ ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಈ ವರ್ಷವೂ ಲಕ್ಷ್ಮಿ ಪೂಜೆಯನ್ನು ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು.
ಬೆಳಿಗ್ಗೆ ಗಣಪತಿ ಹೋಮದೊಂದಿಗೆ ಪೂಜಾ ಕಾರ್ಯಕ್ರಮ ಆರಂಭಗೊಂಡಿದ್ದು, ಬಳಿಕ ಅರ್ಚಕರಾದ ಯೋಗೀಶ್ ಅವರು ಮಹಾಲಕ್ಷ್ಮಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪ ಅವರು ಎಲ್ಲರಿಗೂ ಒಳಿತಾಗಲಿ ಹಾಗೂ ಸಮೃದ್ಧಿ ನೆಲೆಸಲಿ ಎಂದು ಪ್ರಾರ್ಥಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದ ಬಲ್ಲಾರಂಡ ಮಣಿ ಉತ್ತಪ್ಪ, ಉಪಾಧ್ಯಕ್ಷರು, ಸಂಘದ ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಕೆ.ಎಸ್. ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
























