Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ. 9: ಪುಟ್ಟ ಕೊಡಗಿನ ಪರಿಸರದ ಸಾಮರ್ಥ್ಯವನ್ನು ಮೀರಿ ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಿದ್ದು, ಇದರಿಂದ ಇಲ್ಲಿನ ಸೂಕ್ಷ್ಮ ಪರಿಸರ ವ್ಯವಸ್ಥೆಯ ಮೇಲೆ ತೀವ್ರ ಒತ್ತಡ ಉಂಟಾಗುತ್ತಿದೆ. ಪ್ರವಾಸೋದ್ಯಮವನ್ನು ಮತ್ತಷ್ಟು ವಿಸ್ತರಿಸುವ ಬದಲು ನಿಯಂತ್ರಿತ ಹಾಗೂ ಜವಾಬ್ದಾರಿಯುತ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಎನ್ವಿರಾನ್‌ಮೆಂಟಲ್ ಅಂಡ್ ಹೆಲ್ತ್ ಫೌಂಡೇಷನ್ ಇಂಡಿಯಾದ ಗೌರವ ಕಾರ್ಯದರ್ಶಿ, ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆ ಮಿತಿಮೀರಿದ ಪ್ರವಾಸೋದ್ಯಮದಿಂದಾಗಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಜಿಲ್ಲೆಯ ಸೂಕ್ಷ್ಮ ಪರಿಸರ ವ್ಯವಸ್ಥೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಯ ದೃಷ್ಟಿಯಿಂದ ಪ್ರವಾಸಿಗರ ಸಂಖ್ಯೆಯನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ ಎಂದರು.

ಕೊಡಗು ಜಿಲ್ಲೆಯಲ್ಲಿ ಸುಮಾರು ಆರು ಲಕ್ಷ ಜನಸಂಖ್ಯೆಯಿದ್ದು, ವಾರ್ಷಿಕವಾಗಿ 40 ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಪ್ರವಾಸೋದ್ಯಮದಿಂದ ಸ್ಥಳೀಯ ಆರ್ಥಿಕತೆಗೆ ಕೆಲವು ಪ್ರಯೋಜನಗಳಿದ್ದರೂ, ಮಿತಿಮೀರಿದ ಪ್ರವಾಸೋದ್ಯಮದಿಂದ ಸಂಚಾರ ದಟ್ಟಣೆ, ಕಸದ ಸಮಸ್ಯೆ, ನೀರು ಸೇರಿದಂತೆ ನೈಸರ್ಗಿಕ ಸಂಪನ್ಮೂಲಗಳ ಮೇಲಿನ ಒತ್ತಡ ಹಾಗೂ ಪರಿಸರ ಮಾಲಿನ್ಯ ಹೆಚ್ಚಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದಕ್ಷಿಣ ಭಾರತದ ಕೋಟ್ಯಂತರ ಜನರ ಜೀವನಾಧಾರವಾಗಿರುವ ಕಾವೇರಿ ನದಿಯ ಪ್ರಮುಖ ಜಲಾನಯನ ಪ್ರದೇಶ ಕೊಡಗಾಗಿದೆ. ಇಂತಹ ಮಹತ್ವದ ಪರಿಸರ ಸೂಕ್ಷ್ಮ ಪ್ರದೇಶವನ್ನು ಪ್ರವಾಸೋದ್ಯಮದ ಹೆಸರಿನಲ್ಲಿ ಹಾಳುಗೆಡವಲು ಅವಕಾಶ ನೀಡಬಾರದು ಎಂದು ಹೇಳಿದರು.

ಹೊಸ ಹೋಟೆಲ್, ರೆಸಾರ್ಟ್‌ಗಳ ನಿರ್ಮಾಣಕ್ಕೆ ನಿರ್ಬಂಧ

ಜಿಲ್ಲೆಯಲ್ಲಿ ಹೊಸ ಹೋಟೆಲ್‌ಗಳು ಮತ್ತು ರೆಸಾರ್ಟ್‌ಗಳ ನಿರ್ಮಾಣಕ್ಕೆ ಪರವಾನಗಿ ನೀಡುವುದನ್ನು ಸ್ಥಗಿತಗೊಳಿಸಬೇಕು. ಈಗಾಗಲೇ ಹೋಂಸ್ಟೇಗಳ ಸಂಖ್ಯೆ ಮಿತಿಮೀರಿದ್ದು, ಅವುಗಳ ಮೇಲೆಯೂ ಸೂಕ್ತ ನಿಯಂತ್ರಣ ಹೇರಬೇಕಾಗಿದೆ ಎಂದು ಒತ್ತಾಯಿಸಿದರು.

ಆನ್‌ಲೈನ್ ಪಾಸ್ ವ್ಯವಸ್ಥೆ ಜಾರಿಗೆ ಸಲಹೆ

ಕರ್ನಾಟಕ ಪ್ರವಾಸೋದ್ಯಮ ಇಲಾಖೆಯು ರಾಜ್ಯದ ಎಲ್ಲ ಜಿಲ್ಲೆಗಳ ಪ್ರವಾಸಿ ತಾಣಗಳ ವಿವರಗಳನ್ನು ಒಳಗೊಂಡ ಅಧಿಕೃತ ವೆಬ್‌ಸೈಟ್ ರೂಪಿಸಬೇಕು. ಪ್ರವಾಸಿಗರು ತಾವು ಭೇಟಿ ನೀಡಲು ಉದ್ದೇಶಿಸಿರುವ ಜಿಲ್ಲೆ ಹಾಗೂ ಪ್ರವಾಸಿ ತಾಣವನ್ನು ಆಯ್ಕೆ ಮಾಡಿಕೊಂಡು ಆನ್‌ಲೈನ್ ಮೂಲಕ ಪ್ರವೇಶ ಪಾಸ್ ಪಡೆಯುವ ವ್ಯವಸ್ಥೆ ಜಾರಿಗೆ ತರಬೇಕು ಎಂದು ಸಲಹೆ ನೀಡಿದರು.

ಕೊಡಗಿನಂತಹ ಪ್ರವಾಸಿಗರ ಒತ್ತಡ ಹೆಚ್ಚಿರುವ ಜಿಲ್ಲೆಯಲ್ಲಿ ಪ್ರತಿ ಪ್ರವಾಸಿ ತಾಣಕ್ಕೆ ದಿನವೊಂದಕ್ಕೆ ಗರಿಷ್ಠ 150 ಪಾಸ್‌ಗಳನ್ನು ಮಾತ್ರ ವಿತರಿಸಬೇಕು. ಪ್ರತಿ ಪ್ರವಾಸಿಗರಿಗೆ 500 ರೂ. ಪ್ರವೇಶ ಶುಲ್ಕ ವಿಧಿಸಬೇಕು. ಇದರೊಂದಿಗೆ ನಾಲ್ಕು ಚಕ್ರದ ವಾಹನಗಳಿಗೆ ಹೆಚ್ಚುವರಿಯಾಗಿ 500 ರೂ. ಹಾಗೂ ವ್ಯಾನ್ ಮತ್ತು ಬಸ್‌ಗಳಿಗೆ 3,000 ರೂ. ಶುಲ್ಕ ನಿಗದಿಪಡಿಸಬೇಕು ಎಂದು ತಿಳಿಸಿದರು.

ಈ ಮೂಲಕ ಸಂಗ್ರಹವಾಗುವ ಆದಾಯದ ಒಂದು ಭಾಗವನ್ನು ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಅಥವಾ ಕೆಎಸ್‌ಟಿಡಿಸಿಗೆ ನೀಡಬೇಕು. ಉಳಿದ ಮೊತ್ತವನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ, ನಗರಸಭೆ ಅಥವಾ ಅರಣ್ಯ ಇಲಾಖೆಯ ಮೂಲಕ ಸ್ಥಳೀಯ ಪ್ರವಾಸಿ ತಾಣಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದರು.

ಸ್ವಚ್ಛತೆ ಮತ್ತು ನಿರ್ವಹಣೆಯ ಉದ್ದೇಶದಿಂದ ಪ್ರತಿ ಪ್ರವಾಸಿ ತಾಣವನ್ನು 15 ದಿನಗಳಿಗೊಮ್ಮೆ ಒಂದು ದಿನ ಮುಚ್ಚುವ ವ್ಯವಸ್ಥೆ ಜಾರಿಗೆ ತರಬೇಕು. ಆದರೆ, ಕೊಡಗಿನ ಸ್ಥಳೀಯರು ಧಾರ್ಮಿಕ ವಿಧಿವಿಧಾನಗಳು ಹಾಗೂ ಸಾಂಪ್ರದಾಯಿಕ ಆಚರಣೆಗಳಿಗಾಗಿ ಭಾಗಮಂಡಲ, ತಲಕಾವೇರಿ ಸೇರಿದಂತೆ ಪವಿತ್ರ ಸ್ಥಳಗಳಿಗೆ ಭೇಟಿ ನೀಡುವ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದಂತೆ ವಿಶೇಷ ಪ್ರವೇಶ ಅನುಮತಿ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮೂಲಸೌಕರ್ಯವಿಲ್ಲದ ಹೋಂಸ್ಟೇ, ರೆಸಾರ್ಟ್‌ಗಳ ವಿರುದ್ಧ ಕ್ರಮಕ್ಕೆ ಆಗ್ರಹ

ಸಂಸ್ಥೆಯ ಸದಸ್ಯ ಗೋಪಿನಾಥ್ ತಿಮ್ಮಯ್ಯ ಮಾತನಾಡಿ, ಮಿತಿಮೀರಿದ ಪ್ರವಾಸೋದ್ಯಮದಿಂದಾಗಿ ಸ್ಥಳೀಯರು ನೆಮ್ಮದಿ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯಲ್ಲಿ ರೆಸಾರ್ಟ್‌ಗಳು ಮತ್ತು ಹೋಂಸ್ಟೇಗಳು ಅಣಬೆಗಳಂತೆ ತಲೆ ಎತ್ತುತ್ತಿವೆ. ಬಹುತೇಕ ಹೋಂಸ್ಟೇ ಹಾಗೂ ರೆಸಾರ್ಟ್‌ಗಳಲ್ಲಿ ಪ್ರವಾಸಿಗರಿಗೆ ಅಗತ್ಯವಾದ ಮೂಲಸೌಕರ್ಯಗಳಿಲ್ಲ. ಹಲವು ಕಡೆಗಳಲ್ಲಿ ಪ್ರವಾಸಿಗರಿಂದ ದುಬಾರಿ ದರ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಅಲ್ಲದೆ, ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ಬಾಡಿಗೆ ಬೈಕ್‌ಗಳಲ್ಲಿ ಅತಿವೇಗವಾಗಿ ಸಂಚರಿಸುತ್ತಿರುವುದು ಕಂಡುಬರುತ್ತಿದೆ. ಇಂತಹ ಪ್ರವೃತ್ತಿಗಳಿಗೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಸದಸ್ಯರಾದ ಶಿವಶಂಕರ್, ಶ್ಯಾಂ ಬೋಪಯ್ಯ ಹಾಗೂ ಫ್ರಾಂಕ್ಲಿನ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಮದಲಾಪುರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಸಂಕಲ್ಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ಕುಶಾಲನಗರ ಸರ್ಕಾರಿ ಪಿಯೂ ಕಾಲೇಜಿನಲ್ಲಿ ಹಸಿರು ದೀಪಾವಳಿ ಆಚರಣೆ

ನವೆಂಬರ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.9: ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಇಕೋ ಕ್ಲಬ್, ಭಾರತ್ ಸ್ಕೌಟ್ಸ್ ಮತ್ತು…

ಮಿತಿಮೀರಿ ಪ್ರವಾಸಿಗರ ಆಗಮನ: ಸೂಕ್ಷ್ಮ ಪರಿಸರ ಕೊಡಗಿನ ಮೇಲೆ ಒತ್ತಡ – ನಿವೃತ್ತ ಕರ್ನಲ್ ಸಿ.ಪಿ. ಮುತ್ತಣ್ಣ ಕಳವಳ

ನವೆಂಬರ್ 9, 2026

ಪೆಟ್ರೋಲ್‌ಗೆ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥನಾಲ್ ಮಿಶ್ರಣ: ಕೇಂದ್ರದ ವಿರುದ್ಧ ಎಂ. ಲಕ್ಷ್ಮಣ್ ಆರೋಪ

ನವೆಂಬರ್ 9, 2026

ನ.17ರಂದು ಕೊಡಗು ಜಿಲ್ಲಾ ನಿವೃತ್ತ ಪೊಲೀಸ್ ಕ್ಷೇಮಾಭಿವೃದ್ಧಿ ಸಂಘದ ವಾರ್ಷಿಕ ಮಹಾಸಭೆ

ನವೆಂಬರ್ 9, 2026

7ನೇ ಹೊಸಕೋಟೆಯಲ್ಲಿ ಬೃಹತ್ ರಕ್ತದಾನ ಶಿಬಿರ: 40 ಮಂದಿ ರಕ್ತದಾನ

ನವೆಂಬರ್ 9, 2026

ನ.12ರಂದು ಮಡಿಕೇರಿಯ ಶ್ರೀ ವಿಜಯ ವಿನಾಯಕ ದೇವಾಲಯದ 28ನೇ ವಾರ್ಷಿಕೋತ್ಸವ

ನವೆಂಬರ್ 9, 2026

ವಿವಿಧ ವೇದಿಕೆಗಳಲ್ಲಿ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ತಂಡದ ಸಾಧನೆಯ ಮೆರುಗು

ನವೆಂಬರ್ 9, 2026

ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮಿ ಪೂಜೆ

ನವೆಂಬರ್ 9, 2026

ಬೆಕ್ಕೆ ಸುಡ್ಲೂರಿನಲ್ಲಿ ಪ್ರಥಮ ಬಾರಿಗೆ ‘ಒತೋರ್ಮೆ’ ಸಂಭ್ರಮ; ನೂತನ ಮುಖ್ಯದ್ವಾರ, ಬಸ್ ನಿಲ್ದಾಣ ಉದ್ಘಾಟನೆ; ಕ್ರೀಡಾ-ಸಾಂಸ್ಕೃತಿಕ ಕಾರ್ಯಕ್ರಮಗಳ ಮೆರುಗು

ನವೆಂಬರ್ 9, 2026

ರಾಜ್ಯಮಟ್ಟದ ಅಥ್ಲೆಟಿಕ್ಸ್ ರಿಲೇ ಸ್ಪರ್ಧೆಯಲ್ಲಿ ಜಿಲ್ಲೆಗೆ 7ನೇ ಸ್ಥಾನ: ಕಾವೇರಿ ಶಾಲೆಯ ವಿದ್ಯಾರ್ಥಿನಿಯರ ಸಾಧನೆ

ನವೆಂಬರ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.